ಆದಿತ್ಯ ಠಾಕ್ರೆ ಹೇಳಿಕೆ ಬಾಲಿಶ, ಯಾರೇ ಪುಂಡಾಟ ಮಾಡಿದ್ರೂ ಸುಮ್ಮನಿರಲ್ಲ: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ
ಲಿಂಕ್ ನಕಲಿಸಲಾಗಿದೆ ✓
ಬೆಳಗಾವಿ ಡಿ 9: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎನ್ನುವ ಹೇಳಿಕೆ ಅತ್ಯಂತ ಬಾಲಿಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು.
ಆದಿತ್ಯ ಠಾಕರೆ ನೀಡಿದ ಹೇಳಿಕೆ ಬಗ್ಗೆ ಸುವರ್ಣಸೌಧದಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ ಸಿಎಂ ಈ ಕಾರಣಕ್ಕೇ ಇದೊಂದು ಬಾಲಿಶ ಹೇಳಿಕೆ ಎಂದರು.
MES ನವರು ಇದೇ ವಿಚಾರದಲ್ಲಿ ಪುಂಡಾಟಿಕೆ ಮಾಡಿದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರೇ ಪುಂಡಾಟಿಕೆ ಮಾಡಿದರೂ ಸುಮ್ಮನಿರಲ್ಲ ಎಂದರು.
P
Peepal Media
Peepal Media · ರಾಜ್ಯ ವಿಭಾಗ
ಹಿಂದಿನ ಸುದ್ದಿ