ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜಕೀಯವಾಗಿ ಸ್ವತಂತ್ರಗೊಂಡಿದ್ದ ನಮಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಕೊಡಿಸಲು ಅಂಬೇಡ್ಕರ್ ಹೋರಾಟ ಮುಂದುವರೆಸಿದರು: ಸಿ.ಎಂ ಸಿದ್ದರಾಮಯ್ಯ

P

Peepal Media • ರಾಜ್ಯ

• 1 ನಿಮಿಷದ ಓದು

ರಾಜಕೀಯವಾಗಿ ಸ್ವತಂತ್ರಗೊಂಡಿದ್ದ ನಮಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಕೊಡಿಸಲು ಅಂಬೇಡ್ಕರ್ ಹೋರಾಟ ಮುಂದುವರೆಸಿದರು: ಸಿ.ಎಂ ಸಿದ್ದರಾಮಯ್ಯ

ನಂಜನಗೂಡು ಜು 10: ಬ್ರಿಟೀಷರಿಂದ ಬಿಡುಗಡೆಗೊಂಡು ರಾಜಕೀಯವಾಗಿ ಸ್ವತಂತ್ರಗೊಂಡಿದ್ದ ಶೋಷಿತ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಕೊಡಿಸಲು ಅಂಬೇಡ್ಕರ್ ಹೋರಾಟ ಮುಂದುವರೆಸಿದರುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ನಂಜನಗೂಡಿನಲ್ಲಿ ದಲಿತ ಮತ್ತು ಸಾಮಾಜಿಕ ಹೋರಾಟಗಾರರು ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತೋತ್ಸವ ಮತ್ತು ನಮ್ಮ ನಡಿಗೆ ಸಂವಿಧಾನದ ಕಡೆಗೆ ಅಭಿಯಾನವನ್ನು ಉದ್ಘಾಟಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿ, ಸನ್ಮಾನಿಸಿ ಮಾತನಾಡಿದರು.

ಮನುಷ್ಯ ತಾರತಮ್ಯವನ್ನು ಆಚರಿಸುವ ಚಾತುರ್ವರ್ಣ ಮತ್ತು ಜಾತಿ ವ್ಯವಸ್ಥೆಯನ್ನು ದೇವರು ಸೃಷ್ಟಿಸಿದ್ದಲ್ಲ. ತಮ್ಮ ಸ್ವಾರ್ಥಕ್ಕಾಗಿ ಕೆಲವು ಮನುಷ್ಯರೇ ಸೃಷ್ಟಿಸಿದ್ದು. ಈ ತಾರತಮ್ಯವನ್ನು ಅಳಿಸುವುದೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೋರಾಟದ ಉದ್ದೇಶವಾಗಿತ್ತು. ಈ ಉದ್ದೇಶಕ್ಕಾಗಿ ಹೋರಾಟ ಮುಂದುವರೆಸುವುದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದರು.

ಅಂಬೇಡ್ಕರ್ ಅವರು ಈ ರೀತಿಯ ಸಂವಿಧಾನ ಕೊಡದೇ ಹೋಗಿದ್ದರೆ ನಾನು ಮುಖ್ಯಮಂತ್ರಿ ಆಗಲು ಸಾಧ್ಯವೇ ಆಗುತ್ತಿರಲಿಲ್ಲ. ನರೇಂದ್ರ ಮೋದಿಯವರು ಪ್ರಧಾನಿ ಆಗಲು ಸಾಧ್ಯವಾಗುತ್ತಿರಲಿಲ್ಲ ಎಂದರು.

ಅಂಬೇಡ್ಕರ್ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರತಿಯೊಬ್ಬರೂ ಸ್ವಾಭಿಮಾನದಿಂದ ನಡೆದುಕೊಳ್ಳಬೇಕು. ಸಾವಿರಾರು ವರ್ಷಗಳದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಶೂದ್ರ, ದಲಿತರು ಮತ್ತು ಮಹಿಳೆಯರಿಗೆ ಅಂಬೇಡ್ಕರ್ ಅವರ ಸಂವಿಧಾನ ಶಿಕ್ಷಣದ ಹಕ್ಕನ್ನು ಒದಗಿಸಿಕೊಟ್ಟಿತು. ಅದಕ್ಕೂ ಮೊದಲು ಮೇಲು ಜಾತಿಯ ಮಹಿಳೆಯರಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ ಎಂದರು.

ಈ ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಯಾರಿಗೆ ಇತಿಹಾಸ ಗೊತ್ತಿರುವುದಿಲ್ಲವೋ ಅವರು ಭವಿಷ್ಯವನ್ನೂ ರೂಪಿಸಲಾರರು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಪ್ರಸ್ತಾಪಿಸಿದರು.

ಗುತ್ತಿಗೆಯಲ್ಲಿ ದಲಿತ ಸಮುದಾಯಕ್ಕೆ ಮೀಸಲಾತಿ ತಂದಿದ್ದು, ದಲಿತ ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಅಭಿವೃದ್ಧಿ ಆಯವ್ಯಯದಲ್ಲಿ ಹಣ ದಲಿತರ ಅಭಿವೃದ್ಧಿಗೆ ಮೀಸಲಿಟ್ಟು ಕಾಯ್ದೆ ಮಾಡಿರುವುದು ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಾತ್ರ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ ಇದು ಜಾರಿಯಲ್ಲಿಲ್ಲ ಎಂದರು.
ಸಂವಿಧಾನ ಬದಲಾವಣೆಯ ಕೂಗನ್ನು ಕೆಲವರು ಹಾಕುತ್ತಿದ್ದಾರೆ. ಸಂವಿಧಾನ ಬದಲಾದರೆ ನಂತರದ ಧಾರುಣ ಬದುಕನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದರು.

ಸಚಿವ ಹೆಚ್.ಸಿ.ಮಹದೇವಪ್ಪ, ಶಾಸಕ ದರ್ಶನ್ ದ್ರುವನಾರಾಯಣ್ ಸೇರಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ದಲಿತ ಮುಖಂಡರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version