ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೇವಲ 1 ಕಿಮೀ ಉದ್ದದ ರಸ್ತೆಗೆ 15 ಕೋಟಿ ರೂ. ಖರ್ಚು : ವೈಟ್ ಟಾಪಿಂಗ್ ರಸ್ತೆಗಳ ತನಿಖೆಗೆ ಎಎಪಿ ಆಗ್ರಹ

PPeepal Media Desk

Peepal Media Desk ರಾಜ್ಯ

• 2 ನಿಮಿಷದ ಓದು

ಕೇವಲ 1 ಕಿಮೀ ಉದ್ದದ ರಸ್ತೆಗೆ 15 ಕೋಟಿ ರೂ. ಖರ್ಚು : ವೈಟ್ ಟಾಪಿಂಗ್ ರಸ್ತೆಗಳ ತನಿಖೆಗೆ ಎಎಪಿ ಆಗ್ರಹ

ಬೆಂಗಳೂರು: ನಗರದ ಹಲಸೂರು ಕೆರೆ ಬಳಿಯ ಕೆನ್ಸಿಂಗ್ಟನ್ ಜಂಕ್ಷನ್ ಸಮೀಪ ವೈಟ್ ಟಾಪಿಂಗ್ ರಸ್ತೆ ಏಕಾಏಕಿ ಕುಸಿದು ದೊಡ್ಡ ಗುಂಡಿ ನಿರ್ಮಾಣವಾಗಿದ್ದು, ಈ ಗುಂಡಿಗೆ ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪೂಜೆ ನೆರವೇರಿಸುವ ಮೂಲಕ ಮಹಾ ಗುಂಡಿಗೆ ಮಹಾಪೂಜೆ ಪ್ರತಿಭಟನೆ ನಡೆಸಿ, ನಂತರ
ಬ್ರಾಂಡ್ ಬೆಂಗಳೂರಿಗೆ ಧಿಕ್ಕಾರ ಕೂಗಿದರು.

ಪೂಜೆ ಸಲ್ಲಿಸಿ, ಘೋಷಣೆ ಕೂಗಿದ ಬಳಿಕ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಅವರು, ವೈಟ್ ಟಾಪಿಂಗ್ ಹೆಸರಿನಲ್ಲಿ ದೊಡ್ಡ ಭ್ರಷ್ಟಾಚಾರ ನಡೆಯುತ್ತಿದೆ. ಇದು ರಾಜಕಾರಣಿಗಳಿಗೆ ಚಿನ್ನದ ಮೊಟ್ಟೆಯಿಡುವ ಕೋಳಿಯಾಗಿದೆ. ಕೇವಲ ಒಂದು ಕಿಮೀ ಉದ್ದದ ರಸ್ತೆ ನಿರ್ಮಾಣಕ್ಕೆ 15 ಕೋಟಿ ರೂ. ಖರ್ಚು ಮಾಡಲಾಗಿದೆ. ಇಷ್ಟು ಹಣ ಖರ್ಚು ಮಾಡಿದರೂ, ರಸ್ತೆ ಕುಸಿದಿದೆ. ಸಾಮಾನ್ಯ ಟಾರ್ ರಸ್ತೆ ಹಾಕಿದ್ದಕ್ಕಿಂತ ಇದು ಕೆಟ್ಟದಾಗಿದೆ ಎಂದು ದೂರಿದರು.

ಬೆಂಗಳೂರಿನಲ್ಲಿ ನಿರ್ಮಿಸಲಾಗಿರುವ ವೈಟ್ ಟಾಪಿಂಗ್ ರಸ್ತೆಗಳ ಆಡಿಟ್ ಆಗಬೇಕು. ಆಗ ಮಾತ್ರ ಇದರಲ್ಲಿ ಎಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಗೊತ್ತಾಗುತ್ತದೆ. ಈ ರಸ್ತೆಯನ್ನು ನಿರ್ಮಿಸಿ 9 ತಿಂಗಳಾಗಿದ್ದು, ಈಗಾಗಲೇ ಗುಂಡಿ ಬಿದ್ದಿದೆ ಎಂದರೆ ಎಷ್ಟು ಭ್ರಷ್ಟಾಚಾರ ಆಗಿದೆ ಎಂಬುದು ಗೊತ್ತಾಗುತ್ತದೆ ಎಂದು ಸಂಶಯ ವ್ಯಕ್ತಪಡಿಸಿದರು .

ವೈಟ್ ಟಾಪಿಂಗ್ ರಸ್ತೆ ಕುಸಿದಿದ್ದು, ಯಾವುದೇ ನಾಗರಿಕರನ್ನು ಬಲಿ ತೆಗೆದುಕೊಳ್ಳದೆ ಅನುಕಂಪ ತೋರಿರುವ ಮಹಾ ಗುಂಡಿಗೆ ಮಹಾಪೂಜೆ ಮಾಡುವ ಮೂಲಕ ಕೃತಜ್ಞತೆಯನ್ನು ಸಲ್ಲಿಸಿದ್ದೇವೆ ಎಂದು ವ್ಯಂಗ್ಯವಾಡಿದರು.

ಬೆಂಗಳೂರು ಉಸ್ತುವಾರಿ ಡಿಕೆ ಶಿವಕುಮಾರ್, ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ಕೆಟ್ಟ ರಸ್ತೆಗಳನ್ನು ನಿರ್ಮಿಸಿ ಭ್ರಷ್ಟಾಚಾರ ಮಾಡುತ್ತಿರುವ ಸರ್ಕಾರಕ್ಕೆ ಧಿಕ್ಕಾರ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಅವರು. ಶಾಸಕ ರಿಜ್ವಾನ್ ಅರ್ಷದ್ ನಾಪತ್ತೆಯಾಗಿದ್ದು, ಹುಡುಕಿಕೊಡಿ ಎಂದು ಘೋಷಣೆ ಕೂಗುವ ಮೂಲಕ ಟೀಕಿಸಿದರು.

ನಾವು ಈ ವಿಚಾರವನ್ನು ಇಲ್ಲಿಗೆ ಸುಮ್ಮನೆ ಬಿಡುವುದಿಲ್ಲ. ಲೋಕಾಯುಕ್ತಕ್ಕೆ ದೂರು ನೀಡುತ್ತೇವೆ. ಕಳೆದ 5-10 ವರ್ಷಗಳಲ್ಲಿ ಬೆಂಗಳೂರಿನಲ್ಲಿ ವೈಟ್ ಟಾಪಿಂಗ್, ಸ್ಮಾರ್ಟ್ ಸಿಟಿಯಡಿ ಮಾಡಿರುವ ರಸ್ತೆಗಳ ಆಡಿಟ್ ಆಗಬೇಕು. ಲೋಕಾಯುಕ್ತರು ಸ್ವತಂತ್ರವಾಗಿ ತನಿಖೆ ನಡೆಸಿ, ಗುತ್ತಿಗೆದಾರರನ್ನು ಶಾಶ್ವತವಾಗಿ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿದರು.

ಬಿಬಿಎಂಪಿ ಕಮಿಷನರ್‌ರನ್ನು ಭೇಟಿ ಮಾಡುತ್ತೇವೆ. ಬೇರೆ ವೈಟ್ ಟಾಪಿಂಗ್ ಕಾಮಗಾರಿಗೆ ಅನುಮತಿ ನೀಡುವ ಮೊದಲು ಈಗಾಗಲೇ ಪೂರ್ಣಗೊಂಡಿರುವ ವೈಟ್ ಟಾಪಿಂಗ್ ರಸ್ತೆಗಳ ಗುಣಮಟ್ಟ ಪರೀಕ್ಷೆ ಮಾಡಿಸಲಿ. ಗುಂಡಿ ಬಿದ್ದ ರಸ್ತೆಯನ್ನು ನಿರ್ಮಿಸಿದ ಗುತ್ತಿಗೆದಾರರನ್ನು ಬ್ಯಾನ್ ಮಾಡಬೇಕು. ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುವವರೆಗೂ ಈ ರೀತಿ ಭ್ರಷ್ಟಾಚಾರ ನಡೆಯುತ್ತಿರುತ್ತದೆ ಎಂದು ಎಚ್ಚರಿಸಿದರು.

ವೈಟ್‌ ಟಾಪಿಂಗ್‌ ಮಾಡುವ ಮೊದಲು ಈ ರಸ್ತೆ ಚನ್ನಾಗಿತ್ತು. ದುಡ್ಡು ಮಾಡಲು ಇಲ್ಲಿ ವೈಟ್ ಟಾಪಿಂಗ್ ಮಾಡಲಾಗಿದ್ದು, 15 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದರಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮೋಹನ್ ದಾಸರಿ ಆರೋಪಿಸಿದರು .

ಗುಂಡಿ ಬೀಳುವುದರಲ್ಲಿ ನಮ್ಮ ಸಮಸ್ಯೆ ಇಲ್ಲ ಎಂದು ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್‌ಎಸ್‌ಬಿ ಅಧಿಕಾರಿಗಳು ಹೇಳುತ್ತಾರೆ. ರಾತ್ರೋ ರಾತ್ರಿ ಜಲ್ಲಿ ಹಾಕಿ ಮುಚ್ಚಲಾಗಿದೆ. ಆದರೆ, ಈ ಸಮಸ್ಯೆ ಉಂಟಾಗಲು ಕಾರಣವೇನು ಎಂದು ಪ್ರಶ್ನಿಸಿದರು. ಗುಣಮಟ್ಟ ಪರೀಕ್ಷೆ ನಡೆಸಿದ್ದರೆ ಇದು ಬಯಲಾಗುತ್ತಿತ್ತು. ಈಗ ಸೂಕ್ತವಾದ ತನಿಖೆ ನಡೆಸಲಿ. ರಾತ್ರಿ ಯಾರು ಓಡಾಡದಿರುವುದು ಅದೃಷ್ಟ. ಅಕಸ್ಮಾತ್ ಯಾರಾದರೂ ಬಿದ್ದಿದ್ದರೆ ಜೀವವೇ ಹೋಗುತ್ತಿತ್ತು ಎಂದು ಆತಂಕ ವ್ಯಕ್ತಪಡಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಂಗ್ರೆಸ್, ಬಿಜೆಪಿ ಅಣ್ಣ ತಮ್ಮಂದಿರಂತೆ ಇದ್ದು, ಎಲ್ಲರೂ ಹಂಚಿಕೊಂಡು ತಿನ್ನುತ್ತಿದ್ದಾರೆ. ಬಿಬಿಎಂಪಿ ಚುನಾವಣೆ ಮುಂದೂಡಲು ಕಾರಣವೇನು, ಬಿಜೆಪಿ, ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡು ಭ್ರಷ್ಟಾಚಾರ ಮಾಡುತ್ತಿವೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಫರೀದುದ್ದೀನ್ ಶರೀಫ್ , ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ,ಮಹಿಳಾ ಮುಖಂಡೆ ಮರಿಯ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು