ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜಧಾನಿಯಲ್ಲೇ ಮೌಢ್ಯಾಚಾರಣೆ: ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಪತ್ರ ಬರೆದ ಅಜ್ಞಾತ ವ್ಯಕ್ತಿ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ರಾಜಧಾನಿಯಲ್ಲೇ ಮೌಢ್ಯಾಚಾರಣೆ: ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಪತ್ರ ಬರೆದ ಅಜ್ಞಾತ ವ್ಯಕ್ತಿ

ಬೆಂಗಳೂರು: ರಾಜ್ಯದ ಜಿಲ್ಲೆಗಳಲ್ಲಿ ಕಾಡುಗೊಲ್ಲ ಸಮುದಾಯದವರು ವಾಸಿಸುತ್ತಿದ್ದಾರೆ. ಈ ಸಮುದಾಯದವರು ಮುಟ್ಟು, ಹೆರಿಗೆಯಂತಹ ಸಂದರ್ಭದಲ್ಲಿ ಹೆಣ್ಣು ಮಕ್ಕಳನ್ನು ದಿನಗಟ್ಟಲೆ ಮನೆಯಿಂದ ಹೊರಗಿಡುವ ಮೌಢ್ಯಾಚರಣೆಗಳನ್ನು ಪಾಲಿಸಿಕೊಂಡು ಬರುತ್ತಿದ್ದಾರೆ. ಈಗಾಗಲೇ ಅನೇಕ ಕಾಡುಗೊಲ್ಲರ ಹಟ್ಟಿಗಳಲ್ಲಿ ಈ ಮೌಢ್ಯಾಚರಣೆಯನ್ನು ನಿವಾರಿಸುವ ನಿಟ್ಟಿನಲ್ಲಿ ಸಮುದಾಯದ ವಿದ್ಯಾವಂತ ಜನರು ಕಾರ್ಯಕ್ರಮಗಳನ್ನು ಮಾಡಿ ತಿಲಾಂಜಲಿ ಇಟ್ಟಿದ್ದರು.

ಆದರೂ ರಾಜ್ಯ ರಾಜಧಾನಿ ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ಸಿಗೆ ತಾಕಿಕೊಂಡಿರುವ ನಾಗದೇವನಹಳ್ಳಿಯಲ್ಲಿ ಮೌಢ್ಯ ಆಚರಣೆ ಮುಂದುವರೆಸಿರೋ ಆಘಾತಕಾರಿ ಮಾಹಿತಿಯನ್ನು ಪತ್ರದಲ್ಲಿ ಸಚಿವರಿಗೆ ಬರೆದು, ಇದನ್ನು ತೊಡೆದು ಹಾಕುವಂತೆ ಅಜ್ಞಾತ ವ್ಯಕ್ತಿಯೊಬ್ಬರು ಸಚಿವರಿಗೆ ಪತ್ರ ಬರೆದು ವಿನಂತಿಸಿಕೊಂಡಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ನಾಗದೇವನಹಳ್ಳಿ ನಿವಾಸಿಯೊಬ್ಬರು ಬತ್ರ ಬರೆದಿದ್ದು, ʼನಾಗದೇವನಹಳ್ಳಿಯಲ್ಲಿ ಸುಮಾರು ವರ್ಷಗಳಿಂದ ಕಾಡುಗೊಲ್ಲ ಸಮುದಾಯದಲ್ಲಿ ಮುಟ್ಟಾದ ಮಹಿಳೆಯರು 3 ದಿನ ಮನೆಯಿಂದ ಹೊರಗೆ ಬೇರೆ ಕಡೆಯಿರುವುದು ಮತ್ತು ಮಗುವಾದರೇ 2 ತಿಂಗಳು ಮನೆಯಿಂದ ದೂರ ಗುಡಿಸಲು, ರೂಮಿನಲ್ಲಿರುವ ಪದ್ಧತಿಯನ್ನು ಆಚರಿಸುತ್ತಾ ಬಂದಿದ್ದಾರೆʼ ಎಂದಿದ್ದಾರೆ.

ಮುಟ್ಟಾದ ಮತ್ತು ಬಾಣಂತಿಯರಾದ ಮಹಿಳೆಯರು ಮನೆಯೊಳಗಿದ್ದರೆ ಅನಿಷ್ಟ, ಸೂತಕ ಎಂಬುದು ಅವರ ನಂಬಿಕೆಯಾಗಿದೆ. ಇದು ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಬೆಂಗಳೂರಿನ ನಾಗದೇವನಹಳ್ಳಿಯಲ್ಲಿ ನಡೆಯುತ್ತಿದೆ. ಈ ಊರಿನ ಮುಖಂಡರು, ಈ ಅನಿಷ್ಟ ಪದ್ದತಿಯ ಬಗ್ಗೆ ಕಿಂಚಿತ್ತೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಈ ಪದ್ದತಿಯಿಂದಾಗಿ ಇಲ್ಲಿರುವ ಹೆಣ್ಣುಮಕ್ಕಳಿಗೆ ಮಾನಸಿಕ, ದೈಹಿಕ ಹಿಂಸೆಯಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಾನ್ಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ದಯವಿಟ್ಟು ಸಂಬಂಧ ಪಟ್ಟ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೂಕ್ತ ಕ್ರಮಕ್ಕೆ ಸೂಚಿಸಬೇಕು. ಅಧಿಕಾರಿಗಳು ಆಗಮಿಸಿ ಇಲ್ಲಿರುವ ಗಂಡಸರಿಗೆ ಈ ಮೌಢ್ಯಾಚರಣೆಯನ್ನು ನಿಲ್ಲಿಸುವಂತೆ ತಿಳುವಳಿಕೆ ಹೇಳಿ, ಹೆಣ್ಣಮಕ್ಕಳಿಗೆ ನೆಮ್ಮದಿಯ ಜೀವನ ನಡೆಸಲು ಸಹಾಯ ಮಾಡುವಂತೆ ವಿನಂತಿಸಿದ್ದಾರೆ.

ನಾಗದೇವನಹಳ್ಳಿಯ ಕೆಲವೆಡೆ ಈ ಮಹಿಳೆಯರು ಮುಟ್ಟಾದ ಮೂರು ದಿನ ಸರಿಯಾಗಿ ಗಾಳಿ ಪಸರಿಸದ ಇಕ್ಕಟ್ಟಿನ ಮನೆ ಮೆಟ್ಟಿಲಿನಡಿಯ ಕೋಣೆಗಳಲ್ಲಿ ವಾಸಿಸಬೇಕಾಗುತ್ತದೆ. ಹೆರಿಗೆಯ ಸಂದರ್ಭದಲ್ಲಿ ಇನ್ನೂ ಹೆಚ್ಚು ಕಾಲ ವಾಸಿಸ ಬೇಕಾಗುತ್ತದೆ.

ಇದನ್ನೂ ನೋಡಿ: https://www.facebook.com/peepaltvkannada/videos/550523213108774

ವಿಷಯಗಳು: #kannada #karnataka #news #peepal #peepalmedia
PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು