ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಇಂದಿರಾನಗರ ಬಿಡಿಎ ಸಂಕೀರ್ಣ ಖಾಸಗಿ ಗುಂಪಿಗೆ ಹಸ್ತಾಂತರ: ಎಎಪಿ ಪ್ರತಿಭಟನೆ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಇಂದಿರಾನಗರ ಬಿಡಿಎ ಸಂಕೀರ್ಣ ಖಾಸಗಿ ಗುಂಪಿಗೆ ಹಸ್ತಾಂತರ: ಎಎಪಿ ಪ್ರತಿಭಟನೆ

ಬೆಂಗಳೂರು: ಆಮ್ ಆದ್ಮಿ ಪಕ್ಷದ (ಎಎಪಿ) ಸದಸ್ಯರು ಇಂದಿರಾನಗರದ ಬಿಡಿಎ ಸಂಕೀರ್ಣವನ್ನು ಶಾಪಿಂಗ್ ಮಾಲ್ ಆಗಿ ಪರಿವರ್ತಿಸುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ನಿರ್ಧಾರವನ್ನು ವಿರೋಧಿಸಿ ಶನಿವಾರದಂದು ಬಿಡಿಎ ಸಂಕೀರ್ಣದ ಹೊರಗೆ ಜಮಾಯಿಸಿ ಪ್ರತಿಭಟಿಸಿದರು.

ನಗರದಲ್ಲಿರುವ ಏಳು ಬಿಡಿಎ ಕಾಂಪ್ಲೆಕ್ಸ್ ಗಳನ್ನು ಶಾಪಿಂಗ್ ಮಾಲ್ ಗಳನ್ನಾಗಿ ಪರಿವರ್ತಿಸಲು ಬಿಡಿಎ ನಿರ್ಧರಿಸಿದೆ ಎಂದು ಮೇ 6ರಂದು ಪತ್ರಿಕೆಗಳಲ್ಲಿ ವರದಿಯಾಗಿತ್ತು. ಇವುಗಳಲ್ಲಿ ಆರನ್ನು M-FAR ಡೆವಲಪರ್‌ ಎನ್ನುವ ಸಂಸ್ಥೆಗೆ ಗುತ್ತಿಗೆ ನೀಡಲಾಗಿದೆ, ಆದರೆ ಇಂದಿರಾನಗರದಲ್ಲಿರುವ ಒಂದನ್ನು ಮಾವೆರಿಕ್ ಹೋಲ್ಡಿಂಗ್ಸ್ ಮತ್ತು ಎಂಬಸಿ ಗ್ರೂಪ್ ಜಂಟಿಯಾಗಿ ಮರುಅಭಿವೃದ್ಧಿ ಮಾಡಲಿದೆ. ಈ ಸಂಕೀರ್ಣಗಳ ಮರು-ಅಭಿವೃದ್ಧಿಯ ನಂತರ ಪ್ರತಿ ವರ್ಷ ಸುಮಾರು 40 ಕೋಟಿ ಆದಾಯವನ್ನು ಬಿಡಿಎ ನಿರೀಕ್ಷಿಸುತ್ತಿದೆ.

ಇಂದಿರಾನಗರ ಬಿಡಿಎ ಸಂಕೀರ್ಣವು ಕ್ಲಿನಿಕ್, ಆಪ್ಟಿಕಲ್ ಸ್ಟೋರ್ ಮತ್ತು ಕೆಲವು ಡ್ರೈವಿಂಗ್ ಶಾಲೆಗಳನ್ನು ಒಳಗೊಂಡಂತೆ ಹಲವಾರು ಉದ್ಯಮಗಳಿಗೆ ಕಚೇರಿ ಸ್ಥಳವಾಗಿ ಕಾರ್ಯನಿರ್ವಹಿಸುತ್ತಿತ್ತು. ಸ್ಥಳೀಯ ಎಎಪಿ ಬಿಡಿಎಯ ಈ ನಿರ್ಧಾರವನ್ನು ಖಂಡಿಸಿದೆ, ಇದನ್ನು “ಭೂ ಮಾಫಿಯಾದಿಂದ ಭೂ ಕಬಳಿಕೆ” ಎಂದು ಕರೆದಿದೆ.

ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಈ ನಿರ್ಧಾರವನ್ನು ಖಂಡಿಸಿ “ಇದೊಂದು ತರ್ಕಬದ್ಧವಲ್ಲದ ನಿರ್ಧಾರ ಎಂದು ಹೇಳಿದ್ದಾರೆ”

“ಹಣ ಮಾಡುವವರಿಗೆ ಈ ಭೂಮಿಯನ್ನು ನೀಡುವ ಬದಲು, ಸರ್ಕಾರವು ಇಲ್ಲಿ ಸಾರ್ವಜನಿಕ ಗ್ರಂಥಾಲಯ ಅಥವಾ ಆಟದ ಮೈದಾನವನ್ನು ನಿರ್ಮಿಸಲು ಅಥವಾ ಮಿನಿ-ಅರಣ್ಯವನ್ನು ನೆಡಲು ಅನುಮತಿ ನೀಡಬೇಕು. ಇದು ಸ್ಥಳೀಯ ನಿವಾಸಿಗಳಿಗೆ ನಿಜವಾಗಿ ಪ್ರಯೋಜನವನ್ನು ನೀಡುತ್ತದೆ.” ಅವರು ಹೇಳಿದರು.

ಇದು ಹಳೆಯ ಮದ್ರಾಸ್ ರಸ್ತೆಯಲ್ಲಿನ ನಿವಾಸಿಗಳು ಅನುಭವಿಸುತ್ತಿರುವ ಟ್ರಾಫಿಕ್ ತೊಂದರೆಗಳನ್ನುಇನ್ನಷ್ಟು ಹೆಚ್ಚಿಸುತ್ತದೆ ಮತ್ತು ಈ ಪ್ರದೇಶದ ದೀರ್ಘಕಾಲದ ನಿವಾಸಿಗಳಿಗೆ ಇದರಿಂದ ತೊಂದರೆಯಾಗುತ್ತದೆ ಎಂದು ಅವರು ಹೇಳಿದರು.

ಪಕ್ಷದ ಕಾರ್ಯಕರ್ತರು ಬ್ಯಾನರ್ ಹಿಡಿದು ಇಂಧನ ಸಚಿವ ಕೆ ಜೆ ಜಾರ್ಜ್, ಶಾಂತಿನಗರ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್ ಎ ಹ್ಯಾರಿಸ್ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಆರ್.ಟಿ.ನಗರ, ಕೋರಮಂಗಲ ಸೇರಿದಂತೆ ಎಲ್ಲ ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಗುತ್ತಿಗೆಗೆ ನೀಡಲಾಗುತ್ತಿದ್ದು, ಅವುಗಳ ಸಂರಕ್ಷಣೆಗಾಗಿ ಹೋರಾಟ ನಡೆಸಲು ತಾವು ಸಿದ್ಧತೆ ನಡೆಸಿಕೊಳ್ಳುತ್ತಿರುವುದಾಗಿ ಅವರು ಘೋಷಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು