ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಟಕಲ್ ದರ್ಗಾದ ಆವರಣ‌ಗೋಡೆ ತೆರವಿಗೆ ಒತ್ತಾಯಿಸಿ ಮನವಿ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ರಟಕಲ್ ದರ್ಗಾದ ಆವರಣ‌ಗೋಡೆ ತೆರವಿಗೆ ಒತ್ತಾಯಿಸಿ ಮನವಿ

ರಟಕಲ್:  ಹಿಂದೂ ಮುಸ್ಲಿಂರ ಸೌಹಾರ್ದ ನೆಲವಾದ ರಟಕಲ್  ಗ್ರಾಮದಲ್ಲಿನ  ಐತಿಹಾಸಿಕ ಮಹೆಬೂಬ್ ಸುಬಹಾನಿ ದರ್ಗಾದ ಪ್ರವೇಶ ದ್ವಾರಕ್ಕೆ ಆವರಣ ಗೋಡೆ ಕಟ್ಟುವ ಮೂಲಕ ಪೊಲೀಸರಿಂದಲೇ ಗ್ರಾಮಸ್ಥರ ಮಧ್ಯೆ ಕೋಮು ದ್ವೇಶ ಬಿತ್ತುವ ಕೆಲಸ ನಡೆದಿದೆ ಎಂದು ನ್ಯಾಯವಾದಿ ಅಶ್ವಿನಿ ಮದನಕರ್ ಆರೋಪಿಸಿದರು.

ಗ್ರಾಮದ ಐತಿಹಾಸಿಕ ಮಹೆಬೂಬ್ ಸುಬಾನಿ ದರ್ಗಾದ ಪ್ರವೇಶ ದ್ವಾರಕ್ಕೆ ಪೊಲೀಸರು ಕಟ್ಟಿರುವ ಆವರಣ ಗೋಡೆಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಸೌಹಾರ್ದ ಸಮಿತಿ ವತಿಯಿಂದ ರಟಕಲ್ ಪೊಲೀಸ್ ಠಾಣೆಗೆ ಇಂದು ಮನವಿ ಸಲ್ಲಿಸಿ ಅವರು ಮಾತನಾಡಿದರು. ಶತಮಾನಗಳಷ್ಟು ಹಳೆಯದಾದ ಹಜರತ್ ಮಹೆಬೂಬ್ ಸುಬಾನಿ ದರ್ಗಾದ ಹಳೆಯ ಪ್ರವೇಶ ದ್ವಾರಕ್ಕೆ ಕಾಂಪೌಂಡ್ ಗೋಡೆ ಕಟ್ಟುವ ಮೂಲಕ ಪೊಲೀಸರು ಭಕ್ತರ ಭಾವನೆಗೆ ಮತ್ತು ಅವರ ನಂಬಿಕೆಗೆ ಅವಮಾನಿಸಿದ್ದಾರೆ ಎಂದು ಅವರು ದೂರಿದರು.

ಪೊಲೀಸ್ ಠಾಣೆಗೂ ಮೊದಲು ದರ್ಗಾ ಇತ್ತು. ಆದರೆ, ಆನಂತರದಲ್ಲಿ ಪೊಲೀಸ್ ಠಾಣೆ ನಿರ್ಮಾಣಕ್ಕೆ ಜಮೀನು ಖರೀದಿಸಿರಬಹುದು. ಆದರೆ ದರ್ಗಾ ಮತ್ತು ಭಕ್ತರ ಭಾವನೆ ಖರೀದಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ನ್ಯಾಯವಾದಿ ರಮೇಶ್ ಕೆ ರಾಗಿ ಮಾತನಾಡಿ, ಪೊಲೀಸ್ ಇಲಾಖೆ ಸಾರ್ವಜನಿಕರ ಸಂಕಟಕ್ಕೆ ಸ್ಪಂದಿಸಲು ಮತ್ತು ಸಮಾಜದಲ್ಲಿ ಶಾಂತಿ ನೆಲೆಸಲು ಪ್ರಯತ್ನಿಸಬೇಕು. ಆದರೆ, ಇಲ್ಲಿನ ಪೊಲೀಸ್ ಅಧಿಕಾರಿಗಳು ಹಜರತ್ ಮಹೆಬೂಬ್ ಸುಬಾನಿ ದರ್ಗಾಕ್ಕೆ ಹೋಗುವ ಅತ್ಯಂತ ಹಳೆಯ ರಸ್ತೆಗೆ ಕಾಂಪೌಂಡ್ ಗೋಡೆ ನಿರ್ಮಿಸುವ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕದಡುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಸಾರ್ವಜನಿಕರಿಗೆ ದೇವರ ದರ್ಶನ ಮಾಡಲು ಸಮಸ್ಯೆ ಉಂಟಾಗುತ್ತಿದೆ, ಹಾಗಾಗಿ, ಈ ಕೂಡಲೇ ಕಾಂಪೌಂಡ್ ಗೋಡೆ ತೆರವುಗೊಳಿಸಿ ಸಾರ್ವಜನಿಕರ ದರ್ಶನಕ್ಕೆ ಅವಕಾಶಮಾಡಿಕೊಡಬೇಕು. ಒಂದು ವೇಳೆ ನಿರ್ಲಕ್ಷ್ಯ ತೋರಿದಲ್ಲಿ ಹಂತ ಹಂತವಾಗಿ ಹೋರಾಟ ರೂಪಿಸಲಾಗುವುದು ಎಂದು ಅವರು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಅಶ್ವಿನಿ ಮದನಕರ್, ಸಾಮಾಜಿಕ ಕಾರ್ಯಕರ್ತ ವಿಕ್ರಮ್ ತೇಜಸ್, ಪ್ರಿಯಾಂಕಾ ಮಾವಿನಕರ್ ಸೇರಿದಂತೆ ನೂರಾರು ಗ್ರಾಮಸ್ಥರು ಇದ್ದರು.

ವಿಷಯಗಳು: #india #kannada #karnataka #peepal #peepalmedia
PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು