ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸ್ವಾಮೀಜಿಯ ಹನಿಟ್ರ್ಯಾಪ್‌ ಮಾಡಲು ಹೋಗಿ ತಾವೇ ಟ್ರ್ಯಾಪ್‌ಗೊಳಗಾದ ಆರೋಪಿಗಳು?

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಸ್ವಾಮೀಜಿಯ ಹನಿಟ್ರ್ಯಾಪ್‌ ಮಾಡಲು ಹೋಗಿ ತಾವೇ ಟ್ರ್ಯಾಪ್‌ಗೊಳಗಾದ ಆರೋಪಿಗಳು?

ಕುಣಿಗಲ್‌: ಸ್ವಾಮೀಜಿಯೊಬ್ಬರನ್ನು ಹನಿಟ್ರ್ಯಾಪ್‌ ಮಾಡಲು ಯತ್ನಿಸಿ ತಾವೇ ಟ್ರಾಪ್‌ ಆದ ಆರೋಪಿಗಳು ಈಗ ಪೊಲೀಸರ ಬಂಧನದ ಭಯದಲ್ಲಿ ತಲೆ ಮರೆಸಿಕೊಂಡಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ಸ್ವಾಮೀಜಿಯ ಖಾಸಗಿ ವಿಡಿಯೊ ಹಾಕುವುದಾಗಿ ಮಠಾಧೀಶರಿಗೆ ಹೆದರಿಸಿ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಆರು ಜನರ ವಿರುದ್ಧ ಸೈಬರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ, ನನ್ನ ಚರ್ಮದ ಖಾಯಿಲೆಯ ವಾಸಿ ಮಾಡುತ್ತೇನೆಂದು ವಿಡಿಯೋ ಮಾಡಿಕೊಂಡು ನನಗೆ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಆರೋಪಿಸಿ ಸ್ವಾಮೀಜಿ ಕಡೆಯುವರು ದೂರು ನೀಡಿದ್ದಾರೆ.


ಪ್ರಕರಣದ ಹಿನ್ನೆಲೆ: ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಹಂಗರಹಳ್ಳಿಯ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನದ ಬಾಲ ಮಂಜುನಾಥ ಸ್ವಾಮೀಜಿಯವರೇ ಈ ಪ್ರಕರಣದ ಕೇಂದ್ರ ವ್ಯಕ್ತಿ. ಇವರ ಖಾಸಗಿ ವಿಡಿಯೊ ನಮ್ಮ ಬಳಿ ಇದ್ದು ಅದನ್ನು ಸಾಮಾಜಿಕ ಜಾಲತಾಣಕ್ಕೆ ಹಾಕುವುದಾಗಿ ಬೆದರಿಸಿ ಆರೋಪಿಗಳು ಆಗಾಗ ಬ್ಲಾಕ್‌ ಮೇಲ್‌ ಮಾಡುತ್ತಿದ್ದರು ಎಂದು ದೇವಸ್ಥಾನದ ಟ್ರಸ್ಟಿ ಕೆ.ಅಭಿಲಾಷ್‌ ಎಂಬುವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.


ಈ ದೂರಿನ ಹಿನ್ನೆಲೆಯಲ್ಲಿ ಕುಣಿಗಲ್‌ ತಾಲ್ಲೂಕಿನ ಹೊಸಕೆರೆ ಗ್ರಾಮದ ಎಚ್‌.ಎಸ್‌.ಅಭಿಷೇಕ್‌, ಬೆಂಗಳೂರಿನ 30 ವರ್ಷದ ಯುವತಿ, ಪಾಂಡವಪುರ ಬಳಿಯ ವಿಜಯಕಾಳಿ ದೇವಸ್ಥಾನದ ರಾಜೇಶ್‌, ಶ್ರೀನಿವಾಸ್‌, ರಾಮನಗರ ಜಿಲ್ಲೆಯ ಕವನಪುರ ಗ್ರಾಮದ ಚೇತನ್‌, ಕುಣಿಗಲ್‌ನ ನಂದೀಶ್‌ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.


ಸ್ವಾಮೀಜಿಯ ಆಪ್ತ ಸಹಾಯಕರಾಗಿದ್ದ ಎಚ್‌.ಎಸ್‌.ಅಭಿಷೇಕ್‌ ಮೂಲಕ ಸ್ವಾಮೀಜಿಗೆ ಯುವತಿಯ ಪರಿಚಯವಾಗಿತ್ತು. ಆಕೆಯನ್ನು ತನ್ನ ಸಂಬಂಧಿ ಮತ್ತು ವೈದ್ಯೆ ಎಂದು ಸ್ವಾಮೀಜಿಗೆ ಅಭಿಷೇಕ್‌ ಪರಿಚಯಿಸಿದ್ದರು. ಮುಂದಿನ ದಿನಗಳಲ್ಲಿ ಸ್ವಾಮೀಜಿಗೆ ಚರ್ಮ ಸಮಸ್ಯೆ ಶುರುವಾಗಿತ್ತು. ಇದನ್ನು ಸ್ವಾಮೀಜಿ ತಮ್ಮ ಆಪ್ತ ಸಹಾಯಕನಿಗೆ ತಿಳಿಸಿದ್ದರು. ತನ್ನ ಸಂಬಂಧಿ ಚರ್ಮರೋಗ ತಜ್ಞೆಯಾಗಿದ್ದು, ಆಕೆಗೆ ತೋರಿಸುವುದು ಒಳ್ಳೆಯದು ಎಂದು ಅಭಿಷೇಕ್ ಸಲಹೆ ಮಾಡಿದ್ದ. ಇದಕ್ಕೆ ಸ್ವಾಮೀಜಿ ಒಪ್ಪಲಿಲ್ಲ. ನಂತರ ಚರ್ಮರೋಗ ಕಾಣಿಸಿಕೊಂಡ ಜಾಗದ ಚಿತ್ರ ತೆಗೆದು ಯುವತಿಗೆ ವಾಟ್ಸಪ್‌ ಮೂಲಕ ಕಳುಹಿಸಲಾಗಿತ್ತು. ಅವರು ಒಂದಷ್ಟು ಔಷಧಿ, ಮುಲಾಮು ತೆಗೆದುಕೊಳ್ಳುವಂತೆ ತಿಳಿಸಿದ್ದರು.


ಆದರೂ ಚರ್ಮರೋಗ ವಾಸಿಯಾಗದ್ದರಿಂದ ಸ್ವಾಮೀಜಿಯು ಯುವತಿ ಬಳಿ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದರು. ಕೇವಲ ಬಾಯಲ್ಲಿ ಹೇಳಿದರೆ ಸಾಕಾಗುವುದಿಲ್ಲ. ವಿಡಿಯೋ ಕರೆ ಮಾಡಿ ತೋರಿಸಿ ಎಂದು ಯುವತಿ ಪುಸಲಾಯಿಸಿದ್ದರಿಂದ ಸ್ವಾಮೀಜಿ ವಿಡಿಯೊ ಕರೆ ಮಾಡಿ ಚರ್ಮರೋಗ ಕಾಣಿಸಿಕೊಂಡ ಜಾಗ ತೋರಿಸಿದ್ದರು.


ಅದನ್ನೇ ರೆಕಾರ್ಡ್‌ ಮಾಡಿಕೊಂಡು ಈಗ ಸ್ವಾಮೀಜಿ ವಿರುದ್ಧ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾರೆ. ಕೇಳಿದಷ್ಟು ಹಣ ಕೊಡದಿದ್ದರೆ ವಿಡಿಯೊವನ್ನು ಫೇಸ್‌ಬುಕ್‌, ಯ್ಯೂಟೂಬ್‌ನಲ್ಲಿ ಹಂಚಿಕೊಳ್ಳಲಾಗುವುದು’ ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು