ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರೈಲ್ವೆ ಇಲಾಖೆಯ ಎಲ್ಲ ಪರೀಕ್ಷೆಗಳನ್ನು ಕನ್ನಡದಲ್ಲೂ ನಡೆಸಲು ಎಎಪಿ ಆಗ್ರಹ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ರೈಲ್ವೆ ಇಲಾಖೆಯ ಎಲ್ಲ ಪರೀಕ್ಷೆಗಳನ್ನು ಕನ್ನಡದಲ್ಲೂ ನಡೆಸಲು ಎಎಪಿ ಆಗ್ರಹ

ಬೆಂಗಳೂರು: ರೈಲ್ವೆ ಇಲಾಖೆಯ ಉನ್ನತ ದರ್ಜೆಯ ಹುದ್ದೆಗಳಿಗೆ ಇಂಗ್ಲಿಷ್‌ ಹಾಗೂ ಹಿಂದಿಯಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿರುವುದಕ್ಕೆ ಆಮ್‌ ಆದ್ಮಿ ಪಾರ್ಟಿ ಆಕ್ರೋಶ ವ್ಯಕ್ತಪಡಿಸಿದ್ದು, ಕನ್ನಡದಲ್ಲಿ ಕೂಡ ಪರೀಕ್ಷೆ ನಡೆಸಬೇಕು ಎಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಆಗ್ರಹಿಸಿದರು.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್‌ ವಿ ಸದಂ ಅವರು “ರೈಲ್ವೆ ಇಲಾಖೆಯ ಎಲ್ಲ ಪರೀಕ್ಷೆಗಳನ್ನು ಇಂಗ್ಲಿಷ್‌ ಹಾಗೂ ಹಿಂದಿಯಲ್ಲಿ ನಡೆಸಲಾಗುತ್ತಿತ್ತು. ಕನ್ನಡಿಗರ ನಿರಂತರ ಹೋರಾಟದ ಫಲವಾಗಿ ಸಿ ಹಾಗೂ ಡಿ ದರ್ಜೆ ಹುದ್ದೆಗಳ ಪರೀಕ್ಷೆಗಳನ್ನು ಕನ್ನಡದಲ್ಲೂ ನಡೆಸಲಾಗುತ್ತಿದೆ. ಆದರೆ ಉನ್ನತ ದರ್ಜೆಗಳಾದ ಎ ಹಾಗೂ ಬಿ ದರ್ಜೆಗಳಿಗೆ ಈಗಲೂ ಕನ್ನಡದಲ್ಲಿ ಪರೀಕ್ಷೆಗಳು ನಡೆಯುತ್ತಿಲ್ಲ. ಇದಲ್ಲದೇ, ಸಿ ಹಾಗೂ ಡಿ ದರ್ಜೆಯ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕವಾಗಲೂ ಹಿಂದಿ ಬರಬೇಕೆಂಬ ನಿಯಮ ಮಾಡಲಾಗಿದೆ. ಈ ಮೂಲಕ ಕೇಂದ್ರ ಸರ್ಕಾರವು ಕನ್ನಡಿಗ ಯುವಕರಿಗೆ ಭಾರೀ ಅನ್ಯಾಯ ಮಾಡುತ್ತಿದೆ” ಎಂದು ಹೇಳಿದರು.

“ಸಿ ಹಾಗೂ ಡಿ ದರ್ಜೆಯ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸುತ್ತಿದ್ದರೂ, ಪ್ರಶ್ನೆಪತ್ರಿಕೆಯಲ್ಲಿ ಸಾಕಷ್ಟು ದೋಷವಿರುತ್ತದೆ. ಒಲ್ಲದ ಮನಸಿನಲ್ಲಿ ಕಾಟಾಚಾರಕ್ಕೆ ಕನ್ನಡ ಮಾಧ್ಯಮದಲ್ಲಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲಾಗುತ್ತಿದೆ. ಹಿಂದಿಯಲ್ಲಿ ತಯಾರಿಸಿದ ಪ್ರಶ್ನೆಪತ್ರಿಕೆಗಳನ್ನು ಗೂಗಲ್‌ ಟ್ಯಾನ್ಸ್‌ಲೇಟ್‌ ಬಳಸಿ ಕನ್ನಡಕ್ಕೆ ಅನುವಾದ ಮಾಡಲಾಗುತ್ತಿದೆ. ಇದರಿಂದಾಗಿ ಪ್ರಶ್ನೆಗಳು ಸರಿಯಾಗಿ ಅರ್ಥವಾಗದೇ ಕನ್ನಡದ ಯುವಕರು ರೈಲ್ವೆ ಇಲಾಖೆಯ ಹುದ್ದೆಗಳಿಗೆ ನೇಮಕವಾಗುತ್ತಿಲ್ಲ” ಎಂದು ಜಗದೀಶ್‌ ವಿ ಸದಂ ಬೇಸರ ವ್ಯಕ್ತಪಡಿಸಿದರು.

“ಕೇವಲ ಹಿಂದಿ ಭಾಷಿಗರಿಗೆ ಮಾತ್ರ ಹೆಚ್ಚಿನ ಉದ್ಯೋಗಗಳು ಸಿಗಬೇಕೆಂಬ ದುರುದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ಹೊಂದಿರುವ ಬಿಜೆಪಿ ಡಬಲ್‌ ಇಂಜಿನ್‌ ಸರ್ಕಾರಕ್ಕೆ ಕರ್ನಾಟಕ ಹಾಗೂ ಕನ್ನಡದ ಬಗ್ಗೆ ಸ್ವಲ್ಪವಾದರೂ ಕಾಳಜಿಯಿದ್ದರೆ, ರೈಲ್ವೆ ಇಲಾಖೆಯ ಎಲ್ಲ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಲಿ. ರಾಜ್ಯದ ಎಲ್ಲ ಬಿಜೆಪಿ ಶಾಸಕರು ಹಾಗೂ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಲಿ. ಕರ್ನಾಟಕದಲ್ಲಿನ ಎಲ್ಲ ರೈಲ್ವೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನಿಗದಿಪಡಿಸಲಿ. ಇಂತಹ ಕೆಲಸಗಳನ್ನು ಮಾಡದೇ ಕೇವಲ ಹಾಡು ಹೇಳಿಸುವ ಕಾರ್ಯಕ್ರಮ ಆಯೋಜಿಸುವುದರಿಂದ ಕನ್ನಡಿಗರಿಗೆ ಯಾವುದೇ ಲಾಭವಾಗದು” ಎಂದು ಜಗದೀಶ್‌ ವಿ ಸದಂ ಹೇಳಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು