ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪರಿಶಿಷ್ಟರ 11,000 ಕೋಟಿ ಹಣ ದುರ್ಬಳಕೆ ವಿರುದ್ಧ ಆಮ್ ಆದ್ಮಿ ಪಕ್ಷದಿಂದ ಬೃಹತ್ ಪ್ರತಿಭಟನೆ

P

Peepal Media Desk • ರಾಜ್ಯ

• 1 ನಿಮಿಷದ ಓದು

ಪರಿಶಿಷ್ಟರ 11,000 ಕೋಟಿ ಹಣ ದುರ್ಬಳಕೆ ವಿರುದ್ಧ ಆಮ್ ಆದ್ಮಿ ಪಕ್ಷದಿಂದ ಬೃಹತ್ ಪ್ರತಿಭಟನೆ

ಬೆಂಗಳೂರು: ಪರಿಶಿಷ್ಟ ಸಮುದಾಯಗಳ ಯೋಜನೆಗಳ ಸಲುವಾಗಿ ಮೀಸಲಿಟ್ಟಿದ್ದ ಹಣವನ್ನು ಸರ್ಕಾರ ಗ್ಯಾರಂಟಿಗಳನ್ನು ಪೂರೈಸಲು ಬಳಸುವುದನ್ನು ವಿರೋಧಿಸಿ ಇದೇ ತಿಂಗಳ ಆಗಸ್ಟ್ 5 ಶನಿವಾರದಂದು ನಗರದ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಹೋರಾಟ ಮಾಡಲಿದ್ದೇವೆ. ನಮ್ಮ ಪ್ರತಿಭಟನೆಗೆ ಅನೇಕ ದಲಿತ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ಆಮ್‌ ಆದ್ಮಿ ಪಕ್ಷ ತಿಳಿಸಿದೆ.

“ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳುಗಳಲ್ಲಿಯೇ ದಲಿತ ವಿರೋಧಿ ಎಂಬುದನ್ನು ಸಾಬೀತು ಪಡಿಸಲು ಹೊರಟಿದೆ. ದಲಿತ ವರ್ಗದ ಶ್ರೇಯೋಭಿವೃದ್ಧಿಗಾಗಿ ಮೀಸಲಿಟ್ಟಿರುವ ಎಸ್ ಸಿ – ಎಸ್ ಪಿ / ಟಿ ಎಸ್ ಪಿ ಯೋಜನೆಯ 11,130 ಕೋಟಿ ರೂಪಾಯಿಗಳನ್ನು ಗ್ಯಾರೆಂಟಿಗಳಿಗಾಗಿ ವಿನಿಯೋಜಿಸುತ್ತಿರುವುದು ವರ್ಗಕ್ಕೆ ಮಾಡಿದ ಮಹಾ ಅನ್ಯಾಯ” ಎಂದು ಆಮ್ ಆದ್ಮಿ ಪಕ್ಷದ ಎಸ್ ಸಿ /ಎಸ್ ಟಿ ವಿಭಾಗದ ರಾಜ್ಯಾಧ್ಯಕ್ಷ ಪುರುಷೋತ್ತಮ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇದೇ ರೀತಿಯ ದಲಿತರ ಹಣವನ್ನು ದುರ್ಬಳಕೆ ಮಾಡಿಕೊಂಡು ಬಂದಿದ್ದ ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷಕ್ಕೆ ಮತನೀಡಿದ ದಲಿತ ವರ್ಗ ಇಂದು ಮಹಾ ಮೋಸಕ್ಕೆ ಒಳಗಾಗುತ್ತಿರುವುದು ದುರಂತ. 14 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳು ಈ ಬಾರಿ 4079 ಕೋಟಿ ರೂಪಾಯಿಗಳನ್ನು ಹೆಚ್ಚುವರಿ ಯಾಗಿ ಈ ಯೋಜನೆಯಲ್ಲಿ ಇಟ್ಟಿದ್ದೆವೆಂದು ತಮ್ಮ ಬಜೆಟ್ ಭಾಷಣದಲ್ಲಿ ಹೇಳುತ್ತಾ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ಇದೀಗ ದಲಿತ ವರ್ಗದಿಂದ ಛೀಮಾರಿ ಹಾಕಿಸಿಕೊಳ್ಳುವ ಪರಿಸ್ಥಿತಿ ಬಂದಿದೆ. ಯಾವುದೇ ಕಾರಣಕ್ಕೂ ದಲಿತ ವರ್ಗಕ್ಕೆ ಈ ರೀತಿ ಅನ್ಯವಾಗುವುದನ್ನು ನಾವು ಸಹಿಸುವುದಿಲ್ಲ. ಹೋರಾಟದ ಹಾದಿಯನ್ನು ಇಳಿಯುತ್ತೇವೆ” ಎಂದು ಪುರುಷೋತ್ತಮ ಸರ್ಕಾರವನ್ನು ಎಚ್ಚರಿಸಿದರು.

ಮುಂದುವರಿದು ಮಾತನಾಡಿದ ಪಕ್ಷದ ಉಪಾಧ್ಯಕ್ಷ ಸುರೇಶ್ ರಾಥೋಡ್ “ಹೇಳುವುದು ಒಂದು ಮಾಡುವುದು ಇನ್ನೊಂದು ಕಾಂಗ್ರೆಸ್ ಸರ್ಕಾರದ ಪರಿಪಾಠ. ಈ ಬಗ್ಗೆ ರಾಜ್ಯ ವ್ಯಾಪಿ ಹೋರಾಟವನ್ನು ರೂಪಿಸುತ್ತೇವೆ. ಇದೇ ತಿಂಗಳ ಆಗಸ್ಟ್ 5 ಶನಿವಾರದಂದು ನಗರದ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ದಲಿತ ನೀತಿಯ ವಿರುದ್ಧ ಹೋರಾಟ ಮಾಡಲಿದ್ದೇವೆ. ನಮ್ಮ ಪ್ರತಿಭಟನೆಗೆ ಅನೇಕ ದಲಿತ ಸಂಘಟನೆಗಳು ಬೆಂಬಲ ಸೂಚಿಸಿವೆ” ಎಂದು ತಿಳಿಸಿದರು.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version