ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಸುಕಿನ ಜೋಳ ಹಳದಿ ಬಣ್ಣಕ್ಕೆ, ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ – ಶ್ರೀಕಾಂತ್ ಆಗ್ರಹ

ರ

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಮುಸುಕಿನ ಜೋಳ ಹಳದಿ ಬಣ್ಣಕ್ಕೆ, ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ – ಶ್ರೀಕಾಂತ್  ಆಗ್ರಹ

ಹಾಸನ : ಮುಸುಕಿನ ಜೋಳಕ್ಕೆ ಹಳದಿ ರೋಗದಿಂದ ನಷ್ಟ. ಈ ಕೂಡಲೇ ಸರ್ಕಾರ ನಕಲಿ ಬೀಜಗಳನ್ನ ಪತ್ತೆ ಮಾಡಿ ವಿಜ್ಞಾನಿಗಳಿಂದ ಬೆಳೆಯನ್ನು ವೈಜ್ಞಾನಿಕವಾಗಿ ಪರೀಕ್ಷೆ ಮಾಡಿ ರೈತರಿಗೆ ವಿಶೇಷ ಪ್ಯಾಕೇಜ್ ಅನ್ನು ಸರ್ಕಾರ ಘೋಷಣೆ ಮಾಡುವಂತೆ ವಕೀಲರು ಹಾಗೂ ಬಿಜೆಪಿ ಮುಖಂಡ ಶ್ರೀಕಾಂತ್ ಚನ್ನಂಗಿಹಳ್ಳಿ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮುಸುಕಿನ ಜೋಳಕ್ಕೆ ಬಿಳಿ ಸುಳಿರೋಗ, ಬೂಜು ರೋಗ ತಗುಲಿ ಅಪಾರ ಬೆಳೆ ನಷ್ಟವಾಗಿದೆ. ಈಗ ಎಲ್ಲಾ ರೈತರು ಮುಸುಕಿನ ಜೋಳವನ್ನು ಬೆಳೆಯುತ್ತಿರುತ್ತಾರೆ. ಮುಸುಕಿನ ಜೋಳವನ್ನು ಹಾಸನ ಜಿಲ್ಲೆಯಲ್ಲಿ ಆಲೂಗೆಡ್ಡೆಯನ್ನು ಬೆಳೆಯದೆ ಬಿತ್ತಿನೆ ಮಾಡಿದ 25 ದಿನಗಳ ನಂತರ ಜೋಳವು ಹಳದಿ ಬಣ್ಣಕ್ಕೆ ತಿರುಗಿ ಗಿಡವು ನೆಲಕ್ಕೆ ಬಾಗಿ ಬೆಳೆಯ ಬೆಳವಣಿಗೆ ಕುಂಠಿತಗೊಂಡು ನೆಲಕ್ಕೆ ಬಿದ್ದು ಅಪಾರ ನಷ್ಟವಾಗುತ್ತಿದೆ ಎಂದರು. ದಿನ ಕಳದಂತೆ ಹೊಲದಲ್ಲಿ ಮುಜುಕಿನ ಜೋಳವೇ ಇಲ್ಲದಂತಾಗಿ ಎಲ್ಲ ರೈತರು ಜೋಳವನ್ನು ಟ್ಯಾಕ್ಟರ್ ಮುಖಾಂತರ ಜೋಳ ಸಮೇತ ಉಳುಮೆ ಮಾಡಿ ನಾಶ ಮಾಡಿಕೊಂಡಿರುತ್ತಾರೆ. ಹಾಸನ ಜಿಲ್ಲೆಯಲ್ಲಿ 70 ರಿಂದ 75000 ಹೆಕ್ಟರ್ ಗಳಲ್ಲಿ ಜೋಳವನ್ನು ಬೆಳೆಯುತ್ತಿದ್ದು, ಹಾಸನ ತಾಲೂಕು ಒಂದರಲ್ಲಿ 20 ರಿಂದ 30.000 ಹೆಕ್ಟರ್ ಗಳಲ್ಲಿ ಜೋಳವನ್ನು ಬೆಳೆಯುತ್ತಿದ್ದಾರೆ. ಮುಸುಕಿನ ಜೋಳದ ಕಂಪನಿಗಳಾದ ಹೈಟೆಕ್ ಎನ್ನೆ ಗಂಗಾ ಕಾವೇರಿ ಡೆಕ್ಸೆಪ್ ಮತ್ತು ವಿಷ್ಣು ಕಂಪನಿಯ ಜೋಳಗಳು ಹಾಸನದಲ್ಲಿ ಬೀಜಗಳನ್ನು ವಿತರಿಸಿದ್ದು, ಈ ಕಂಪನಿಗಳಲ್ಲಿ ಯಾರು ಬಿಜೋಪಚಾರ ಮಾಡದೆ ರೈತರಿಗೆ ಬೀಜಗಳನ್ನ ವಿತರಣೆ ಮಾಡಿರುತ್ತಾರೋ! ಅವುಗಳಲ್ಲಿ ಹಳದಿ ರೋಗ ಅಥವಾ ಬಿಳಿ ಸುಳಿರೋಗ ಕಂಡುಬರುತ್ತದೆ ಎಂದು ಹೇಳಬಹುದು. ರೈತರು ಕೃಷಿ ಇಲಾಖೆ ಕೊಡುವ ಬೀಜಗಳನ್ನ ಮಾತ್ರ ತೆಗೆದುಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಬಿಲ್ಲುಗಳನ್ನು ತೆಗೆದುಕೊಂಡು ಬೀಜಗಳನ್ನ ಖರೀದಿಸಬೇಕು ಎಂದು ಸಲಹೆ ನೀಡಿದರು.


ಈ ಬೀಜೋಪಚಾರ ಮಾಡದೆ ನಕಲಿ ಬೀಜಗಳನ್ನ ಕೊಟ್ಟಿರುವ ಕಂಪನಿಗಳ ಮೇಲೆ ಗ್ರಾಹಕ ನ್ಯಾಯಾಲಯದಲ್ಲಿ ದಾವೆಗಳನ್ನು ಕೊಡುತ್ತೇನೆ ಎಂದು ಎಚ್ಚರಿಸಿದರು. ಹಾಸನ ಜಿಲ್ಲೆಯ ರೈತರು ಸುಮಾರು ಒಬ್ಬೊಬ್ಬ ರೈತರು 50 ಸಾವಿರದಿಂದ ಒಂದು ಲಕ್ಷದವರೆಗೆ ಸಾಲ ಮಾಡಿಕೊಂಡು ಮುಸ್ಕಿನ ಜೋಳವನ್ನು ಬೆಳೆಯಲು ಬಿತ್ತನೆ ಮಾಡಿರುತ್ತಾರೆ. ಆದರೆ ಮುಸುಕಿನ ಜೋಳದ ಈ ಹಳದಿ ರೋಗದಿಂದ ಪ್ರತಿಯೊಬ್ಬರ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಈ ಕೂಡಲೇ ಸರ್ಕಾರ ನಕಲಿ ಬೀಜಗಳನ್ನ ಪತ್ತೆ ಮಾಡಿ ವಿಜ್ಞಾನಿಗಳಿಂದ ಬೆಳೆಯನ್ನು ವೈಜ್ಞಾನಿಕವಾಗಿ ಪರೀಕ್ಷೆ ಮಾಡಿ ರೈತರಿಗೆ ವಿಶೇಷ ಪ್ಯಾಕೇಜ್ ಅನ್ನು ಸರ್ಕಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು. ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು ಮತ್ತು ಕೃಷಿ ಸಚಿವರು ಹಾಸನ ಜಿಲ್ಲೆಗೆ ಆಗಮಿಸಿ ರೈತರ ನೆರವಿಗೆ ಧಾವಿಸಬೇಕು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಗಿರಿಗೌಡ, ಆದೇಶ್, ಲಕ್ನಾಯಕನಹಳ್ಳಿ ಗಿರೀಶ್ ಇತರರು ಉಪಸ್ಥಿತರಿದ್ದರು.

ವಿಷಯಗಳು: #news #peepal
ರ

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version