ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಜಿಲ್ಲಾ ಪತ್ರಕರ್ತರ ಭವನದಲ್ಲಿ ಅರ್ಥಪೂರ್ಣವಾಗಿ ನಡೆದ ಅಂಬೇಡ್ಕರ್ – ಬಸವೇಶ್ವರರ ಜಯಂತಿ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಜಿಲ್ಲಾ ಪತ್ರಕರ್ತರ ಭವನದಲ್ಲಿ ಅರ್ಥಪೂರ್ಣವಾಗಿ ನಡೆದ ಅಂಬೇಡ್ಕರ್ – ಬಸವೇಶ್ವರರ ಜಯಂತಿ

ಹಾಸನ : ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಜಿಲ್ಲಾ ಪತ್ರಕರ್ತರ ಸಂಘದಿಂದ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಬಸವೇಶ್ವರರ ಜಯಂತಿ
ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದೆ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಶ್ರೀ ಬಸವೇಶ್ವರರ ಭಾವಚಿತ್ರಗಳಿಗೆ ಭಾಗವಹಿಸಿದ್ದ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಎಚ್.ಬಿ ಮದನ ಗೌಡ ಮಾತನಾಡಿ, ಯಾವುದೇ ಮಹನೀಯರ, ದಾರ್ಶನಿಕರ ಜಯಂತಿ ಆಚರಿಸಬಾರದು ಎಂದು ಸಂಘದ ಬೈಲಾದಲ್ಲಿ ಇಲ್ಲ. ಹಾಗಾಗಿ ಮೇರು ನಾಯಕರ ಜಯಂತಿ ಯನ್ನು ಪತ್ರಕರ್ತರ ಸಂಘದಲ್ಲಿ ಆಚರಿಸು ವುದು, ಆ ಮೂಲಕ ಅವರ ಸಂದೇಶ ಮನನ ಮಾಡಿ ಕೊಳ್ಳುವುದು ಒಳ್ಳೆಯ ಬೆಳವಣಿಗೆ. ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಜಾತ್ಯತೀತ ಆಲೋಚನೆಯೊಂದಿಗೆ ಡಾ. ಅಂಬೇಡ್ಕರ್ ಹಾಗೂ ಬಸವೇಶ್ವರರ ಜಯಂತಿ ಆಚರಣೆ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ ಎಂದರು. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಹೆಚ್. ವೇಣು ಕುಮಾರ್ ಮಾತನಾಡಿ, ಪತ್ರಿಕೋದ್ಯಮಕ್ಕೆ ಯಾವುದೇ ಸೆಕ್ಷನ್ ಇಲ್ಲ. ಆದರೆ ಪತ್ರಕರ್ತರಿಗೆ ಮಾತನಾಡುವ ವಾಕ್ ಸ್ವಾತಂತ್ರ÷್ಯ ಸಿಕ್ಕಿದ್ದು ಅಂಬೇಡ್ಕರ್ ರಚನೆ ಮಾಡಿರುವ ಸಂವಿಧಾನದಿಂದ. ಅವರಿಂದ ನಾವು ನಿರ್ಭಿಡೆಯಿಂದ ಮಾತನಾಡುವ ದನಿ ಬಂದಿದೆ ಎಂದರು. ಬಸವಣ್ಣ ಅವರು 12ನೇ ಶತಮಾನದಲ್ಲೇ ಜಾತಿ ವ್ಯವಸ್ಥೆ ವಿರುದ್ದ ಹೋರಾಡಿ ಸಮ ಸಮಾಜ ನಿರ್ಮಾಣಕ್ಕಾಗಿ ಅನುಭವ ಮಂಟಪ ಮೂಲಕ ಶ್ರಮಿಸಿದರು ಎಂದು ನೆನಪಿಸಿದರು. ಅಂಬೇಡ್ಕರ್ ವಿರಚಿತ ಸಂವಿಧಾನ ಈ ನೆಲದ ಶಕ್ತಿ. ಪ್ರತಿಯೊಬ್ಬರೂ ಅವರನ್ನು ಗೌರವಿಸು ತ್ತಾರೆ. ಆದರೆ ಕೆಲವರು ಅಂಬೇಡ್ಕರ್ ಅವರನ್ನು ಸೀಮಿತಗೊಳಿಸಿ ಕೇವಲ ಹೆಸರು ಬಳಕೆ ಮಾಡಿಕೊಳ್ಳು ತ್ತಿರುವುದಕ್ಕೆ ನನ್ನ ವಿರೋಧ ಇದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಿ.ಕೆ. ಮಂಜಯ್ಯ ಅವರನ್ನು ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಬಿ.ಆರ್. ಉದಯಕುಮಾರ್, ಬಾಳುಗೋಪಾಲ್, ಲೀಲಾವತಿ, ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಸಿ. ಶಶಿಧರ್, ಸಂಪಾದಕರಾದ ಕೆ.ಪಿ.ಎಸ್ .ಪ್ರಮೋದ್, ಬಿ.ಸಿ. ಚೌಡುವಳ್ಳಿ ಜಗದೀಶ್, ವಿವಿಧ ಪತ್ರಿಕೆಗಳ ಸಂಪಾದಕರು, ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಹೆಚ್.ಟಿ. ಮೋಹನ್ ಕುಮಾರ್ ಎಲ್ಲರನ್ನೂ ಸ್ವಾಗತಿಸಿ, ಕಾರ್ಯಕ್ರಮ ನಿರೂಪಣೆ ಮಾಡಿದರು. ಮತ್ತೋರ್ವ ಉಪಾಧ್ಯಕ್ಷ ಕೆ.ಎಂ. ಹರೀಶ್

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು