ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಆಪ್ ನಿಯೋಗದಿಂದ ಕನ್ನಡ ಕಟ್ಟಾಳು ಮ. ರಾಮಮೂರ್ತಿ ಪತ್ನಿ ಕಮಲಮ್ಮನವರ ಭೇಟಿ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಆಪ್ ನಿಯೋಗದಿಂದ ಕನ್ನಡ ಕಟ್ಟಾಳು ಮ. ರಾಮಮೂರ್ತಿ ಪತ್ನಿ ಕಮಲಮ್ಮನವರ ಭೇಟಿ

ಕನ್ನಡದ ಕಟ್ಟಾಳು, ಕನ್ನಡ ಧ್ವಜದ ನಿರ್ಮಾತೃ, ಕನ್ನಡ ಚಳುವಳಿಯ ಧೀಮಂತ ನಾಯಕ ದಿವಂಗತ. ಮ. ರಾಮಮೂರ್ತಿ ರವರ ಧರ್ಮಪತ್ನಿ 101 ವರ್ಷದ ಕಮಲಮ್ಮನವರನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ನಗರದ ಸೇವಾ ಕ್ಷೇತ್ರ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಭೇಟಿ ಮಾಡಿ ಆರೋಗ್ಯವನ್ನು ವಿಚಾರಿಸಿ ಆಶೀರ್ವಾದ ಪಡೆದುಕೊಂಡರು.

ಇದೇ ಸಂದರ್ಭದಲ್ಲಿ ಕಮಲಮ್ಮನವರಿಗೆ ಗೌರವ ಪೂರ್ವಕವಾಗಿ ಸನ್ಮಾನಿಸಿ, ಸಹಾಯಧನದ ಚೆಕ್ಕನ್ನು ವಿತರಿಸಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು “ಸಾಲುಮರದ ತಿಮ್ಮಕ್ಕನವರಿಗೆ ನೀಡಿರುವ ಗೌರವ ಸವಲತ್ತುಗಳ ರೀತಿಯಲ್ಲಿಯೇ ರಾಮಮೂರ್ತಿಯವರೊಂದಿಗೆ ಜೊತೆಯಾಗಿ ಕನ್ನಡ ಹೋರಾಟವನ್ನು ಕಟ್ಟಿದ ಅವರ ಪತ್ನಿ ಕಮಲಮ್ಮನವರನ್ನೂ ರಾಜ್ಯ ಸರ್ಕಾರವು ಸಾಂಸ್ಕೃತಿಕ ರೂವಾರಿಗಳನ್ನಾಗಿ ನೇಮಿಸಿಕೊಂಡು ಗೌರವಪೂರ್ವಕವಾಗಿ ನಡೆಸಿಕೊಳ್ಳಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ತುರ್ತಾಗಿ ಈ ವಿಷಯದತ್ತ ಗಮನಹರಿಸಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಅವರು ಸೇವಾ ಕ್ಷೇತ್ರ ಆಸ್ಪತ್ರೆಯ ಸಾಮಾಜಿಕ ಕಾರ್ಯಗಳನ್ನು ಶ್ಲಾಘಿಸಿದರು. ಆಸ್ಪತ್ರೆಯ ಮುಖ್ಯಸ್ಥ ಡಾ. ವಿಜಯ್, ಪಕ್ಷದ ಪ್ರಧಾನ ಕಾರ್ಯದರ್ಶಿ ಸಂಚಿತ್ ಸೆವಾನಿ, ಮುಖಂಡರುಗಳಾದ ಡಾ. ರಮೇಶ್ ಬೆಳ್ಳಂಕೊಂಡ, ದರ್ಶನ್ ಜೈನ್, ಸುಷ್ಮಾ ವೀರ್ ಸೇರಿದಂತೆ ಅನೇಕ ಮುಖಂಡರುಗಳು ಭಾಗವಹಿಸಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು