ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಾತಿಯೇ ಇರಲಿ, ಧರ್ಮ‌ವೇ ಇರಲಿ ಅದೆಲ್ಲಾ ಮನೆಯೊಳಗೆ ಆಚರಣೆಯಾಗಲಿ. ಹೊರಗೆ ಬಂದ ಕೂಡಲೇ ನಾವೆಲ್ಲರೂ ಭಾರತೀಯರಾಗಬೇಕು: ಸಿ.ಎಂ ಸಿದ್ದರಾಮಯ್ಯ ಕರೆ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಜಾತಿಯೇ ಇರಲಿ, ಧರ್ಮ‌ವೇ ಇರಲಿ ಅದೆಲ್ಲಾ ಮನೆಯೊಳಗೆ ಆಚರಣೆಯಾಗಲಿ. ಹೊರಗೆ ಬಂದ ಕೂಡಲೇ ನಾವೆಲ್ಲರೂ ಭಾರತೀಯರಾಗಬೇಕು: ಸಿ.ಎಂ ಸಿದ್ದರಾಮಯ್ಯ ಕರೆ

ಬೆಂಗಳೂರು ಜೂ 15: ಪೊನ್ನಣ್ಣ ಅವರಿಗೆ ಉತ್ತಮ‌ ಭವಿಷ್ಯವಿದೆ. ಇವರನ್ನು ಬೆಂಬಲಿಸಿ ಪೊನ್ನಣ್ಣ ರಾಜ್ಯದ ಆಸ್ತಿ ಆಗ್ತಾರೆ. ಕೊಡವ ಸಮಾಜದ ಆಸ್ತಿ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ವಸಂತನಗರದ ಕೊಡವ ಸಭಾಂಗಣದಲ್ಲಿ ಕೊಡವ ಸಮಾಜದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಕೊಡವ ಸಮಾಜ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರಾದರೂ ದೇಶ ಸೇವೆಯಲ್ಲಿ ಇವರಿಗೆ ಸರಿಸಮಾನವಾದವರು ಬೇರೆ ಇಲ್ಲ. ಸಂಸ್ಕೃತಿ, ಶಿಸ್ತಿನಲ್ಲಿ ಕೊಡವರು ಮುಂಚೂಣಿಯಲ್ಲಿದ್ದಾರೆ. ಸೈನ್ಯಕ್ಕೆ, ದೇಶ ರಕ್ಷಣೆಗೆ, ಕ್ರೀಡೆಗೆ, ರಾಜಕಾರಣಕ್ಕೆ ಕೊಡವರ ಕೊಡವರ ಕೊಡುಗೆ ಅಪಾರ ಎಂದು ಮೆಚ್ಚುಗೆ ಸೂಚಿಸಿದರು.

ಎ.ಕೆ.ಸುಬ್ಬಯ್ಯ ಮ ಮತ್ತು ಎಂ.ಸಿ.ನಾಣಯ್ಯ ಉತ್ತಮ ಸಂಸದೀಯ ಪಟುಗಳು. ಇವರು ಸದನದಲ್ಲಿ ಸಮಾಜಮುಖಿಯಾಗಿ ಮಾತನಾಡಿದ ಫೈರ್ ಬ್ರಾಂಡ್ ಗಳು. ಪೊನ್ನಣ್ಣ ಅವರಿಗೂ ಫೈರ್ ಬ್ರಾಂಡ್ ಆಗುವ ಎಲ್ಲಾ ಲಕ್ಷಣಗಳೂ ಇವೆ ಎಂದರು.

ಯಾವುದೇ ಸಮುದಾಯಗಳು ಜಾಗ ಕೇಳಿದರೂ ಗೈಡೆನ್ಸ್ ಬೆಲೆಯಲ್ಲಿ ಶೇ10 ರಷ್ಟು ಬೆಲೆಗೆ ಕೊಡಬೇಕು ಎಂದು ಕಂದಾಯ ಸಚಿವರಿಗೆ ಸೂಚಿಸಿದ್ದೇನೆ. ಅದರಂತೆ ಕೊಡವ ಸಮಾಜಕ್ಕೂ ನೀಡಿದ್ದೇವೆ ಎಂದರು.

ನಾವೆಲ್ಲರೂ ಭಾರತೀಯರು ಮತ್ತು ಕನ್ನಡಿಗರು. ದೇಶ ರಕ್ಷಣೆಯಲ್ಲಿ ಮುಂಚೂಣಿಯಲ್ಲಿರುವ ಕೊಡವರು ಜಾತಿ-ಧರ್ಮ ಮಾಡುವವರಲ್ಲ. ಎಲ್ಲರನ್ನೂ ಭಾರತೀಯರು ಎಂದು ಗೌರವಿಸುವವರು ಎಂದರು.

ಕಾಂಗ್ರೆಸ್ ಪಕ್ಷದ ಸಂಸ್ಕೃತಿ ಕೂಡ ಸರ್ವರಿಗೂ ಸಮಾನವಾಗಿ ಕಾಣುವುದಾಗಿದೆ. ಎಲ್ಲಾ ಜಾತಿ, ಎಲ್ಲಾ ಧರ್ಮದವರನ್ನೂ ಭಾರತೀಯರು, ಭಾರತೀಯ ಪ್ರಜೆಗಳು ಎಂದು ಕಾಂಗ್ರೆಸ್ ಪರಿಗಣಿಸುತ್ತದೆ ಎಂದರು.

ಜಾತಿ ಇರಲಿ, ಧರ್ಮ‌ ಇರಲಿ ಅದೆಲ್ಲಾ ಮನೆಯೊಳಗೆ ಆಚರಣೆಯಾಗಲಿ. ಹೊರಗೆ ಬಂದ ಕೂಡಲೇ ನಾವೆಲ್ಲರೂ ಒಂದೇ, ನಾವು ಭಾರತೀಯರಾಗಬೇಕು ಎಂದು ಕರೆ ನೀಡಿದರು.

ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಹೆಸರನ್ನು ಮೆಟ್ರೋ ನಿಲ್ದಾಣಕ್ಕೆ ಇಡುವ ಸಂಬಂಧ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಭರವಸೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿಚರಾದ ಕೆ.ಜೆ.ಜಾರ್ಜ್, ಬೈರತಿ ಸುರೇಶ್, ಕೃಷ್ಣಬೈರೇಗೌಡ ಹಾಗೂ ಶಾಸಕರೂ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಹಾಗೂ ಶಾಸಕ ಮಂಥರ್ ಗೌಡ ಅವರು ಉಪಸ್ಥಿತರಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು