ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಗೆ ಚಾಲನೆ; ರಥಯಾತ್ರೆಯಿಂದ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಚಾರವಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಗೆ ಚಾಲನೆ; ರಥಯಾತ್ರೆಯಿಂದ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಚಾರವಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ 17: ‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಯು ಇಡೀ ರಾಜ್ಯದಲ್ಲಿ ಪ್ರಯಾಣ ಮಾಡಲಿದೆ. ಇದರಿಂದ ವಚನ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಚಾರವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದಲ್ಲಿ ಇಂದು ಆಯೋಜಿಸಲಾಗಿದ್ದ ‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ಕಾರ್ಯಕ್ರಮದ ಲಾಂಛನ ಬಿಡುಗಡೆ ಮತ್ತು ರಥಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಬಸವಣ್ಣನವರು ಸಮಾಜಕ್ಕಾಗಿ ಬದುಕಿದವರು. ಸಮಾಜದ ಬದಲಾವಣೆಗಾಗಿ ಬದುಕಿರುವವರೆಗೂ ಪ್ರಯತ್ನಿಸಿದರು. ಬಸವಣ್ಣನವರ ಅನುಭವ ಮಂಟಪ ಪರಿಕಲ್ಪನೆಯ ಮೂಲಕ 12 ನೇ ಶತಮಾನದಲ್ಲಿಯೇ ಪ್ರಜಾಪ್ರಭುತ್ವದ ಸ್ಥಾಪನೆಯಾಗಿತು. ಇಲ್ಲಿ ಚರ್ಚೆ ಮತ್ತು ಅದಕ್ಕೆ ಪರಿಹಾರವನ್ನು ಕಂಡುಹಿಡಿದು ಅದನ್ನು ಜಾರಿ ಮಾಡುತ್ತಿದ್ದರು. ಜಗತ್ತಿನ ಮೊದಲನೇ ಸಂಸತ್ತು ಇದಾಗಿತ್ತು. ಎಲ್ಲಾ ಧರ್ಮ, ಜಾತಿಯವರಿಗೆ ಭಾಗವಹಿಸಲು ಅವಕಾಶವನ್ನು ಕಲ್ಪಿಸಲಾಗಿತ್ತಲ್ಲದೇ ಅವರ ಅಭಿಪ್ರಾಯವನ್ನು ಮುಕ್ತವಾಗಿ ವ್ಯಕ್ತಪಡಿಸಬಹುದಾಗಿತ್ತು ಎಂದರು.

ಕಳೆದ ಬಾರಿ ನಮ್ಮ ಸರ್ಕಾರದ ಅವಧಿಯಲ್ಲಿ ಬಸವ ಕಲ್ಯಾಣದ ಪುನರುತ್ಥಾನ ಮಾಡಲು ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಪುನರುತ್ಥಾನದ ಕೆಲಸವನ್ನು ಈ ಬಾರಿ ಪೂರೈಸಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಒಪ್ಪಿಕೊಂಡು ಘೋಷಣೆ ಮಾಡಿದೆ

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ನಮ್ಮ ಸರ್ಕಾರ ಘೋಷಣೆಯನ್ನು ಮಾಡಿದೆ. ಕೇವಲ ಘೋಷಣೆ ಮಾಡಿಲ್ಲ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಒಪ್ಪಿಕೊಂಡು ಜಾರಿ ಮಾಡಿದೆ. ಬಸವಣ್ಣ ಸಾಮಾಜಿಕ ಕ್ರಾಂತಿ ಮಾಡಿದವರು. ಸಮಾಜದಲ್ಲಿನ ಸಾಮಾಜಿಕ ರೋಗಗಳಿಗೆ ಪರಿಹಾರವನ್ನು ಸೂಚಿಸಿದ್ದು ಮಾತ್ರವಲ್ಲದೇ ನುಡಿದಂತೆ ನಡೆಯುವ ಹಾಗೂ ನಡೆದಂತೆ ನುಡಿಯುವ ಪ್ರಯತ್ನವನ್ನು ಮಾಡಿದರು ಎಂದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು