ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಹಿಳಾ ವೈದ್ಯಾಧಿಕಾರಿಗಳ ವಿರುದ್ಧ ಆರ್.ಟಿ.ಐ. ಕಾರ್ಯಕರ್ತರ ದುರ್ನಡತೆ ಡಿಸಿ ಸತ್ಯಭಾಮಗೆ ಮನವಿ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಮಹಿಳಾ ವೈದ್ಯಾಧಿಕಾರಿಗಳ ವಿರುದ್ಧ ಆರ್.ಟಿ.ಐ. ಕಾರ್ಯಕರ್ತರ ದುರ್ನಡತೆ ಡಿಸಿ ಸತ್ಯಭಾಮಗೆ ಮನವಿ

ಹಾಸನ: ಆರ್.ಟಿ.ಐ. ಕಾರ್ಯಕರ್ತರು ನನಗೆ ತುಂಬ ಬೆದರಿಕೆ ಹಾಕಿದ್ದು, ವೈದ್ಯರಾಗಿ ಒಳ್ಳೆ ಕೆಲಸ ಮಾಡುವ ನಮಗೆ ದೈರ್ಯ ಕುಗ್ಗಿಸುವ ಕೆಲಸವಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ಸರಕಾರಿ ವೈದ್ಯಾಧಿಕಾರಿಗಳ ಸಂಘದಿAದ ಬುಧವಾರ ಸಂಜೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು. ಇದೆ ವೇಳೆ ಆರ್.ಟಿ.ಐ. ಕಾರ್ಯಕರ್ತರ ದುರ್ನಡತೆಗೆ ಒಳಗಾದ ಡಾ| ನಿಸಾರ್ ಫಾತಿಮಾ ಮಾಧ್ಯಮದೊಂದಿಗೆ ಮಾತನಾಡಿ, ಕಳೆದ ತಿಂಗಳು ೨೯ ರಂದು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ಬಿ.ವಿ. ಭಾನುಪ್ರಕಾಶ್ ಆರ್.ಟಿ.ಐ. ಕಾರ್ಯಕರ್ತರು ಸಲ್ಲಿಸಿದ್ದ ಮೇಲ್ಮನವಿಯನ್ನು ಇತ್ಯರ್ಥಗೊಳಿಸಲು ಆಡಳಿತ ವೈದ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ಪಾಳ್ಯ ಆಲೂರು ತಾಲ್ಲೂಕು ನಾನು ಹಾಜರಾಗಿದ್ದಾಗ ಆರ್.ಟಿ.ಐ. ಕಾರ್ಯಕರ್ತರು ಮಹಿಳಾ ವೈದ್ಯಾಧಿಕಾರಿಯಾದ ನನ್ನ ಮೇಲೆ ಏರು ಧ್ವನಿಯಲ್ಲಿ ಕೈ ಬೆರಳು ಸನ್ನೆಮಾಡುತ್ತಾ ಮಹಿಳಾ ವೈದ್ಯಾಧಿಕಾರಿಗಳ ಘನತೆಗೆ ದಕ್ಕೆ ತರುವಂತಹ ರೀತಿಯಲ್ಲಿ ಮಾತನಾಡಿರುತ್ತಾರೆ ಎಂದು ದೂರಿದರು. ಇದು ನಮ್ಮ ಮಹಿಳಾ ವೈದ್ಯಾಧಿಕಾರಿಗಳ ಮತ್ತು ಇಡೀ ವೈದ್ಯ ಸಮೂಹದ ಆತ್ಮಸ್ಥೆರ್ಯ ಕುಗ್ಗಿಸುವಂತಹ ವರ್ತನೆಯಾಗಿದ್ದು, ಹಗಲಿರುಳು ಸಾರ್ವಜನಿಕ ಸೇವೆಯಲ್ಲಿ ನಿರತರಾಗಿರುವ ವೈದ್ಯಾಧಿಕಾರಿಗಳ ಘನತೆಗೆ ಕುತ್ತು ತರುವಂತಹ ಘಟನೆಯಾಗಿರುತ್ತದೆ. ಇಂತಹ ಘಟನೆಗಳು ಆರ್.ಟಿ.ಐ. ಕಾರ್ಯಕರ್ತರು ಅಥವಾ ಇನ್ನಿತರಿಂದ ವೈದ್ಯರ ಘನತೆಗೆ ಕುತ್ತು ತರದಂತೆ ತಾವು ಕ್ರಮವಹಿಸಬೇಕೆಂದು ತಮ್ಮಲ್ಲಿ ಕಳಕಳಿಯಿಂದ ಮನವಿಮಾಡಿಕೊಳ್ಳುತ್ತೇವೆ ಎಂದು ಹೇಳಿದರು. ಇದೆ ವೇಳೆ ಕರ್ನಾಟಕ ಸರಕಾರಿ ವೈದ್ಯಾಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಡಾ. ಎಂ.ವಿ. ಸಂತೋಷ್, ಖಜಾಂಚಿಡಾ. ಹೆಚ್.ಜೆ. ತೇಜಸ್ವಿ, ನಮೃತ, ಮಹೇಶ್, ಡಾ. ರಘು ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಷಯಗಳು: #karnataka #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು