ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ʼಕನ್ನಡತಿ ಉತ್ಸವ-2022ʼ ರ ಅಂಗವಾಗಿ ʼಮಿಸ್‌ ಮಹಾಲಕ್ಷ್ಮೀʼ ಒಂದು ವಿನೂತನ ರ್‍ಯಾಂಪ್ ವಾಕ್‌

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ʼಕನ್ನಡತಿ ಉತ್ಸವ-2022ʼ ರ ಅಂಗವಾಗಿ ʼಮಿಸ್‌ ಮಹಾಲಕ್ಷ್ಮೀʼ ಒಂದು ವಿನೂತನ ರ್‍ಯಾಂಪ್ ವಾಕ್‌

ಬೆಂಗಳೂರು: ʼಅವಳ ಹೆಜ್ಜೆʼ ಸರ್ಕಾರೇತರ ಸಂಸ್ಥೆಯು ನವೆಂಬರ್‌ 13ರಂದು ಭಾನುವಾರ ಬೆಳಿಗ್ಗೆ 10.30ರಿಂದ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನ ಗೆಳೆಯರ ಬಳಗದಲ್ಲಿರುವ ಡಾ. ರಾಜ್‌ ಕುಮಾರ್‌ ಒಳಾಂಗಣ ಕ್ರೀಡಾಂಗಣದಲ್ಲಿ ಕನ್ನಡತಿ ಉತ್ಸವ ಹಮ್ಮಿಕೊಂಡಿದ್ದು ಇದರ ಅಂಗವಾಗಿ ವಿನೂತನ ಶೈಲಿಯ ಪ್ಯಾಶನ್‌ ಶೋ- PASSION SHOW ಹಮ್ಮಿಕೊಂಡಿದೆ.

ಈ ಕುರಿತು ಇಂದು ನಗರದ ಪ್ರೆಸ್‌ ಕ್ಲಬ್‌ನಲ್ಲಿ ʼಅವಳ ಹೆಜ್ಜೆʼ ಸ್ಥಾಪಕರಾದ ಶಾಂತಲಾ ದಾಮ್ಲೆ ಮಾಹಿತಿ ನೀಡಿದರು.

ʼಸತತ 6 ವರ್ಷಗಳಿಂದ ʼಕನ್ನಡತಿ ಉತ್ಸವʼ ವನ್ನು ವಾರ್ಷಿಕ ಹಬ್ಬವಾಗಿ ನಡೆಸಿಕೊಂಡು ಬರುತ್ತಿರುವ ಅವಳ ಹೆಜ್ಜೆ ಈ ಬಾರಿ 2022ರ ʼಕನ್ನಡತಿ ಉತ್ಸವʼವನ್ನು ಅತ್ಯಂತ ವಿಭಿನ್ನವೂ ವಿನೂತನವೂ ಆಗಿ ಆಚರಿಸಲು ತೀರ್ಮಾನಿಸಲಾಗಿದೆʼ ಎಂದು ತಿಳಿಸಿದರು. ʼಈ ಪ್ಯಾಶನ್‌ ಶೋ ನಲ್ಲಿ ಮಹಿಳೆಯರು ಮತ್ತು ಹೆಣ್ಣುಮಕ್ಕಳು ತಮ್ಮ ವೈಯಕ್ತಿಕ ಕನಸು, ಕಸುಬು ಮತ್ತು ಕಲೆಯನ್ನು ಉಡುಗೆ-ತೊಡುಗೆ, ವೇಷಭೂಷಣಗಳ ಮೂಲಕ ವೇದಿಕೆ ಮೇಲೆ ಪ್ರದರ್ಶಿಸಲಿದ್ದು ಕಾರ್ಯಕ್ರಮಕ್ಕೆ ಈಗಾಗಲೇ 7 ವರ್ಷದ ಮಗುವಿನಿಂದ 70 ವರ್ಷದ ಹಿರಿಯರವರೆಗೆ ಅನೇಕ ಮಹಿಳೆಯರು ನೊಂದಾಯಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದರು. ʼವೈದ್ಯಕೀಯ, ವಕೀಲಿ, ಫಾರ್ಮಾಸಿ, ಕೇಶ ವಿನ್ಯಾಸ, ಬಾಹ್ಯಾಕಾಶ ವಿಜ್ಞಾನ, ವನ್ಯಜೀವಿ ಛಾಯಾಗ್ರಾಹಣ, ಸಮಾಜ ಸೇವೆ, ಕಸೂತಿ, ಶಿಕ್ಷಣ, ಫ್ಯಾಷನ್‌ ಡಿಸೈನ್, ಮಾಡಲಿಂಗ್, ಜಿಮ್‌, ಯೋಗ, ಸಾಹಿತ್ಯ, ಗಾಯನ, ಭರತನಾಟ್ಯ, ಕಥಕ್‌, ಯಕ್ಷಗಾನ, ಚಿತ್ರಕಲೆ, ನಾಟಕ, ಆಭರಣ ವಿನ್ಯಾಸ, ಆಪ್ತ ಸಮಾಲೋಚನೆ ಮುಂತಾದ ಕ್ಷೇತ್ರಗಳನ್ನು ಪ್ರತಿನಿಧಿಸಲಿದ್ದಾರೆʼ ಎಂದರು.

ಹೆಚ್ಚಿನ ವಿವರಗಳಿಗೆ 9972947589 ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ ಎಂದು ʼಅವಳ ಹೆಜ್ಜೆʼ ಸಂಸ್ಥಾಪಕರಾದ ಶಾಂತಲಾ ದಾಮ್ಲೆ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಬರಹಗಾರ್ತಿ ದೀಪಾ ಹಾಜರಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು