ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ʼತಿಮ್ಮಯ್ಯ & ತಿಮ್ಮಯ್ಯʼ ಚಿತ್ರದಲ್ಲಿ ಅನಂತನಾಗ್ ಹಾಗೂ ದಿಗಂತ್

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ʼತಿಮ್ಮಯ್ಯ & ತಿಮ್ಮಯ್ಯʼ ಚಿತ್ರದಲ್ಲಿ ಅನಂತನಾಗ್ ಹಾಗೂ ದಿಗಂತ್

ಬೆಂಗಳೂರು: ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ಅನಂತನಾಗ್ ಹಾಗೂ ದೂದ್ ಪೇಡ ಎಂದೇ ಖ್ಯಾತರಾಗಿರುವ ದಿಗಂತ್ ಕಾಂಬಿನೇಶನ್ ನಲ್ಲಿ ಮೂಡಿಬಂದಿರುವ “ತಿಮ್ಮಯ್ಯ & ತಿಮ್ಮಯ್ಯ” ಚಿತ್ರ ತೆರೆಗೆ ಬರಲು ಅಣಿಯಾಗಿದೆ.

ಇತ್ತೀಚಿಗೆ ಈ ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅನಂತನಾಗ್ ಹಾಗೂ ದಿಗಂತ್, ತಾತ – ಮೊಮ್ಮಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರ ನಡುವಿನ ಬಾಂಧವ್ಯದ ಸನ್ನಿವೇಶಗಳೇ ಚಿತ್ರದ ಹೈಲೆಟ್. ಮೂವತ್ತು ವರ್ಷಗಳ ನಂತರ ತಾತ ಹಾಗೂ ಮೊಮ್ಮಗ ಭೇಟಿಯಾದಾಗ ಯಾವ ರೀತಿ ಇರಬಹುದು? ಎಂಬುದನ್ನು ಟೀಸರ್ ಮೂಲಕ ನಿರ್ದೇಶಕ ಸಂಜಯ್ ಶರ್ಮ ಮನಮುಟ್ಟುವಂತೆ ತೋರಿಸಿದ್ದಾರೆ. ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಪ್ರಶಂಸೆ ದೊರಕುತ್ತಿದೆ.

ಗರುಡ ಮೋಷನ್ ಪಿಕ್ಚರ್ಸ್ ಪ್ರೈ ಲಿ ಲಾಂಛನದಲ್ಲಿ ರಾಜೇಶ್ ಶರ್ಮ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮೂಲತಃ ಕನ್ನಡದವರೇ ಆಗಿರುವ ನಿರ್ದೇಶಕ ಸಂಜಯ್ ಶರ್ಮ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಬಾಲಿವುಡ್ ನ ಖ್ಯಾತ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಸಂಜಯ್ ಶರ್ಮ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.

ಚಿತ್ರದಲ್ಲಿ ನಾಲ್ಕು ಸುಮಧುರ ಹಾಡುಗಳಿದ್ದು, ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಜಯಂತ ಕಾಯ್ಕಿಣಿ ಹಾಡುಗಳನ್ನು ಬರೆದಿದ್ದಾರೆ. ಬಾಲಕೃಷ್ಣ ತೋಟ ಛಾಯಾಗ್ರಹಣ ಹಾಗೂ ಸುರೇಶ್ ಅರಸ್ ಸಂಕಲನ ಈ ಚಿತ್ರಕ್ಕಿದೆ. ಬೆಂಗಳೂರು, ಕೊಡಗು ಹಾಗೂ ಕುಣಿಗಲ್ ನಲ್ಲಿ ಚಿತ್ರೀಕರಣ ನಡೆದಿದೆ.

ಅನಂತನಾಗ್, ದಿಗಂತ್, ಶುಭ್ರ ಅಯ್ಯಪ್ಪ, ರುಕ್ಮಿಣಿ ವಿಜಯಕುಮಾರ್, ವಿನೀತ್ ಬೀಪ್ ಕುಮಾರ್, ಪ್ರಕಾಶ್ ತುಮ್ಮಿನಾಡ್, ಕೆ.ಎಸ್.ಶ್ರೀಧರ್, ಮಿಮಿಕ್ರಿ ಗೋಪಿ, ಅಂಬುಜಾಕ್ಷಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು