ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸರಕಾರಿ ಶಾಲೆ ಉಳಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಮನವಿ

ರ

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಸರಕಾರಿ ಶಾಲೆ ಉಳಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಮನವಿ


ಹಾಸನ : ರಾಜ್ಯದ ಹಲವು ಭಾಗಗಳಲ್ಲಿ ಸರಕಾರಿ ಕನ್ನಡ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ತೋಟದ ಶಾಲೆಗಳು ಮುಚ್ಚುತ್ತಿರುವುದು ಶೋಚನೀಯ ಸಂಗತಿ. ಸರಕಾರಿ ಶಾಲೆಗೂ ಮೂಲಭೂತ ಸೌಕರ್ಯ, ಶೈಕ್ಷಣಿಕ ಉದ್ದೇಶಕ್ಕಾಗಿ ಭೂ ಪರಿವರ್ತನೆ ಇಲ್ಲದಿರುವವರಿಗೂ ಕಟ್ಟಡ ಸುರಕ್ಷತೆಗೆ ಅಗ್ನಿ ಸುರಕ್ಷತೆ ಇತರೆ ಸೌಕರ್ಯ ನೀಡುವಂಗತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಕೃಷ್ಣಗೌಡರ ಜನ್ಮದಿನದ ಪ್ರಯುಕ್ತ ಸರಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಮನವಿ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿಗಳ ಮುಖಾಂತರ ಸರಕಾರಿ ಕನ್ನಡ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ಉಳಿಸಿ ಬೆಳೆಸಿ ಅಭಿಯಾನ ಮತ್ತು ಹೋರಾಟವಾಗಿದ್ದು, ಗ್ರಾಮಗಳಲ್ಲಿ ನರೇಗಾ ದುರ್ಬಳಕೆ ಆಗುತ್ತಿದ್ದು, ಔಷಧ ಮಳಿಗೆಗಳಲ್ಲಿ ಸಂಬಂಧಿಸಿದ ವಿದ್ಯೆಯ ಪ್ರಮಾಣ ಪತ್ರ ಇಲ್ಲದವರು ಅನಧಿಕೃತ ಔಷದ ಮಾತ್ರೆಗಳನ್ನು ಸಾರ್ವಜನಿಕರಿಗೆ ಕೊಡುವುದನ್ನು ಖಂಡಿಸಿ ಮತ್ತು ದಿನಸಿ ವಸ್ತುಗಳ ಬೆಲೆ ಏರಿಕೆ ವಿರುದ್ಧ ನಮ್ಮ ಹೋರಾಟವಾಗಿದೆ ಎಂದರು.

ಕಾವೇರಿ ತುಂಗಭದ್ರಾ ಕೃಷ್ಣ ಮಹದಾಯಿ ಭೀಮಾ ನದಿಯ ನೀರು ಕನ್ನಡ ನಾಡಿನ ರೈತರಿಗೆ ಮೀಸಲಿರಿಸುವ ಕುರಿತು ಶಾಶ್ವತ ಪರಿಹಾರ ಕೊಡಬೇಕು ಹಾಗೂ ದಿನನಿತ್ಯದ ನಕಲಿ ದಿನಸಿ ವಸ್ತುಗಳಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವುದನ್ನು ವಿರೋಧಿಸುವುದಾಗಿ ಹೇಳಿದರು. ಇತ್ತೀಚಿನ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಸರಕಾರಿ ಕನ್ನಡ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ತೋಟದ ಶಾಲೆಗಳು ಮುಚ್ಚುತ್ತಿರುವುದು ಶೋಚನೀಯ ಸಂಗತಿ ಗ್ರಾಮೀಣ ಭಾಗದ ಬಡ, ರೈತ, ಶೋಷಿತ ಕೂಲಿ ಕಾರ್ಮಿಕರ, ಮಕ್ಕಳು ಸರಕಾರಿ ಶಾಲೆಗಳು ತುಂಬಾ ಅನುಕೂಲವಾಗಿದ್ದು ಈ ವರ್ಷ ಅಂದರೆ 2024- 25ರಲ್ಲಿ ಇಡೀ ರಾಜ್ಯದಲ್ಲಿ ಖಾಸಗಿ ಶಾಲೆಗಳ ಪರವಾನಿಗೆ ವ್ಯಾಪಾರಿಕರಣ ನಡೆದಿದೆ ರಾಜ್ಯದಲ್ಲಿ 475 ಹೆಚ್ಚು ಹೊಸ ಶಾಲೆಗಳಿಗೆ ಪರವಾನಿಗೆ ಕೊಟ್ಟರೆ ಅದರಲ್ಲಿ ವಿಜಯಪುರ ಜಿಲ್ಲೆಯಲ್ಲಿ 125 ಶಾಲೆಗಳಿಗೂ ಅಧಿಕ ಪರವಾನಿಗೆ ಶಿಕ್ಷಣ ಇಲಾಖೆ ನೀಡಿದೆ. ನೂತನ ಶಾಲೆಗಳಿಗೆ ಪರವಾನಿಗೆ ನೀಡಬೇಕಾದರೆ ಅದರದ್ದೆ ಆದ ನಿಯಮಾನುಸಾರಗಳಿವೆ ಅದನ್ನು ಮೀರಿ ಬೇಕಾಬಿಟ್ಟಿಯಾಗಿ ವ್ಯಾಪಾರಿಕರಣ ನಡೆಸಿ ಶಾಲಾ ಕಟ್ಟಡ ಇಲ್ಲದಿರುವವರಿಗು, ಮಕ್ಕಳಿಗೆ ಶಾಲಾ ಮೂಲಭೂತ ಸೌಕರ್ಯ ಇಲ್ಲದಿರುವವರಿಗೂ, ಶೈಕ್ಷಣಿಕ ಉದ್ದೇಶಕ್ಕಾಗಿ ಭೂ ಪರಿವರ್ತನೆ ಇಲ್ಲದಿರುವವರಿಗೂ, ಕಟ್ಟಡ ಸುರಕ್ಷತೆ ಇಲ್ಲದಿರುವವರಿಗೆ, ಅಗ್ನಿ ಸುರಕ್ಷತೆ ನೀಡಬೇಕು ಎಂದು ತಮ್ಮ ಮನವಿಯಲ್ಲಿ ಒತ್ತಾಯಿಸಿದ್ದಾರೆ. ಇದೆ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಹೆಚ್.ಎಂ. ರಾಘವೇಂದ್ರ, ಉಪಾಧ್ಯಕ್ಷ ಮನುಗೌಡ, ರಘು, ಸಂತೋಷ್, ಹರೀಶ್, ಕಿರಣ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಷಯಗಳು: #news #peepal
ರ

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version