ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎಲ್ಲ ವರ್ಗದವರ ಏಳಿಗೆಗೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ ಮಹಾನ್ ಚೇತನ ಡಾ ಬಿ ಆರ್ ಅಂಬೇಡ್ಕರ್

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಎಲ್ಲ ವರ್ಗದವರ ಏಳಿಗೆಗೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ ಮಹಾನ್ ಚೇತನ ಡಾ ಬಿ ಆರ್ ಅಂಬೇಡ್ಕರ್

ಬಳ್ಳಾರಿ,ಡಿ. ವಿಧಾನದ ಆಶಯಗಳನ್ನು ಪಾಲಿಸಲು ಎಲ್ಲ ವರ್ಗಕ್ಕೂ ಅವಕಾಶ ಕಲ್ಪಿಸಿದ ಮಹಾನ್ ಚೇತನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಎಂದು ವಿಜಯಪುರದ ಸಾಮಾಜಿಕ ಹೋರಾಟಗಾರ್ತಿ ಅಕ್ಷತಾ.ಕೆ.ಸಿ ಅವರು ಹೇಳಿದರು.
ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಬೇಡ್ಕರ್ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ನಿರ್ಲಕ್ಷö್ಯ ಹಾಗೂ ತಾತ್ಸಾರಕ್ಕೆ ಒಳಗಾಗಿದ್ದ ಮಹಿಳೆಯರ ಪರವಾಗಿ ಧ್ವನಿ ಎತ್ತಿದವರು ಅಂಬೇಡ್ಕರ್ ಅವರು. ಶೋಷಿತ ವರ್ಗದ ಏಳ್ಗೆಗಾಗಿ ಜೀವನ ಮುಡಿಪಾಗಿಟ್ಟ ಬಾಬಾ ಸಾಹೇಬರು, ಸಂವಿಧಾನದ ಪ್ರತಿ ಪುಟದಲ್ಲೂ ಇಂದಿಗೂ ಜೀವಿಸುತ್ತಿದ್ದಾರೆ ಎಂದರು.
ಇತಿಹಾಸ ಎಂಬುದು ತಾಯಿಗರ್ಭದಷ್ಟೆ ಪವಿತ್ರವಾದದ್ದು, ಹಾಗಾಗಿ ಪ್ರತಿ ಸಂಗತಿಗಳನ್ನು ವೈಜ್ಞಾನಿಕ ನೆಲೆಗಟ್ಟಿನಲ್ಲಿ ಚಿಂತಿಸುವುದು ಯೋಗ್ಯ ಎಂದು ತಿಳಿಸಿದರು.
ಮೌಢ್ಯ ಆಚರಣೆ, ಧರ್ಮದ ಅಮಲು ಬದಿಗೊತ್ತಿ ಸಂವಿಧಾನದ ಚೌಕಟ್ಟಿನಲ್ಲಿ ಜಾತ್ಯತೀತ ರಾಷ್ಟçದಲ್ಲಿ ನಾವೆಲ್ಲ ಸಹಬಾಳ್ವೆಯಿಂದಜೀವನ ನಡೆಸಬೇಕು ಎಂದು ಕರೆ ನೀಡಿದರು.
ಶೋಷಣೆ ರಹಿತ ಸಮಾಜ, ಗೌರವಯುತ ಸಹಬಾಳ್ವೆ, ಸಮಾನತೆ, ಏಕತೆ ಪರಿಕಲ್ಪನೆಗೆ ನಾಂದಿ ಹಾಡಿದ ಅಂಬೇಡ್ಕರ್ ಅವರು ಎಂದೆAದಿಗೂ ಅಮರ ಎಂದು ಹೇಳಿದರು.
ವಿವಿಯ ಸಿಂಡಿಕೇಟ್ ಸದಸ್ಯರಾದ ಜಯಲಕ್ಷಿö್ಮ ನಾಯಕ್ ಅವರು ಮಾತನಾಡಿ, ಕೇವಲ ನಿಯಮಗಳನ್ನು ರೂಪಿಸುವುದು, ನಿಯಮಗಳನ್ನು ಪಾಲಿಸುವುದು ವಿಶ್ವವಿದ್ಯಾಲಯದ ಕೆಲಸವಾಗದೇ ಮಾನವೀಯ ಮೌಲ್ಯಗಳನ್ನು ರೂಪಿಸುವ ಕೇಂದ್ರವಾಗಬೇಕು ಎಂಬುದು ಬಾಬಾಸಾಹೇಬರ ಕನಸಾಗಿತ್ತು. ಇದನ್ನು ನಾವೆಲ್ಲರೂ ಪಾಲಿಸಿ ಸಮಾಜಕ್ಕೆ ತಮ್ಮ ಹಕ್ಕುಗಳ ಬದ್ಧತೆ ಪ್ರದರ್ಶಿಸಲು ನೆರವಾಗಬೇಕು ಎಂದರು.
ಕುಲಪತಿ ಪ್ರೊ.ಎಂ.ಮುನಿರಾಜು ಅವರು ಮಾತನಾಡಿ, ಹಿಂದುಳಿದ ವರ್ಗದವರೇ ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಯ ಮಕ್ಕಳಿಗೆ ಅನುಕೂಲವಾಗುವಂತೆ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಫರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ಆರಂಭಿಸಲಾಗುವುದು ಎಂದು ಘೋಷಿಸಿದರು.
ಅಂಬೇಡ್ಕರ್ ಅವರು ಕೇವಲ ದಲಿತ ನಾಯಕರಲ್ಲ, ಅವರೊಬ್ಬ ವಿಶ್ವ ನಾಯಕ ಎಂದು ಬಣ್ಣಿಸಿದರು.
ಕುಲಸಚಿವ ರುದ್ರೇಶ್.ಎಸ್.ಎನ್., ಮೌಲ್ಯಮಾಪನ ಕುಲಸಚಿವ ಪ್ರೊ.ರಮೇಶ್ ಓಲೇಕಾರ್, ಕಾರ್ಯಕ್ರಮ ಸಂಯೋಜಕರಾದ ಪ್ರೊ.ಗೌರಿ ಮಾಣಿಕ್ ಮಾನಸ ವೇದಿಕೆಯಲ್ಲಿದ್ದರು.
ಡಾ.ಕವಿತಾ ಸಾಗರ್ ನಿರೂಪಿಸಿ, ವಂದಿಸಿದರು. ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಷಯಗಳು: #karnataka #peepal #peepalmedia
PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು