ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅವೈಜ್ಞಾನಿಕ ಜಾತಿಗಣತಿ ಸಿದ್ದಪಡಿಸಲು 165 ಕೋಟಿ ಪೋಲು ಮಾಡಿರುವ ಸಿಎಂ ವಿರುದ್ಧ ಪ್ರಕರಣ ದಾಖಲಿಸಬೇಕು: ಬಿಜೆಪಿ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಅವೈಜ್ಞಾನಿಕ ಜಾತಿಗಣತಿ ಸಿದ್ದಪಡಿಸಲು 165 ಕೋಟಿ ಪೋಲು ಮಾಡಿರುವ ಸಿಎಂ ವಿರುದ್ಧ ಪ್ರಕರಣ ದಾಖಲಿಸಬೇಕು: ಬಿಜೆಪಿ

ಕನ್ನಡಿಗರ ಶ್ರಮದ ತೆರಿಗೆ ಹಣವನ್ನು ಬೇಕಾಬಿಟ್ಟಿಯಾಗಿ ಪೋಲು ಮಾಡುವುದರಲ್ಲಿ ಕಾಂಗ್ರೆಸ್ಸಿಗರು ಸದಾ ಸಿದ್ದ”ಹಸ್ತ”ರು!! ಜನರ ಬೇಕು ಬೇಡಗಳನ್ನು ಕಡೆಗಣಿಸಿ, ತಮ್ಮ ಸ್ವಾರ್ಥಕ್ಕಾಗಿ ಏನು ಬೇಕಾದರೂ ಮಾಡಲು ಮುಂದಾಗುತ್ತದೆ ಎಂಬುದಕ್ಕೆ ಸಿಎಂ ಸಿದ್ದರಾಮಯ್ಯ ಅವರು 2015 ರಲ್ಲಿ ಮಾಡಿಸಿದ್ದ ಅವೈಜ್ಞಾನಿಕ ಜಾತಿಗಣತಿ ವರದಿಯೇ ಸಾಕ್ಷಿ ಎಂದು ಬಿಜೆಪಿ ಹೇಳಿದೆ.

ಯಾವುದೇ ಪೂರ್ವಾಪರ ಸಿದ್ದತೆ ನಡೆಸದೆ, ಸಾಧಕ-ಭಾಧಕಗಳ ಬಗ್ಗೆ ಚರ್ಚಿಸದೆ, ಏಕಾಏಕಿ ಜಾತಿಗಣತಿ ನಡೆಸುತ್ತೇವೆ ಎಂದು ಘೋಷಿಸಿದ್ದು ಸಿಎಂ ಸಿದ್ದರಾಮಯ್ಯ ಅವರ ದುರ್ಬಲ ಆಡಳಿತದ ಸುಸ್ಪಷ್ಟ ನಿದರ್ಶನ.

ಜಾತಿಗಣತಿಯನ್ನು ಪ್ರತಿ ಮನೆ-ಮನೆಗೆ ಹೋಗಿ ಅಲ್ಲಿ ಪ್ರತಿಯೊಬ್ಬರಿಂದ ಅವರ ಜಾತಿ ಯಾವುದು ಎಂದು ಕೇಳಿ, ಬಳಿಕ ಅವರ ಮಾಹಿತಿಯನ್ನು ಸಂಗ್ರಹಿಸಿಕೊಳ್ಳಬೇಕಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರ ಇದಕ್ಕೆ ಸಂಪೂರ್ಣ ತದ್ವಿರುದ್ಧವಾಗಿ ವರ್ತಿಸಿ, ಜಾತಿಗಣತಿ ಎಂಬ ಸುಳ್ಳಿನ ವರದಿಯನ್ನು ಎಸಿ ರೂಮಿನಲ್ಲಿ ಕೂತು ತಯಾರಿಸಿತ್ತು.

ಜಾತಿಗಣತಿಯನ್ನು ನಡೆಸಲು ನಿಮ್ಮ ಮನೆಗೆ ಸರ್ಕಾರದಿಂದ ಯಾರಾದರೂ ಪ್ರತಿನಿಧಿಗಳು ಬಂದಿದ್ದರಾ ಎಂಬ ಪ್ರಶ್ನೆಗೆ ಕಾಂಗ್ರೆಸ್ಸಿನ ಹಿರಿಯ ನಾಯಕರಾದ ಶ್ಯಾಮನೂರು ಶಿವಶಂಕರಪ್ಪ , ಡಿ.ಕೆ.ಶಿವಕುಮಾರ್‌ ಸೇರಿದಂತೆ ಬಹುತೇಕ ನಾಯಕರ ಉತ್ತರ “ ಯಾರೂ ಬಂದಿಲ್ಲ” ಎನ್ನುವುದಾಗಿತ್ತು ಎಂದು ಪಕ್ಷ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಯಾರ ಮನೆಗೂ ಹೋಗದೆ , ಯಾರ ಬಳಿಯೂ ದಾಖಲೆ ಕೇಳದೆ ನಡೆಸಿದ ಜಾತಿಗಣತಿ ಅದು ಹೇಗೆ ವೈಜ್ಞಾನಿಕವಾಗುತ್ತದೆ ಎಂಬುದಕ್ಕೆ ಸಿದ್ದರಾಮಯ್ಯ ಮತ್ತವರ ವಂಧಿಮಾಗದರು ಇಲ್ಲಸಲ್ಲದ ಸಮಜಾಯಿಷಿ ನೀಡಿದ್ದರು. ಆದರೆ ಕೊನೆಗೂ “ಸತ್ಯಮೇವ ಜಯತೇ” ಎಂಬಂತೆ ತಮ್ಮ ಸರ್ಕಾರ ಈ ಹಿಂದೆ ನಡೆಸಿದ ಜಾತಿಗಣತಿ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದ್ದು ಮತ್ತೊಮ್ಮೆ ಜಾತಿಗಣತಿ ನಡೆಸುತ್ತೇವೆ ಎಂದು ಸ್ವತಃ ಸಿದ್ದರಾಮಯ್ಯ ಅವರೆ ದೆಹಲಿಯಲ್ಲಿ ತಮ್ಮ ನಾಯಕರ ಮುಂದೆ ಹೇಳಿಕೆ ನೀಡಿದ್ದಾರೆ.

ಆದರೆ ಇವರ ಸ್ವಾರ್ಥಕ್ಕಾಗಿ ಜಾತಿಗಣತಿಯನ್ನು ನಡೆಸಲು ಕಾಂತರಾಜ್‌ ಆಯೋಗಕ್ಕೆ ಹಾಗೂ ಇನ್ನಿತರ ಕೆಲಸಗಳಿಗಾಗಿ ಸರ್ಕಾರದಿಂದ ಒಟ್ಟು ₹165 ಕೋಟಿ ಖರ್ಚು ಮಾಡಲಾಗಿದೆ ಎಂದು ವರದಿಗಳು ಹೇಳುತ್ತಿವೆ.

ಜಾತಿಗಣತಿ ವರದಿ ಅವೈಜ್ಞಾನಿಕ ಎಂದ ಮೇಲೆ ಕನ್ನಡಿಗರ ಶ್ರಮದ ₹165 ಕೋಟಿ ತೆರಿಗೆ ಹಣವನ್ನು ಪೋಲು ಮಾಡಿರುವುದು ಎಷ್ಟರ ಮಟ್ಟಿಗೆ ಸರಿ..?? ಈ ₹165 ಕೋಟಿಯನ್ನು ಸಾರ್ವಜನಿಕ ಹಿತಾಸಕ್ತಿಗೆ ಬಳಸದೆ ಅವೈಜ್ಞಾನಿಕ ಜಾತಿಗಣತಿ ಸಿದ್ದಪಡಿಸಲು ಪೋಲು ಮಾಡಿರುವ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ನಾವು ಆಗ್ರಹಿಸುತ್ತೇವೆ ಎಂದು ಬಿಜೆಪಿ ಹೇಳಿದೆ.

ಅದಲ್ಲದೆ 2027ಕ್ಕೆ ಕೇಂದ್ರ ಸರ್ಕಾರವೇ ಜಾತಿಗಣತಿ ನಡೆಸುತ್ತಿದ್ದು ಈಗ ಮತ್ತೊಮ್ಮೆ ರಾಜ್ಯ ಸರ್ಕಾರ ಜಾತಿಗಣತಿ ನಡೆಸಿ, ಮತ್ತೊಂದಿಷ್ಟು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುವ ಬದಲು, ತನ್ನ ಆಡಳಿತದತ್ತ ಗಮನ ಹರಿಸಲಿ ಎಂದು ನಾವು ಒತ್ತಾಯಿಸುತ್ತೇವೆ ಎಂದು ಆಗ್ರಹಿಸಿದೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು