ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚಿತ್ರನಟ ಸಿದ್ಧಾರ್ಥ್‌ ಸುದ್ದಿ ಗೋಷ್ಟಿಗೆ ನುಗ್ಗಿ ಅಡ್ಡಿಪಡಿಸಿದ ಕನ್ನಡ ಕಾರ್ಯಕರ್ತರು

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಚಿತ್ರನಟ ಸಿದ್ಧಾರ್ಥ್‌ ಸುದ್ದಿ ಗೋಷ್ಟಿಗೆ ನುಗ್ಗಿ ಅಡ್ಡಿಪಡಿಸಿದ ಕನ್ನಡ ಕಾರ್ಯಕರ್ತರು

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ಬೆಂಗಳೂರಿನಲ್ಲಿ ಹೋಟೆಲ್‌ ಒಂದಕ್ಕೆ ನುಗ್ಗಿ ದಕ್ಷಿಣ ಭಾರತದ ನಟ ಸಿದ್ಧಾರ್ಥ್ ಅವರು ತಮ್ಮ ಮುಂಬರುವ ತಮಿಳು ಚಲನಚಿತ್ರ “ಚಿತ್ತ” ಪ್ರಚಾರಕ್ಕಾಗಿ ಮಾತನಾಡುತ್ತಿದ್ದ ಪತ್ರಿಕಾಗೋಷ್ಠಿಯನ್ನು ಕೊನೆಗೊಳಿಸುವಂತೆ ಒತ್ತಾಯಿಸಿದರು.

ಬೆಂಗಳೂರಿನ ಮಲ್ಲೇಶ್ವರದ ಹೋಟೆಲ್‌ ಒಂದರಲ್ಲಿ ಈ ಘಟನೆ ನಡೆದಿದೆ.

ಸಿದ್ಧಾರ್ಥ್ ತಮ್ಮ ಚಿತ್ರದ ಬಗ್ಗೆ ಮಾತನಾಡುತ್ತಿರುವಾಗ ಸಭಾಂಗಣಕ್ಕೆ ಪ್ರವೇಶಿಸಿದ ಕಾರ್ಯಕರ್ತರು, ರಾಜ್ಯದಲ್ಲಿ ಕಾವೇರಿ ಬಿಕ್ಕಟ್ಟು ಉತ್ತುಂಗದಲ್ಲಿರುವಾಗ ಬೆಂಗಳೂರಿನಲ್ಲಿ ತಮಿಳು ಚಿತ್ರದ ಪ್ರಚಾರ ಕಾರ್ಯಕ್ರಮ ಆಯೋಜಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಪ್ರಚಾರ ಕಾರ್ಯಕ್ರಮವನ್ನು ಮುಗಿಸುವಂತೆ ಅವರು ಸಿದ್ಧಾರ್ಥ್ ಅವರನ್ನು ಆಗ್ರಹಿಸಿದರು.

ಸಿದ್ಧಾರ್ಥ್ ಕಾರ್ಯಕರ್ತರೊಂದಿಗೆ ಕನ್ನಡದಲ್ಲಿಯೇ ಮಾತನಾಡಲು ಪ್ರಯತ್ನಿಸಿದರು, ಆದರೆ ಅವರ ಮಾತನ್ನು ಕೇಳುವ ಸ್ಥಿತಿಯಲ್ಲಿ ಕಾರ್ಯಕರ್ತರು ಇರಲಿಲ್ಲ. ಪತ್ರಿಕಾಗೋಷ್ಟಿಯನ್ನು ಮುಗಿಸುವಂತೆ ಸಿದ್ಧಾರ್ಥ್‌ ಅವರಿಗೆ ಸೂಚಿಸಿದ ಅವರು, ತಮಿಳು ಚಿತ್ರದ ಪ್ರಚಾರಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

ಸ್ವಲ್ಪ ದಿನಗಳ ನಂತರ ಪ್ರಚಾರ ಕಾರ್ಯಕ್ರಮವನ್ನು ಆಯೋಜಿಸುವಂತೆ ಕಾರ್ಯಕರ್ತರು ನಟ ಸಿದ್ಧಾರ್ಥ್ ಅವರನ್ನು ವಿನಂತಿಸಿದರು.

ಈ ವೇಳೆ ನಟ ಎದ್ದು ನಿಂತು ಎಲ್ಲರೂ ತಮ್ಮ ಸಿನಿಮಾ ನೋಡುವಂತೆ ಮನವಿ ಮಾಡಿ ಪತ್ರಿಕಾಗೋಷ್ಟಿಯನ್ನು ಮುಗಿಸಿದರು.

“ಚಿತ್ತ” ಚಿತ್ರವು ಸೆಪ್ಟೆಂಬರ್ 28ರಂದು ಬಿಡುಗಡೆಯಾಯಿತು. ಅವರೇ ಸಿನೆಮಾದ ಕನ್ನಡ ಆವೃತ್ತಿಯಾದ “ಚಿಕ್ಕು” ಗೆ ಡಬ್ಬಿಂಗ್ ಮಾಡಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು