ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮನೆ ಮನೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಿಸುವಂತಾಗಬೇಕು : ಚಿಂತಕ ಪ್ರೊ. ಎಂ.ಎಸ್. ಶೇಖರ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಮನೆ ಮನೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಿಸುವಂತಾಗಬೇಕು : ಚಿಂತಕ ಪ್ರೊ. ಎಂ.ಎಸ್. ಶೇಖರ್

ಹಾಸನ : ಪ್ರಪಂಚದದ್ಯಾಂತ ಡಾ.ಬಿ .ಆರ್ ಅಂಬೇಡ್ಕರ್‌ರವರ ದಿನಾಚರಣೆಯನ್ನು ವಿಶ್ವಜ್ಞಾನಿ ದಿನಾಚರಣೆಯಾಗಿ ಆಚರಿಸುತ್ತಾರೆ, ಆದರೆ ಭಾರತದಲ್ಲಿ ಅವರನ್ನು ಜಾತಿಯ ಹಿನ್ನಲೆಯಲ್ಲಿ ನೋಡಿ ಅವರ ಪೋಟೋಗಳಿಗೆ ಮಸಿ ಬಳಿಯವಂತಹ ಹೇಯ ಕೃತ್ಯಗಳನ್ನು ಮಾಡುತ್ತಾರೆ ಎಂದು ಪ್ರಾಧ್ಯಾಪಕರು, ಪ್ರಸಿದ್ಧ ಚಿಂತಕರು, ಬರಹಗಾರರಾದ ಪ್ರೊ. ಎಂ.ಎಸ್. ಶೇಖರ್ ಬೇಸರ ವ್ಯಕ್ತಪಡಿಸಿದರು.
ನಗರದ ಎಂ.ಕೃಷ್ಣ ಕಾನೂನು ಕಾಲೇಜಿನಲ್ಲಿ ನೆಡೆದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಮುಖ್ಯ ಭಾಷಣಾಕಾರಾಗಿ ಮಾತನಾಡಿದ ಅವರು, ಒಬ್ಬ ವ್ಯಕ್ತಿ ಇಷ್ಟು ಆಳವಾದ ಜ್ಞಾನವನ್ನು ಸಂಪಾದಿಸುವುದು ಅಷ್ಟು ಸುಲಭವಲ್ಲ ಇವರು ಅಧ್ಯಯನ ಮಾಡದ ವಿಷಯವೇ ಇಲ್ಲ ಆದ್ದರಿಂದ ಇವರನ್ನು ವಿಶ್ವಜ್ಞಾನಿ ಎಂದು ಕರೆಯುತ್ತಾರೆ ದೇಶದಲ್ಲಿ ಇವರನ್ನು ರಾಜಕೀಯ ಬೆಳೆ ಬೆಯಿಸಿಕೊಳ್ಳುವ ಸಲುವಾಗಿ ಮತ್ತು ಓಟಿನ ಬ್ಯಾಂಕಿಗಾಗಿ ಇವರ ಪೋಟೋಗಳನ್ನು ವಲ್ಲದ ಮನಸ್ಸಿಂದ ಆಚರಿಸುತ್ತಾರೆ ಎಂದರು. ಅಂಬೇಡ್ಕರ್ ರವರು ಈ ದೇಶದ ಆಸ್ತಿ, ಹಾಗಾಗಿ ಇವರನ್ನು ಪೊಸ್ಟ್ರ್‌ಗಳಲ್ಲಿ ಅಥವಾ ಬ್ಯಾನರ್‌ಗಳಲ್ಲಿ ರಾರಾಜಿಸುವ ಹೊರತು ಭಾರತದ ಮನೆ ಮನೆಯಲ್ಲಿ ಅವರ ಪೋಟೋ ಇಟ್ಟು ಆಚರಣೆ ಮಾಡುವಂತಹ ವಾತಾವರಣ ಸೃಷ್ಟಿಯಾಗಬೇಕು ಆಗಿದ್ದಾಗ ಮಾತ್ರ ಇವರ ಜನ್ಮ ದಿನಾಚರಣೆಗೆ ಒಂದು ಅರ್ಥವಿರುತ್ತದೆ. ಎಂದು ಮುಂದುವರೆದು ಬಾಬಾಸಾಹೇಬ್ ಅಂಬೇಡ್ಕರ್ ರವರು ಬರೆದಂತಹ ಗ್ರಂಥ ಆದುವೇ “ಸಂವಿಧಾನ” ಅದು ಈ ದೇಶದ ಪವಿತ್ರ ಗ್ರಂಥ. ಈ ದೇಶದ ಪ್ರತಿಯೊಬ್ಬ ನಾಗರೀಕನಿಗೂ ಸಮಾನ ಬದುಕು, ಸ್ವತಂತ್ರ ಬದುಕು, ರಾಜಕೀಯ ಬದುಕು, ದಾರ್ಮಿಕ ಬದುಕು, ವಿಶೇಷವಾಗಿ ಮಹಿಳೆಯರಿಗೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯದಾಗಿ ಸಮಾನವಾಗಿ ಮತ್ತು ಪುರುಷರಿಗೆ ಸರಿಸಮಾನರಾಗಿ ಬದುಕುವ ಹಕ್ಕು ಕಲ್ಪಿಸದಂತಹ ಒಬ್ಬ ಮಹಾನ್ ಪುರುಷ ಡಾ. ಬಿ.ಆರ್ ಅಂಬೇಡ್ಕರವರು, ಭಾರತ ದೇಶ ಈ ದೇಶದ ಪರಂಪರೆ, ಜಾತಿ ವ್ಯವಸ್ಥೆ ರಾಜಕೀಯ ವ್ಯವಸ್ಥೆಯ ಬಗ್ಗೆ ಅಪಾರವಾದಂತಹ ಒಂದು ಜ್ಞಾನವನ್ನು ಅವರು ಹೊಂದಿದ್ದರು. ಹಾಗಾಗಿಯೇ ಅವರು ಈ ದೇಶದ ಸರ್ವಜನಾಂಗದ ರಕ್ಷಣೆಯಾದಂತಹ ಪವಿತ್ರಗ್ರಂಥವಾದ ಭಾರತದ ಸಂವಿಧಾನವನ್ನು ರಚಿಸಿದರು. ಅಂಬೇಡ್ಕರ್ ರವರು ನೆನಪು ಅಂದರೆ ಅದು ಸತ್ಯದ ನೆನಪು ಮಾನವೀಯತೆಯ ನೆನಪು, ಸ್ವಾಭಿಮಾನದ ನೆನಪು ಎಂಬ ಅಭಿಪ್ರಾಯ ವ್ಯಕ್ತಪಡಿಸಿ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ ಕೃಷ್ಣ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ. ವಿ ಶ್ರೀನಿವಾಸ ವಹಿಸಿದ್ದರು, ಕಾರ್ಯಕ್ರಮ ಸಂಯೋಜ ಡಾ. ಉಮೇಶ ಎಂ.ಬಿ ಉಪನ್ಯಾಸಕರಾದ ಚಂದ್ರಹಾಸ ಡಾ. ಹೇಮಂತಕುಮಾರ್ ಶ್ರೀಮತಿ ರೇಖಾ ಕೆ.ಎಸ್. ಮತ್ತು ಸೀಮಾ ಫಿರ್ದೋಸ್ ಮತ್ತು ಭೋದಕೇತರ ಸಿಬ್ಬಂದಿಗಳು ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು