ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಮೈಸೂರು ಅಂಬಾರಿ ವಿವಾದ: ರಾಜಮಾತೆಯ ಅಧಿಕಾರವೋ, ಪ್ರಜಾಪ್ರಭುತ್ವದ ಸಾರ್ವಭೌಮತ್ವವೋ?ಹಾರ್ಮುಜ್ ಜಲಸಂಧಿಯಲ್ಲಿ ಭಾರತ, ಚೀನಾ ದೇಶಗಳ ಸರಕು ಹಡಗುಗಳ ಸಂಚಾರಕ್ಕೆ – ಇರಾನ್ ನಿಂದ ಮುಕ್ತ ಅವಕಾಶಕಬ್ಬಿನ ಬೆಲೆ ನಿಗದಿ ವಿವಾದ: ಬೆಳಗಾವಿಯಲ್ಲಿ ಜೈಲ್ ಭರೋ ಚಳವಳಿ, ರೈತರು ಪೊಲೀಸ್ ವಶಕ್ಕೆಎಸ್‌ಐಆರ್ ವೇಳೆ ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದ ಕುಟುಂಬದ 6 ಸದಸ್ಯರ ಹೆಸರು ಮರುಸೇರ್ಪಡೆಗೆ ಹೈಕೋರ್ಟ್ ಆದೇಶಕಬ್ಬಿಗೆ ಪ್ರತಿ ಟನ್‌ಗೆ 3600 ರೂ ನೀಡಲು ನಿರ್ಧರಿಸಿದ್ದೇವೆ – ಸತೀಶ್‌ ಜಾರಕಿಹೊಳಿ ಘೋಷಣೆಮೂರು ತಿಂಗಳ ಬಳಿಕ ಚುನಾವಣಾ ಆಯೋಗದ ನಿರ್ಧಾರ ಬದಲಾವಣೆ: ಐಟಿ ವಿಭಾಗದ ಮೇಲ್ವಿಚಾರಣೆ ಮತ್ತೆ ಹಿರಿಯ ಅಧಿಕಾರಿಗೆಯುಜಿಸಿ ನಿಯಮಗಳ ಮರುಪರಿಶೀಲನೆಗೆ ಸಮಿತಿ ರಚಿಸುವ ಕುರಿತು ಯೋಚಿಸಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರಹಾಸನದಲ್ಲಿ ಜನನುಡಿ ಪೂರ್ವಭಾವಿ ಸಭೆ – ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಬರ ಪರಿಹಾರ 2,500 ರೂ.ನಿಂದ 5,000 ರೂ.ಗೆ ಹೆಚ್ಚಳ – ಡಿ.ಕೆ. ಶಿವಕುಮಾರ್ರೇಷನ್ ಕಾರ್ಡ್ ಇ-ಕೆವೈಸಿಗೆ ಕೇವಲ 10 ದಿನ ಬಾಕಿ – 41.33 ಲಕ್ಷ ಫಲಾನುಭವಿಗಳು ಬಾಕಿ ಉಳಿಕೆಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ – BK ಹರಿಪ್ರಸಾದ್ಓದೋಣ ಬಾ ಗುರು – 3 : ಗ್ರಾಮ ಭಾರತದ ಬದುಕು ಬವಣೆಬೆಂಗಳೂರು | ಎಸ್‌ಐಆರ್ ರದ್ದು, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಒಕ್ಕೂಟ ಪ್ರತಿಭಟನೆಚರ್ಚೆ ನಡೆಸುವುದು ಬೀದಿಯಲ್ಲಲ್ಲ, ಸಂಸತ್ತಿಗೆ ಬನ್ನಿ: ರಾಹುಲ್‌ ಗಾಂಧಿಗೆ ಅಮಿತ್‌ ಶಾ ತಿರುಗೇಟುಹವಾಮಾನ ಬದಲಾವಣೆ ಎದುರಿಸಲು ಜಗತ್ತು ಸಿದ್ಧವಾಗಿಲ್ಲ! ವಾರ್ಷಿಕ 305 ಬಿಲಿಯನ್ ಡಾಲರ್ ಅಗತ್ಯ: ವಿಶ್ವಸಂಸ್ಥೆ ವರದಿಭವ್ಯ ದೃಶ್ಯ ವೈಭವಕ್ಕೆ ಮೆಚ್ಚುಗೆ, ಕಥೆಯ ಆಳಕ್ಕೆ ಟೀಕೆ: ಜಾಗತಿಕ ಮಟ್ಟದಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದ ‘ರಾಮಾಯಣ’!ಬಸ್‌ ದರ ಏರಿಕೆ | ಮೆಜೆಸ್ಟಿಕ್‌ ಬಸ್‌ ಸ್ಟ್ಯಾಂಡಿನಲ್ಲಿ ಭಿಕ್ಷೆ ಬೇಡಿ ಪ್ರತಿಭಟಿಸಿದ ಬಿಜೆಪಿ; ಅಶೋಕ್‌ ಸೇರಿದಂತೆ ಹಲವರು ವಶಕ್ಕೆಕನ್ನಡಿಗರಿಗೆ ಉದ್ಯೋಗದಲ್ಲಿ ನ್ಯಾಯಯುತ ಪಾಲು ನೀಡಿ: ಐಟಿ ಕಂಪನಿಗಳಿಗೆ ಡಿ.ಕೆ. ಶಿವಕುಮಾರ್ ಮನವಿಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗವಿಲ್ಲವೇ? ಭಾಷೆ, ಸ್ಥಳೀಯರ ಹಕ್ಕು ಮತ್ತು ಕಾರ್ಪೊರೇಟ್ ಹೊಣೆಗಾರಿಕೆಯ ಸುತ್ತ ಹೊಸ ಸಂಘರ್ಷ!ಬೆಳಗಾವಿಯಲ್ಲಿ ಕಬ್ಬಿನ ದರ ವಿವಾದಕ್ಕೆ ತಾತ್ಕಾಲಿಕ ತೆರೆ; ಟನ್‌ಗೆ ₹3,600 ನಿಗದಿ

ಮೋದಿ ಹುಟ್ಟಿಸಿದ ಭ್ರಮೆಗಳೆಲ್ಲಾ ಬೆತ್ತಲಾಗಿವೆ. ನೀವಿನ್ನೂ ಮೋದಿ ಭ್ರಮೆಯಲ್ಲಿದ್ದೀರಾ? ಸಿ.ಎಂ. ಸಿದ್ದರಾಮಯ್ಯ ಪ್ರಶ್ನೆ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಮೋದಿ ಹುಟ್ಟಿಸಿದ ಭ್ರಮೆಗಳೆಲ್ಲಾ ಬೆತ್ತಲಾಗಿವೆ. ನೀವಿನ್ನೂ ಮೋದಿ ಭ್ರಮೆಯಲ್ಲಿದ್ದೀರಾ? ಸಿ.ಎಂ. ಸಿದ್ದರಾಮಯ್ಯ ಪ್ರಶ್ನೆ

ಹುಣಸೂರು ಏ 13 : ಮೋದಿ ಹುಟ್ಟಿಸಿದ ಭ್ರಮೆಗಳೆಲ್ಲಾ ಬೆತ್ತಲಾಗಿವೆ. ನೀವಿನ್ನೂ ಮೋದಿ ಭ್ರಮೆಯಲ್ಲಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಪ್ರಶ್ನಿಸಿದರು.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜನಧ್ವನಿ-2 ಬೃಹತ್ ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಾ ದೇಶದ ಜನತೆ ಹೇಗೆ ಭ್ರಮೆಗೆ ಒಳಗಾಗಿ ಮೋಸಹೋದರು ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

ಈ ಲೋಕಸಭಾ ಚುನಾವಣೆ ಭಾರತದ ಭವಿಷ್ಯದ ದೃಷ್ಟಿಯಿಂದ, ಭಾರತದ ಆರ್ಥಿಕತೆ ದೃಷ್ಟಿಯಿಂದ ಬಹಳ ನಿರ್ಣಾಯಕವಾಗಿದೆ ಎಂದರು.

ಕಳೆದ ಹತ್ತು ವರ್ಷ ನೀವು ಬಿಜೆಪಿಗೆ ಓಟು ಹಾಕಿದ್ದು ಏಕೆ? ಯಾವ್ಯಾವ ಕಾರಣಗಳಿಂದ ಓಟು ಹಾಕಿದ್ರಿ ಎನ್ನುವುದನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳಿ. ಮೋದಿ ಹೇಳಿದ್ದರಲ್ಲಿ ಒಂದೇ ಒಂದನ್ನಾದರೂ ಈಡೇರಿಸಿದ್ದಾರಾ ? ಕಳೆದ ಹತ್ತು ವರ್ಷಗಳಲ್ಲಿ ಭಾರತೀಯರನ್ನು ಭಾವನಾತ್ಮಕವಾಗಿ ಕೆರಳಿಸಿ ವಂಚಿಸಿದ್ದು ಬಿಟ್ಟರೆ ಭಾರತೀಯರ ಬದುಕಿಗೆ ಬೇಕಾದ ಒಂದೇ ಒಂದು ಕೆಲಸವನ್ನಾದರೂ ಮಾಡಿದ್ದಾರಾ ಎನ್ನುವುದನ್ನು ನಿಮ್ಮ ಆತ್ಮಸಾಕ್ಷಿಗೆ ಕೇಳಿಕೊಳ್ಳಿ. ನೀವು ಬಿಜೆಪಿ ಮೇಲಿಟ್ಟಿದ್ದ ನಂಬಿಕೆಗಳಿಗೆ ಮೋಸ ಆಗಿದೆ ತಾನೇ? ನಿಮ್ಮ ನಂಬಿಕೆಗಳಿಗೆ ಮೋಸ ಮಾಡಿ ವಂಚಿಸಿದ ಮೋದಿ ಮತ್ತು ಬಿಜೆಪಿಯ ಸುಳ್ಳುಗಳಿಗೆ ಮತ್ತೆ ಮತ್ತೆ ತಲೆ ಒತ್ತೆ ಇಟ್ಟು ಮರುಳಾಗಬೇಡಿ ಎಂದು ಕರೆ ನೀಡಿದರು.

ನಾವು ನುಡಿದಂತೆ ನಡೆದಿದ್ದೇವೆ. ನಿಮ್ಮ ನಂಬಿಕೆಗಳಿಗೆ, ನಾವು ಕೊಟ್ಟ ಮಾತಿಗೆ ಗೌರವ ಸಲ್ಲಿಸಿದ್ದೇವೆ. ನಿಮ್ಮ ಓಟಿಗೆ ಘನತೆ ತಂದಿದ್ದೇವೆ. ಪ್ರತೀ ಕುಟುಂಬಕ್ಕೆ ಪ್ರತೀ ತಿಂಗಳು 5 ರಿಂದ 6 ಸಾವಿರ ರೂಪಾಯಿ ಉಳಿತಾಯ ಆಗುವಂತೆ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇವೆ. ಆದ್ದರಿಂದ ನಿಮ್ಮ ಬದುಕಿಗೆ ನೆರವಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ತುಂಬಿ. ಭಾರತೀಯರನ್ನು ನಂಬಿಸಿ ಬಕ್ರಾ ಮಾಡುವ ಮೋದಿಯವರನ್ನು, ಬಿಜೆಪಿಯನ್ನು ನಂಬಿ ಮತ್ತೆ ಮೋಸ ಹೋಗಬೇಡಿ ಎಂದು ಕರೆ ನೀಡಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್, ಆಶ್ರಯ ಸಮಿತಿ ಅಧ್ಯಕ್ಷರಾದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ಹುಣಸೂರು ಮಂಜುನಾಥ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು