ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ

ಮೊದಲ ಕ್ಯಾಬಿನೆಟ್​​ನಲ್ಲಿ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ : AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಮೊದಲ ಕ್ಯಾಬಿನೆಟ್​​ನಲ್ಲಿ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ : AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ರಾಜ್ಯದ ನೂತನ ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್‌ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಮೊದಲ ಕ್ಯಾಬಿನೆಟ್​​ನಲ್ಲಿ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ವಾಗ್ದಾನ ನೀಡಿದ್ದು, ಅದನ್ನು ಮಾಡಲಿದ್ದೇವೆ. ಇದರ ಜತೆಗೆ ನಾವು ನೀಡಿರುವ ಇತರೆ ಭರವಸೆಗಳನ್ನು ಜಾರಿ ಮಾಡುತ್ತೇವೆ. ಕಳೆದ ಬಾರಿಯ ಸರ್ಕಾರ ಇದ್ದಾಗಲೂ ನಾವು ಹೇಳಿದ್ದನ್ನು ಮಾಡಿ ತೋರಿಸಿದ್ದೇವೆ. ನಾವು ಬಿಜೆಪಿಯವರ ರೀತಿ ಹೇಳುವುದೊಂದು ಮಾಡುವುದು ಮತ್ತೊಂದು ರೀತಿ ಆಡಳಿತ ಮಾಡುವುದಿಲ್ಲ. ನಾವು ಹೇಳಿದ್ದನ್ನು ಮಾಡಿ ತೋರಿಸುತ್ತೇವೆ.

ಪ್ರಧಾನಿ ಮೋದಿ ಅವರು ಈಗ ಮತ್ತೊಂದು ಆದೇಶ ಹೊರಡಿಸಿದ್ದಾರೆ. ಅವರು ಜಪಾನ್ ಗೆ ತೆರಳಿದಾಗಲೆಲ್ಲಾ ನೋಟು ರದ್ದು ತೀರ್ಮಾನ ಪ್ರಕಟಿಸುತ್ತಾರೆ. ಕಳೆದ ಬಾರಿ ಜಪಾನ್ ಗೆ ತೆರಳಿದಾಗ ಒಂದು ಸಾವಿರ ರೂ. ಮುಖಬೆಲೆ ನೋಟು ರದ್ದು ಮಾಡಿದ್ದರು. ಈ ಬಾರಿ 2 ಸಾವಿರ ಮುಖಬೆಲೆಯ ನೋಟು ರದ್ದು ಮಾಡಿದ್ದಾರೆ. ಇದರರ್ಥ ಇದರಿಂದ ದೇಶಕ್ಕೆ ಲಾಭವೋ, ನಷ್ಟವೋ ಎಂಬುದರ ಬಗ್ಗೆ ಸ್ಪಷ್ಟನೆ ನೀಡುವುದಿಲ್ಲ. ಮೋದಿ ಅವರ ಈ ಕೆಲಸ ದೇಶದ ಜನರಿಗೆ ತೊಂದರೆ ಆಗುತ್ತಿದೆ.

ನಮ್ಮ ಸರ್ಕಾರ ರಾಜ್ಯದಲ್ಲಿ ದ್ವೇಷವನ್ನು ಕಿತ್ತೊಗೆದು, ಪ್ರೀತಿ, ಸೌಹಾರ್ದತೆ, ಸಾಮರಸ್ಯದ ಸರ್ಕಾರವಾಗಿದೆ. ನಾವು ನುಡಿದಂತೆ ನಡೆಯುತ್ತೇವೆ. ನಮ್ಮ ಭರವಸೆ ಈಡೇರಿಸುತ್ತೇವೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು