ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರೇಶನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಪ್ರಾರಂಭ – ಮಾಹಿತಿ ಇಲ್ಲಿದೆ ನೋಡಿ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ರೇಶನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಪ್ರಾರಂಭ – ಮಾಹಿತಿ ಇಲ್ಲಿದೆ ನೋಡಿ

ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿ ಹೊರಬಿದ್ದಿದೆ. ರೇಶನ್ ಕಾರ್ಡ್ ( Ration card)  ತಿದ್ದುಪಡಿ ಹಾಗೂ ಹೊಸ ಸದಸ್ಯರ ಸೇರ್ಪಡೆಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹಲವು ದಿನಗಳಿಂದ ಕಾಯುತ್ತಿದ್ದ ನಾಗರಿಕರಿಗೆ ಇದು ದೊಡ್ಡ ಅನುಕೂಲವಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿಗದಿತ ಅವಧಿಯೊಳಗೆ ತಿದ್ದುಪಡಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೂಚನೆ ನೀಡಿದ್ದು, ಜನರು ತಕ್ಷಣ ಕ್ರಮ ಕೈಗೊಳ್ಳುವಂತೆ ತಿಳಿಸಿದೆ.

ರೇಶನ್ ಕಾರ್ಡ್ ಕೇವಲ ಪಡಿತರ ಪಡೆಯಲು ಮಾತ್ರವಲ್ಲ, ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಅಗತ್ಯ ದಾಖಲೆ ಆಗಿರುವುದರಿಂದ ತಿದ್ದುಪಡಿ ಬಹಳ ಮುಖ್ಯವಾಗಿದೆ.
ಯಾವ ತಿದ್ದುಪಡಿಗಳನ್ನು ಮಾಡಬಹುದು?
ಕುಟುಂಬಕ್ಕೆ ಹೊಸ ಸದಸ್ಯರ ಹೆಸರು ಸೇರ್ಪಡೆ
ಮೃತಪಟ್ಟವರ ಹೆಸರು ತೆಗೆದುಹಾಕುವುದು
ವಿಳಾಸ ಬದಲಾವಣೆ
ಇ-ಕೆವೈಸಿ (ಆಧಾರ್ ಜೋಡಣೆ)
ಕುಟುಂಬದ ಮುಖ್ಯಸ್ಥರ ಬದಲಾವಣೆ
ಫೋಟೋ ಅಪ್‌ಡೇಟ್
ಅಗತ್ಯ ದಾಖಲೆಗಳು
ಜನನ ಪ್ರಮಾಣ ಪತ್ರ (ಮಕ್ಕಳಿಗೆ)
ಆಧಾರ್ ಕಾರ್ಡ್
ಆದಾಯ ಪ್ರಮಾಣ ಪತ್ರ
ಮರಣ ಪ್ರಮಾಣ ಪತ್ರ (ಹೆಸರು ತೆಗೆಯಲು)
ವಿಳಾಸ ದಾಖಲೆ
ಮೊಬೈಲ್ ಸಂಖ್ಯೆ

ಅರ್ಜಿ ಸಲ್ಲಿಸುವ ವಿಧಾನ
ಅರ್ಹ ನಾಗರಿಕರು ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ, ಅಗತ್ಯ ದಾಖಲೆಗಳನ್ನು ಸಲ್ಲಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸ್ಥಿತಿ ಪರಿಶೀಲನೆ
ಅಧಿಕೃತ ವೆಬ್‌ಸೈಟ್‌ನಲ್ಲಿ “e-status” ವಿಭಾಗದಲ್ಲಿ ರೇಶನ್ ಕಾರ್ಡ್ ಸಂಖ್ಯೆ ಮತ್ತು ಅರ್ಜಿ ಸಂಖ್ಯೆಯನ್ನು ನಮೂದಿಸಿ ಸ್ಥಿತಿಯನ್ನು ಪರಿಶೀಲಿಸಬಹುದು.
ಸಾರ್ವಜನಿಕರು ಯಾವುದೇ ವಿಳಂಬ ಮಾಡದೆ ಈ ಅವಕಾಶವನ್ನು ಬಳಸಿಕೊಂಡು ತಮ್ಮ ರೇಶನ್ ಕಾರ್ಡ್ ಮಾಹಿತಿಯನ್ನು ಸರಿಪಡಿಸಿಕೊಳ್ಳುವುದು ಸೂಕ್ತ ಎಂದು ಇಲಾಖೆ ಸಲಹೆ ನೀಡಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು