ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಆನಂದ ಮಾಮನಿಯವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ :ಸಿಎಂ ಬೊಮ್ಮಾಯಿ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಆನಂದ ಮಾಮನಿಯವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ :ಸಿಎಂ ಬೊಮ್ಮಾಯಿ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಧಾನಸಭಾ ಉಪಸಭಾಧ್ಯಕ್ಷರಾದ ಆನಂದ ಚಂದ್ರಶೇಖರ ಮಾಮನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆರ್.ಟಿ. ನಗರ ನಿವಾಸದಲ್ಲಿ ಆನಂದ ಮಾಮನಿಯವರ ಬಗ್ಗೆ ಮಾತನಾಡಿದ ಸಿಎಂ.ಬೊಮ್ಮಾಯಿಯವರು, ʼವಿಧಾನಸಭೆ ಉಪಾಧ್ಯಕ್ಷರಾಗಿದ್ದ ಆನಂದ ಮಾಮನಿ ಅವರ ನಿಧನದಿಂದ ಉತ್ತಮ ಜನಪ್ರತಿನಿಧಿಯನ್ನು ಹಾಗೂ ಕರ್ನಾಟಕ ರಾಜ್ಯ ಬೆಳೆಯುತ್ತಿರುವ ನಾಯಕನನ್ನು ಕಳೆದುಕೊಂಡಂತಾಗಿದೆʼ ಎಂದು ಮಾಧ್ಯಮಗಳ ಮುಂದೆ ತಿಳಿಸಿದರು.

ʼವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ಅವರ ನಿಧನ ದುರ್ದೈವದ ಸಂಗತಿ. ಅವರ ಪಾರ್ಥೀವ ಶರೀರ ಅವರ ಸ್ವಕ್ಷೇತ್ರವಾದ ಸವದತ್ತಿಗೆ ಒಯ್ಯಲಾಗಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮಕ್ರಿಯೆಯನ್ನು ನೆರವೇರಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಸೇರಿದಂತೆ ಹಿರಿಯ ನಾಯಕರೂ ಭಾಗವಹಿಸಲು ತೆರಳುತ್ತಿರುವುದಾಗಿʼ ತಿಳಿಸಿದರು.

ʼಆನಂದ ಮಾಮನಿಯವರು ಅತ್ಯಂತ ಕ್ರೀಯಾಶೀಲ ವ್ಯಕ್ತಿಯಾಗಿದ್ದು, ಜನರ ಬಗ್ಗೆ ಅಪಾರವಾದ ಕಾಳಜಿಯನ್ನು ಹೊಂದಿದ್ದರು. ವಿಶೇಷ ರೈತರು, ನೀರಾವರಿ ಯೋಜನೆಗಳ ಬಗ್ಗೆ ವಿಶೇಷ ಆಸ್ಥೆ ಹೊಂದಿದ್ದರು. ಅವರ ಕ್ಷೇತ್ರದಲ್ಲಿ ಮಲಪ್ರಭಾ ನೀರಾವರಿ ಯೋಜನೆಯಡಿ ಎಂಟು ಲಿಫ್ಟ್ ಗೇಟ್ಗಳನ್ನು ಪುನ: ನಿರ್ಮಿಸುವಲ್ಲಿ ಮುಖ್ಯಪಾತ್ರ ವಹಿಸಿದ್ದರು. ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಸ್ಪಷ್ಟವಾದ ನಿಲುವನ್ನು ಹೊಂದಿದ್ದರು. ಮಾಮನಿ ಅತ್ಯಂತ ಕ್ರೀಯಾಶೀಲ ವ್ಯಕ್ತಿʼ ಎಂದು ಮಾತನಾಡಿದರು.

ʼಮೊದಲ ಬಾರಿಗೆ ಶಾಸಕರಾಗಿದ್ದ ಅವಧಿಯಿಂದಲೇ ಕ್ಷೇತ್ರದ ಏಳಿಗೆ ಬಗೆಗಿನ ಅವರ ಚಿಂತನೆ ಎಲ್ಲರಿಗೂ ಮಾದರಿಯಾಗಿತ್ತು. ರಾಜಕಾರಣ ಕ್ಷೇತ್ರದಲ್ಲಿಉಜ್ವಲವಾದ ಭವಿಷ್ಯವನ್ನು ಹೊಂದಿದ್ದರು.ಅಗಾಧವಾದ ಆಡಳಿತದ ಅನುಭವವನ್ನೂ ಹೊಂದಿರುವುದು ನಮಗೆಲ್ಲಾ ದಿಗ್ಭ್ರಮೆಯ ವಿಷಯವಾಗಿದೆ. ವಿಧಾನಸಭೆಯ ಉಪಾಧ್ಯಕ್ಷರಾಗಿ ಉತ್ತಮವಾಗಿ ಕಲಾಪಗಳನ್ನು ನಿರ್ವಹಿಸುತ್ತಿದ್ದರುʼ ಎಂದು ಮಾಮನಿಯವರ ವ್ಯಕ್ತಿತ್ವದ ಬಗ್ಗೆ ತಮ್ಮ ಅಭಿಪ್ರಾಯ  ಹಂಚಿಕೊಂಡಿದ್ದಾರೆ.

ʼʼಆನಂದ ಮಾಮನಿಯವರು ಸಣ್ಣ ವಯಸ್ಸಿನಲ್ಲಿಯೇ ಅನಾರೋಗ್ಯದಿಂದ ನಮ್ಮನ್ನು ಅಗಲಿರುವುದು ಆಘಾತ ತರುವಂತಹ ಸಂಗತಿ. ಲಿವರ್ ಸಮಸ್ಯೆ ಕ್ಯಾನ್ಸರ್ ಆಗಿದ್ದು, ಹೆಚ್ಚಿನ ಚಿಕಿತ್ಸೆಗೆ ಚೆನ್ನೈಗೆ ತೆರಳಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಆನಂದ ಮಾಮನಿಯವರ ತಂದೆಯವರೂ ಸಹ ವಿಧಾನಸಭೆಯ ಉಪಾಧ್ಯಕ್ಷರಾಗಿದ್ದಾಗಲೇ ಹೃದಾಯಾಘಾತದಿಂದ ಅಸುನೀಗಿದ್ದರು. ಅವರ ಅಣ್ಣನವರೂ ಸಣ್ಣ ವಯಸ್ಸಿನಲ್ಲಿಯೇ ಸಾವನ್ನಪ್ಪಿದ್ದರು.ಇವರ ಸಂಬಂಧಿಕರಾದ ಮಾಜಿ ಶಾಸಕ ರಾಜಣ್ಣ ಮಾಮನಿಯವರೂ ಸಹ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಅವರ ಕುಟುಂಬ ಒಂದರ ನಂತರ ಒಂದು ಆಘಾತವನ್ನು ಎದುರಿಸುತ್ತಿದೆ. ಅವರ ಅಗಲಿಕೆಯಿಂದ ರಾಜ್ಯಕ್ಕೆ ಹಾಗೂ ವೈಯಕ್ತಿಕವಾಗಿ ನನಗೂ ಹಾನಿಯಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದು:ಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿʼ ಸಿಎಂ ಬೊಮ್ಮಾಯಿ ತಿಳಿಸಿದರು.

https://youtu.be/8lPQejgs2v4
PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು