ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ, ನೆಮ್ಮದಿಯ ಬದುಕಿಗೆ ಸಹಕಾರ – ಮಧು ಬಂಗಾರಪ್ಪ

PPeepal Media Desk

Peepal Media Desk ರಾಜ್ಯ

• 2 ನಿಮಿಷದ ಓದು

ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ, ನೆಮ್ಮದಿಯ ಬದುಕಿಗೆ ಸಹಕಾರ – ಮಧು ಬಂಗಾರಪ್ಪ

ಶಿವಮೊಗ್ಗ, ಡಿಸೆಂಬರ್ 20: ಆಡಳಿತಾರೂಢ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಶಿಕಾರಿಪುರದ ತಾಲೂಕು ಪಂಚಾಯಿತಿ ಎದುರು ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಜನರ ನೆಮ್ಮದಿಯ ಬದುಕಿಗೆ ಸಂಜೀವಿನಿಯಂತತಾಗಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷನಾಗಿದ್ದೆ ಎಂಬ ಹೆಮ್ಮೆ ನನಗಿರುವುದಾಗಿ ಅವರು ತಿಳಿಸಿದರು.

ಈ ಎಲ್ಲಾ ಗ್ಯಾರೆಂಟಿ ಯೋಜನೆಗಳ ಸೌಲಭ್ಯಗಳು ಅರ್ಹರಾದ ಎಲ್ಲಾ ಪಲಾನುಭವಿಗಳಿಗೆ ಯಾವುದೇ ಮಧ್ಯವರ್ತಿಗಳಿಲ್ಲದೆ ತಲುಪುತ್ತಿರುವುದು ಹರ್ಷವೆನಿಸಿದೆ. ರಾಜ್ಯದ ಪ್ರತಿ ಪಂಚಾಯಿತಿಗೆ ವಾರ್ಷಿಕವಾಗಿ ಸುಮಾರು 9 ಕೋಟಿಗೂ ಅಧಿಕ ಮೊತ್ತ ನೇರವಾಗಿ ತಲುಪುತ್ತಿದೆ. ಈ ಎಲ್ಲಾ ಯೋಜನೆಗಳು ಶೇ. 99ರಷ್ಟು ಯಶಸ್ವಿಯಾಗಿರುವುದು ಪ್ರಸ್ತುತ ಸರ್ಕಾರದ ಹೆಗ್ಗಳಿಕೆ ಎಂದವರು ನುಡಿದರು.

ಈ ಎಲ್ಲಾ ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ಜಾತ್ಯತೀತವಾಗಿ, ಪಕ್ಷತೀತವಾಗಿ ನೀಡಲಾಗುತ್ತಿದೆ. ಅರ್ಹರಾದ ಯಾರೊಬ್ಬರೂ ಈ ಯೋಜನೆಗಳ ಸೌಲಭ್ಯದಿಂದ ವಂಚಿತರಾಗದಂತೆ ಗಮನಿಸಲಾಗುವುದು ಎಂದವರು ನುಡಿದರು.

ಅಂತೆಯೇ ಎರಡು -ಮೂರು ದಶಗಳ ಹಿಂದೆ ಮಾಜಿ ಮುಖ್ಯಮಂತ್ರಿಗಳಾಗಿದ್ದ ಎಸ್ ಬಂಗಾರಪ್ಪರವರು ಜನಸಾಮಾನ್ಯರ ಸಂಕಷ್ಟಗಳನ್ನು ಅರಿತು ಕೃಷಿ ಚಟುವಟಿಕೆಗಳಿಗೆ ಬಳಸುವ ವಿದ್ಯುತ್‌ನ್ನು ಅಂದೆ ಉಚಿತವಾಗಿ ನೀಡಿದ್ದರು. ಅಲ್ಲದೆ ಅಂದು ಜಾರಿಗೆ ತಂದಿದ್ದ ಆಶ್ರಯ, ಆರಾಧನಾ, ಗ್ರಾಮೀಣ ಕೃಪಾಂಕ ಮುಂತಾದ ಜನಪ್ರಿಯ ಯೋಜನೆಗಳು ಇಂದಿಗೂ ಜನಮಾನಸದಲ್ಲಿವೆ. ಆ ಪರಂಪರೆ ಇಂದಿಗೂ ಮುಂದುವರೆದಿದೆ, ಮುಂದೆಯೂ ಮುಂದುವರೆಯಲಿದೆ ಎಂದ ಅವರು ಸರ್ಕಾರದ ಇಂತಹ ಯೋಜನೆಗಳ ಲಾಭ ಪಡೆದ ಸಾರ್ವಜನಿಕರು ಜನಪ್ರತಿನಿಧಿಗಳಿಗೆ ಬೆಂಬಲವಾಗಿ ನಿಲ್ಲಬೇಕು ಮಾತ್ರವಲ್ಲ ಶೇ. 100ರಷ್ಟು ಅಂಕ ನೀಡಿ ಉತ್ತೀರ್ಣಗೊಳಿಸಬೇಕು ಎಂದು ನುಡಿದರು.

ಪ್ರಸಕ್ತ ಸರ್ಕಾರವು ಹಿಂದೆಂದಿಗಿಂತ ಇಂದು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದೆ. ಅದಕ್ಕಾಗಿ ಪ್ರತಿ ವರ್ಷ ಸರ್ಕಾರವು ಶೇ. 38ರಷ್ಟು ಅನುದಾನವನ್ನು ಖರ್ಚು ಮಾಡುತ್ತಿದೆ. ಯಾವುದೇ ಮಗು ಕಲಿಕೆಯಿಂದ ಹಿಂದೆ ಸರಿಯದಂತೆ ಗಮನಿಸಲಾಗುತ್ತಿದೆ. ಅದರ ಭಾಗವಾಗಿ ಅನುತ್ತೀರ್ಣಗೊಂಡ ಮಕ್ಕಳಿಗೆ ಪೂರಕ ಪರೀಕ್ಷೆಗಳನ್ನು ನಡೆಸಿ ಶಿಕ್ಷಣದ ಮುಖ್ಯವಾಹಿನಿಯಲ್ಲಿ ಉಳಿಸಿಕೊಂಡು ಶಿಕ್ಷಣ ನೀಡಲಾಗುತ್ತಿದೆ. ರಾಜ್ಯದ ಸುಮಾರು 57ಲಕ್ಷ ಮಕ್ಕಳಿಗೆ ಪ್ರತಿದಿನ ಬಿಸಿ ಊಟ, ಮೊಟ್ಟೆ, ಬಾಳೆಹಣ್ಣು, ಸೇಂಗಾ ಚಿಕ್ಕಿ, ಪೌಷ್ಠಿಕ ಆಹಾರ, ಹಾಲು, ರಾಗಿ ಮಾಲ್ಟ್ ನೀಡಲಾಗುತ್ತಿದೆ. ಅಲ್ಲದೆ ಸಕಾಲದಲ್ಲಿ ಸಮವಸ್ತç, ಪಠ್ಯಪುಸ್ತಕ, ಶೂ- ಸಾಕ್ಸ್ ನೀಡಿ ಯಾವುದೇ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲದಂತೆ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.

ಈಗಾಗಲೇ ಶಿಕಾರಿಪುರ ತಾಲೂಕಿನ ಈಸೂರು, ಹೊಸೂರು, ಬಗಣಕಟ್ಟೆ ಗ್ರಾಮದ ಸರ್ಕಾರಿ ಶಾಲೆಗಳನ್ನು ಕೆ. ಪಿ. ಎಸ್ ಶಾಲೆಗಳನ್ನಾಗಿ ಪರಿವರ್ತಿಸಿ ಅಗತ್ಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಅಲ್ಲದೆ ಶಿರಾಳಕೊಪ್ಪದ ಒಂದು ಶಾಲೆ ಹಾಗೂ ಶಿಕಾರಿಪುರದ ನಗರದ ಹೃದಯ ಭಾಗದಲ್ಲಿರುವ ಹಾಗೂ ಹೆಚ್ಚಿನ ವಿದ್ಯಾರ್ಥಿಗಳಿರುವ 2 ಶಾಲೆಗಳಿಗೆ ಅಗತ್ಯ ಸೌಲಭ್ಯ ಒದಗಿಸಿ ಕೆಪಿಎಸ್ ಶಾಲೆಗಳನ್ನಾಗಿ ಪರಿವರ್ತಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ರಾಜ್ಯ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್, ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ನಾಗರಾಜ ಗೌಡ, ಪಾರಿವಾಳದ ಭಂಡಾರಿ, ಮಾಲತೇಶ್, ನಗರದ ಮಹದೇವಪ್ಪ, ಪಾಲಾಕ್ಷಪ್ಪ ಗೌಡ, ತಹಶೀಲ್ದಾರ್ ಮಲ್ಲೇಶಪ್ಪ ಪೂಜಾರ್ ಸೇರಿದಂತೆ ಅನೇಕ ಮುಖಂಡರು ಸಾರ್ವಜನಿಕರು ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು