ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದತ್ತು ಮತ್ತು ಪೋಷಕತ್ವ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಟಾನ: ಶಿವಮೊಗ್ಗ ಜಿಲ್ಲೆಗೆ ಪ್ರಥಮ ಸ್ಥಾನ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ದತ್ತು ಮತ್ತು ಪೋಷಕತ್ವ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಟಾನ: ಶಿವಮೊಗ್ಗ ಜಿಲ್ಲೆಗೆ ಪ್ರಥಮ ಸ್ಥಾನ

ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ದತ್ತು ಕಾರ್ಯಕ್ರಮ ಮತ್ತು ಪೋಷಕತ್ವ ಕಾರ್ಯಕ್ರಮ ಕುರಿತು ಹಮ್ಮಿಕೊಳ್ಳಲಾಗಿದ್ದ ವಿವಿಧ ವಿನೂತನ ಕಾರ್ಯಕ್ರಮಗಳನ್ನು ಹಾಗೂ ದತ್ತು ಮತ್ತು ಪೋಷಕತ್ವ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಟಾನವನ್ನು ಪರಿಗಣಿಸಿ ಜಿಲ್ಲೆಗೆ ಪ್ರಥಮ ಸ್ಥಾನ ನೀಡಿ ಗೌರವಿಸಲಾಗಿದೆ.


ಭಾರತ ಸರ್ಕಾರ, ಕೇಂದ್ರೀಯ ದತ್ತು ಸಂಪನ್ಮೂಲ ಪ್ರಾಧಿಕಾರ, ಕರ್ನಾಟಕ ಸರ್ಕಾರ ಮತ್ತು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು ಇವರ ವತಿಂದ ಮಿಷನ್ ವಾತ್ಸಲ್ಯ ಯೋಜನೆಯ ದತ್ತು ಕಾರ್ಯಕ್ರಮ ಮತ್ತು ಪೋಷಕತ್ವ ಯೋಜನೆಯ ಕುರಿತು ಸಾರ್ವಜನಿಕರಿಗೆ, ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಂಘ ಸಂಸ್ಥೆಯ ಪದಾಧಿಕಾರಿಗಳಿಗೆ ಕಾನೂನುಬದ್ಧ ದತ್ತು ಮತ್ತು ಪೋಷಕತ್ವ ಯೋಜನೆಯ ಮೂಲಕ ದತ್ತು ಹೋಗುವಂತಹ ಮಗುವಿಗೆ ಶಾಶ್ವತ ಕುಟುಂಬದ ಅಗತ್ಯವಿರುವ ಮಕ್ಕಳಿಗೆ ಶಾಶ್ವತ, ಸ್ಥಿರ ಮತ್ತು ಕಾಳಜಿಯುಳ್ಳ ವಾತಾವರಣವನ್ನು ಅನುಕೂಲವಾಗುವಂತೆ ಪ್ರತಿ ವರ್ಷ ನವೆಂಬರ್ ಮಾಹೆಯಲ್ಲಿ ರಾಷ್ಟ್ರೀಯ ದತ್ತು ಮಾಸಾಚರಣೆಯನ್ನು ಆಚರಿಸಲಾಗುತ್ತಿದೆ.


ಅದರಂತೆ ನವೆಂಬರ್-2024 ನ್ನು ‘ಪೋಷಕತ್ವ ಕಾರ್ಯಕ್ರಮದಡಿ ಮಕ್ಕಳನ್ನು ದತ್ತು ತೆಗೆದುಕೊಳ್ಳುವುದನ್ನು ಉತ್ತೇಜಿಸಲು ಮೀಸಲಾದ ವಿಶೇಷ ದಿನವಾಗಿದೆ, ಸಂದರ್ಭವಾಗಿದೆ’ ಎಂಬ ಘೋಷವಾಕ್ಯದೊಂದಿಗೆ ಜಿಲ್ಲೆಯಲ್ಲಿ ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ದತ್ತು ಕಾರ್ಯಕ್ರಮ ಮತ್ತು ಪೋಷಕತ್ವ ಕಾರ್ಯಕ್ರಮದ ಕುರಿತು ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಜಾಥಾ ಕಾರ್ಯಕ್ರಮ, ಮೈಕ್ ಮೂಲಕ ಪ್ರಚಾರ, ಆಕಾಶವಾಣಿ ಕಾರ್ಯಕ್ರಮ, ಟಿವಿ ಸಂದರ್ಶನ, ದಿನಪತ್ರಿಕೆಗಳಲ್ಲಿ ಜಾಗೃತಿ ಲೇಖನಗಳು, ಅಧಿಕಾರಿ/ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಂದ ಸಂಕಲ್ಪ ಸಂದೇಶ, ಜೀವಸೆಲೆ ವಿಡಿಯೋ ವೀಕ್ಷಣೆ ಮತ್ತು ವಿವಿಧ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದನ್ನು ಪರಿಗಣಿಸಿ ಹಾಗೂ ದತ್ತು ಮತ್ತು ಪೋಷಕತ್ವ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿರುವುದಕ್ಕಾಗಿ ರಾಜ್ಯ ಮಟ್ಟದಲ್ಲಿ ಜರುಗಿದ ರಾಷ್ಟ್ರೀಯ ದತ್ತು ಮಾಸಾಚರಣೆಯ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರ ಮತ್ತು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು ಇವರು ಶಿವಮೊಗ್ಗ ಜಿಲ್ಲೆಗೆ ಪ್ರಥಮ ಸ್ಥಾನ ನೀಡಿ ಗೌರವಿಸಿದೆ.


2023-24 ನೇ ಸಾಲಿನಲ್ಲಿಯೂ ಪ್ರಥಮ ಬಹುಮಾನವನ್ನು ಜಿಲ್ಲೆ ಪಡೆದಿತ್ತು ಎಂತು ಜಿಲ್ಲಾ ಮಕ್ಕಳ ರಕ್ಷಣಾದಿಕಾರಿ ಮಂಜುನಾಥ್ ಆರ್ ಇವರು ತಿಳಿಸಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು