ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ

P

Peepal Media • ರಾಜ್ಯ

• 2 ನಿಮಿಷದ ಓದು

ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೋಗಿಲು ಬಡಾವಣೆಯಲ್ಲಿ ಡಿಸೆಂಬರ್ 20ರಂದು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶೆಡ್ ಗಳನ್ನು ನಿರ್ಮಾಣ ಮಾಡಿದ್ದ ಸುಮಾರು 167 ಶೆಡ್‌ಗಳನ್ನು ತೆರವುಗೊಳಿಸಲಾಗಿತ್ತು. ಅವರೆಲ್ಲರಿಗೂ ನೋಟಿಸ್ ನೀಡಿ, ಸರ್ಕಾರದ ಜಾಗವಾಗಿದ್ದು ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು, ಆದರೂ ಅವರು ಖಾಲಿ ಮಾಡಿರಲಿಲ್ಲ. ನಿನ್ನೆ ನಾನು ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ನನ್ನ ರಾಜಕೀಯ ಕಾರ್ಯದರ್ಶಿಯಾದ ನಸೀರ್ ಅಹ್ಮದ್ ಅವರನ್ನು ಸ್ಥಳಕ್ಕೆ ಕಳಿಸಿಕೊಟ್ಟಿದ್ದೆ. ಇಂದು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಕೂಡ ಅಧಿಕಾರಿಗಳ ಜೊತೆ ಭೇಟಿ ನೀಡಿದ್ದಾರೆ ಎಂದರು.

ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಬಂಡೆ ಕ್ವಾರಿ ಕೂಡ ಅಲ್ಲಿದೆ. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ‌ ಅವರ ಸ್ವಾಧೀನದಲ್ಲೇ ಇದೆ. ನಾವು ಸುಮಾರು 2020-21 ರಿಂದ ಈ ರೀತಿ ಅಕ್ರಮವಾಗಿ ಶೆಡ್ ಕಟ್ಟಿಕೊಂಡು ವಾಸ ಮಾಡುತ್ತಿದ್ದರು, ಹೀಗಾಗಿ ಅಲ್ಲಿನ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ. ತಹಶಿಲ್ದಾರರಿಗೆ, ಶಿರಸ್ಥೆದಾರರಿಗೆ ಗೊತ್ತಿಲ್ಲದೆ ಹೀಗೆ ಒತ್ತುವರಿ ಆಗಲು ಸಾಧ್ಯವಿಲ್ಲ. ಇನ್ನುಮುಂದೆ ಇಂತಹ ಘಟನೆ ಮರುಕಳಿಬಾರದು ಎಂಬ ಕಾರಣಕ್ಕೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂಬ ಎಚ್ಚರಿಕೆ ನೀಡಿದರು.

ಇನ್ನುಮುಂದೆ ಯಾವುದೇ ಕಾರಣಕ್ಕೂ ಸರ್ಕಾರಿ ಜಮೀನಿನ ಅಕ್ರಮ‌ ಒತ್ತುವರಿ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಒಂದು ವೇಳೆ ಮನೆ ಕಟ್ಟಿದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಜವಾಬ್ದಾರಿ ಮಾಡಲಾಗುತ್ತದೆ. ಅಕ್ರಮವಾಗಿ ಶೆಡ್‌ಗಳನ್ನು ಕಟ್ಟಿ ವಾಸವಿದ್ದವರಲ್ಲಿ ಮುಂದಿನ ಎರಡು ದಿನಗಳಲ್ಲಿ ಅರ್ಹರನ್ನು ಗುರುತಿಸಿ, ಪಟ್ಟಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಾನವೀಯತೆ ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿದೆ ಎಂದು ಸ್ಪಷ್ಟಪಡಿಸಿದರು.

ಈ ವಿಚಾರದ ಬಗ್ಗೆ ದೆಹಲಿಯಲ್ಲಿ ಕೆ.ಸಿ.ವೇಣುಗೋಪಾಲ್ ಅವರು ನನ್ನೊಂದಿಗೆ ಮತ್ತು ನಂತರ ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚೆ ಮಾಡಿದ್ದಾರೆ. ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡುವ ಭರವಸೆ ನೀಡಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರು, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಿಗೆ ಊಟ, ವಸತಿ, ತಾತ್ಕಾಲಿಕ ಸೂರಿನ ವ್ಯವಸ್ಥೆ ಮಾಡುವಂತೆ ಹೇಳಿದ್ದೆ, ಅದರಂತೆ ಮೂರು ಕಡೆ ಈ ರೀತಿಯ ವ್ಯವಸ್ಥೆ ಮಾಡಿದ್ದರೂ ಅಲ್ಲಿನ ನಿವಾಸಿಗಳು ಹೋಗಿಲ್ಲ. ಡಿ.ಕೆ.ಶಿವಕುಮಾರ್, ವಸತಿ ಸಚಿವರಾದ ಜಮೀರ್ ಅಹ್ಮದ್, ಸ್ಥಳೀಯ ಶಾಸಕರಾದ ಕೃಷ್ಣ ಬೈರೇಗೌಡ ಅವರ ಜೊತೆ ಮಾತನಾಡಿ, ಪರ್ಯಾಯ ವ್ಯವಸ್ಥೆ ಮಾಡುವ ಸಂಬಂಧ ಚರ್ಚಿಸಿದ್ದೇನೆ. ಅಲ್ಲೇ ಸಮೀಪದ ಬೈಯ್ಯಪ್ಪನಹಳ್ಳಿಯ ಸರ್ವೇ ನಂ‌.23 ರಲ್ಲಿ ಸುಮಾರು 1087 ಮನೆಗಳಿವೆ, ಅಧಿಕಾರಿಗಳಿಂದ ಪಟ್ಟಿ ಬಂದ ನಂತರ ಅವರಿಗೆ ಬೈಯ್ಯಪ್ಪನಹಳ್ಳಿಯ ಬಹುಮಹಡಿ ಕಟ್ಟಡದಲ್ಲಿ ಮನೆಗಳ ಹಂಚಿಕೆ ಮಾಡುತ್ತೇವೆ ಎಂದರು.

ಇದು ಕೋಗಿಲು ಇಂದ ಕೇವಲ 7 ಕಿ.ಮೀ ದೂರದಲ್ಲಿದೆ. ಒಂದು ಮನೆಗೆ ಸುಮಾರು ₹11.20 ಲಕ್ಷ ವೆಚ್ಚವಾಗಿದ್ದು, ಇವನ್ನು ಕೊಡುತ್ತೇವೆ. ಸಾಮಾನ್ಯವರ್ಗ, ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಬ್ಸಿಡಿ ಲಭ್ಯವಿದೆ, ಜೊತೆಗೆ ಜಿಬಿಎ ಇಂದ ಪ್ರತಿ ಮನೆಗೆ 5 ಲಕ್ಷ ರೂಪಾಯಿ ನೀಡುವಂತೆ ಸೂಚಿಸಿದ್ದೇನೆ. ಜನರಲ್‌ಗೆ ಎಲ್ಲಾ ಸಬ್ಸಿಡಿ ಸೇರಿ 8 ಲಕ್ಷದ 70 ಸಾವಿರ ರೂಪಾಯಿ ಬರುತ್ತದೆ. ಎಸ್‌ಸಿಎಸ್‌ಟಿಗಳಾದರೆ 9.50 ಲಕ್ಷ ಬರುತ್ತದೆ. ಆಮೇಲೆ ಜನರಲ್‌ಗೆ 2.5 ಲಕ್ಷವನ್ನು ಸಾಲದ ರೂಪದಲ್ಲಿ ಕೊಡತಕ್ಕಂತದ್ದು. ಎಸ್‌ಸಿಎಸ್‌ಟಿಗೆ 1.70 ಲಕ್ಷ ಸಾಲ. ಅದನ್ನು ಜಮೀರ್‌ ಅಹ್ಮದ್‌ ಖಾನ್‌ ಅವರು ವೆರಿಫೇಷರಿಗೆ ಸಾಲ ಕೊಡಿಸ್ತೀನಿ ಅಂತ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ನಾಳೆ, ನಾಡಿದ್ದು ಎರಡು ದಿನ ವೇರಿಫೈ ಮಾಡುತ್ತಾರೆ. ಜನವರಿ 1ರಂದು ಹೊಸ ವರ್ಷ ಪ್ರಾರಂಭದ ದಿನ ಇವರಿಗೆ ವಾಸಕ್ಕೆ ಮನೆಯನ್ನು ಒದಗಿಸಿಕೊಡುವ ಜವಾಬ್ದಾರಿಯನ್ನು ವಸತಿ ಸಚಿವರಾದ ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ ವಹಿಸಲಾಗಿದೆ. ಅಕ್ರಮವಾಗಿ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದರೂ, ಮಾನವೀಯತೆ ದೃಷ್ಟಿಯಿಂದ ಅವರಿಗೆ ವಾಸಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. 1 ಲಕ್ಷ ಮನೆಗಳನ್ನು ನಾವು ಕಟ್ಟಿಸಿರುವುದೇ ಬಡವರಿಗೆ ಸೂರು ಒದಗಿಸಿಕೊಡಲೆಂದು ಎಂದರು.

ಅಕ್ರಮವಾಗಿ ಮನೆ ಕಟ್ಟಿಕೊಂಡಿರುವವರಿಗೆ ಸರ್ಕಾರದಿಂದಲೇ ಮನೆ ಕಟ್ಟಿಸಿಕೊಡುವುದು ಇದೊಂದು ಪ್ರಕರಣಕ್ಕೆ ಮಾತ್ರ ಅನ್ವಯವಾಗುತ್ತದೆ. ಅಕ್ರಮವಾಗಿ ಶೆಡ್ ನಿರ್ಮಿಸಲು ಬಿಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ಇಂತಹ ಅಕ್ರಮ ನಡೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಿದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version