ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಸ್ಲಿಂ ಸಮಾಜ ವಿರುದ್ಧ ಅವಹೇಳನ ಹೇಳಿಕೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಸ್ಥಾನ ಅನರ್ಹಕ್ಕೆ ಆಗ್ರಹಿಸಿ ಮನವಿ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಮುಸ್ಲಿಂ ಸಮಾಜ ವಿರುದ್ಧ ಅವಹೇಳನ ಹೇಳಿಕೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಸ್ಥಾನ ಅನರ್ಹಕ್ಕೆ ಆಗ್ರಹಿಸಿ ಮನವಿ

ಹಾಸನ : ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡರವರು ಅಲ್ಪಸಂಖ್ಯಾತ ಮುಸ್ಲಿಂ ಸಮಾಜವನ್ನು ಅವಹೇಳನ ಮಾಡಲಾಗಿದ್ದು, ಇದನ್ನ ವಿರೋಧಿಸಿ ಕೂಡಲೇ ಪಕ್ಷದಿಂದ ಉಚ್ಛಾಟಿಸಲು ಹಾಗೂ ಶಾಸಕ ಸ್ಥಾನದಿಂದ ಅನರ್ಹ ಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಅಲ್ಪಸಂಖ್ಯಾತರ ಹಿತರಕ್ಷಣಾ ವೇಧಿಕೆಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.


ವೀರಕನ್ನಡಿಗ ಟಿಪ್ಪು ಸೇನೆಯ ಪದಾಧಿಕಾರಿ ಅಕ್ಮಲ್ ಪಾಷಾ ಮಾಧ್ಯಮದೊಂದಿಗೆ ಮಾತನಾಡಿ, ಇದೆ ವೇಳೆ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡರವರು ಸಾರ್ವಜನಿಕವಾಗಿ ಬಹಿರಂಗವಾಗಿ ಮುಸಲ್ಮಾನ್ ಸಮಾಜದ (ಸಾಬರ) ರವರಿಗೆ ಬಗರ್‌ಹುಕ್ಕಂ ಯೋಜನೆಯಡಿ ಕೆಲವು ಮುಸ್ಲಿಂಸಮಾಜದವರು ಸಂಬಂಧಪಟ್ಟ ವರ ಇಲಾಖೆ ಅಧಿಕಾರಿಗಳಲ್ಲಿ ದಾಖಲೆ ಮಾಡಿಕೊಡಲು ಅರ್ಜಿ ಸಲ್ಲಿಸದನ್ನು ಅಧಿಕಾರಿಗಳಿಗೆ ಪ್ರಶ್ನೆ ಮಾಡುತ್ತಿರುವ ಶಾಸಕರು ಬಹಿರಂಗವಾಗಿ ಸಾಬರ್‌ಗೆ ಬಗರ್‌ಹುಕ್ಕುಂ ಸರ್ಕಾರಿ ಜಮೀನಿಗೆ ಸಂಬಂಧಿಸಿ ಯಾರಾದರೂ ದಾಖಲೆ ಮಾಡಿಕೊಟ್ಟರೆ ಅಂತಹವರನ್ನು ನೇಣಿಗೆ ಹಾಕುತ್ತೇನೆಂದು ಸಂವಿಧಾನ ವಿರೋಧಿ ಹಾಗೂ ಅಲ್ಪಸಂಖ್ಯಾತರ ವಿರೋಧಿ ಹೇಳಿಕೆಯಾಗಿದೆ. ಇದು ಕೇವಲ ಹೇಳಿಕೆಯಲ್ಲಿ ಭಾರತದ ಸಂವಿಧಾನತ್ಮಕ ಮೌಲ್ಯಗಳ ಧರ್ಮನಿರಾಪೇಕ್ಷತೆಯ ವಿರುದ್ಧ ನೇರ ದಾಳಿಯಾಗಿದೆ ಎಂದು ದೂರಿದರು. ಇದನ್ನು ರಾಜ್ಯಾದ್ಯಾಂತ ಮುಸ್ಲಿಂ ಸಮುಧಾಯ ತೀವ್ರವಾಗಿ ಖಂಡಿಸುತ್ತದೆ.

ಶಾಸಕಾಂಗದ ಸ್ಥಾನದಲ್ಲಿರುವ ಶಾಸಕರೊಬ್ಬರು ಸಂವಿಧಾನದ ಅನುಚ್ಛೇಧ 51ಎ ಕಂಡಿಕೆ (ಈ)ನ ಪ್ರಕಾರ ದೇಶದ ಎಲ್ಲಾ ಧಾರ್ಮಿಕ ಭಾಷಾ ಮತ್ತು ಪ್ರಾದೇಶಿಕ ಅಥವಾ ಜಾತಿ ಪಂಗಡಗಳ ಭೇದ ಭಾವದಿಂದ ಅತೀತವಾಗಿ ಭಾರತದ ಎಲ್ಲಾ ಜನತೆಯಲ್ಲಿ ಸಾಮರಸ್ಯವನ್ನು ಮತ್ತು ಸಮಾನ ಭ್ರಾತೃತ್ವವನ್ನು ಬೆಳೆಸುಬದಲು, ಸಾಮರಸ್ಯ ಹದಗೆಡಸುವ ಹಾಗೂ ಸಮಾಜದಲ್ಲಿ ಆಶಾಂತಿ ಸೃಷ್ಟಿಸು ವ ಅವ್ಯಾಚ್ಯ ಪದಗಳನ್ನು ಬಲಪ್ರಯೋಗ ಮಾಡಿ ಅಧಿಕಾರಿ ವೃಂದದವರಲ್ಲಿ ಪ್ರಚೋದನೆಯನ್ನು ಹುಟ್ಟು ಹಾಕುವುದರೊಂದಿಗೆ ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆ ತಂದಿರುವ ಹಾಗೂ ಈ ದೇಶದ ಕಟ್ಟಕಡೆಯ ಪ್ರಜೆಯೂ ಸಹ ಈ ದೇಶದ ಆಸ್ತಿ ಎಂದು ಪರಿಗಣಿಸದಿರುವುದರ ವಿರುದ್ಧ ಖಂಡಿಸಿ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತಿಗಳು ಹಾಗೂ ಕಾಂಗ್ರೇಸ್ ಪಕ್ಷದ ರಾಜ್ಯಾ ಧ್ಯಕ್ಷರು ಕೊಡಲೆ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ ರವರನ್ನು ಪಕ್ಷದಿಂದ ಉಚ್ಚಾಟಿಸಿಬೇಕು ಎಂದು ಒತ್ತಾಯಿಸಿ ಕೂಡಲೇ ಶಾಸಕ ಸ್ಥಾನದಿಂದ ಅನರ್ಹ ಗೊಳಿಸಬೇಕೆಂದು ಈ ಮೂಲಕ ತಮ್ಮಲ್ಲಿ ಮನವಿ ಮಾಡುತ್ತಿದ್ದೇವೆ. ನಮ್ಮ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸದೇ ಇದ್ದಲ್ಲಿ ರಾಜ್ಯಾದ್ಯಂತ ಪ್ರಜಾಪ್ರಭುತ್ವದಲ್ಲಿ ಪ್ರಜೇಯೇ ಮಾಲೀಕ ಎಂಬ ಧೈಯೋದ್ದೇಶದ ಅಡಿ ಯಲ್ಲಿ ಪ್ರಜಾಸತತ್ಮಾಕವಾಗಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಕೆಯನ್ನು ನೀಡಿದರು.
ಇದೆ ವೇಳೆ ಜಿಲ್ಲಾ ಅಲ್ಪಸಂಖ್ಯಾತರ ಹಿತರಕ್ಷಣಾ ವೇಧಿಕೆಯ ಮುಖ್ಯ ಸಂಚಾಲಕ ಸಮೀರ್ ಅಹಮದ್, ಸಂಚಾಲಕ ಆಜಂಖಾನ್, ಸದಸ್ಯ ಹಿಮಾಯಾನ್, ಶಾಹನವಾಜ್, ಅಕ್ಮಲ್ ಜಾವಿದ್, ಚಾಂದ್ ಪಾಷಾ, ವಜಾದ್ ಇತರರು ಉಪಸ್ಥಿತರಿದ್ದರು.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು