ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕರ್ನಾಟಕ ಮಾಧ್ಯಮ ಅಕಾಡೆಮಿ: ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳ ಆಹ್ವಾನ

PPeepal Media

Peepal Media • ಮೀಡಿಯಾ, ರಾಜ್ಯ

• 1 ನಿಮಿಷದ ಓದು

ಕರ್ನಾಟಕ ಮಾಧ್ಯಮ ಅಕಾಡೆಮಿ: ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳ ಆಹ್ವಾನ

ಅ.29:ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ 2023 ಮತ್ತು 2024 ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ.


ಬೆಂಗಳೂರಿನ “ಅಭಿಮಾನಿ ಪ್ರಕಾಶನ” ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ “ಸಾಮಾಜಿಕ ಸಮಸ್ಯೆ”ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಅಭಿಮಾನಿ ಪ್ರಶಸ್ತಿ” ಮೈಸೂರಿನ “ಮೈಸೂರು ದಿಗಂತ” ಪತ್ರಿಕಾ ಸಂಸ್ಥೆಯು “ಮಾನವೀಯ ಸಮಸ್ಯೆ” ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ”, ಬೆಂಗಳೂರಿನ ಅಭಿಮನ್ಯು ಪತ್ರಿಕಾ ಸಂಸ್ಥೆಯು “ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿ ವರದಿಗೆ ಅಭಿಮನ್ಯು ಪ್ರಶಸ್ತಿ, ಬೆಂಗಳೂರಿನ “ಪ್ರಜಾ ಸಂದೇಶ” ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮ ಕಾರಿಯಾಗಿ ಬಿಂಬಿಸುವ ಲೇಖನಕ್ಕೆ “ಪ್ರಜಾ ಸಂದೇಶ ದತ್ತಿ ಪ್ರಶÀಸ್ತಿ” ಈ ದತ್ತಿ ಪ್ರಶಸ್ತಿಗಳು ತಲಾ 10,000 ರೂ. ನಗದು ಬಹುಮಾನ ಒಳಗೊಂಡಿದೆ. ಸಂಸ್ಥೆಗಳು ದತ್ತಿಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸ್ಥಾಪಿಸಿವೆ.


2023 ನೇ ಸಾಲಿನ ಪ್ರಶಸ್ತಿಗಳು:


2023 ಜನವರಿಯಿಂದ ಡಿಸೆಂಬರ್-2023 ರವರೆಗೆ, ಪ್ರಕಟವಾಗಿರುವ “ಸಾಮಾಜಿಕ ಸಮಸ್ಯೆ” ಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ “ಅಭಿಮಾನಿ ಪ್ರಶಸ್ತಿ-2023”, “ಮಾನವೀಯ ಸಮಸ್ಯೆ”ಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ-2023” ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ “ಪ್ರಜಾ ಸಂದೇಶ ಪ್ರಶಸ್ತಿ-2023” ಹಾಗೂ “ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿ ವರದಿಗೆ “ಅಭಿಮನ್ಯು ದತ್ತಿ ಪ್ರಶಸ್ತಿ -2023” ಎಂದು ದಾಖಲಿಸಿ ಪ್ರತ್ಯೇಕವಾಗಿ ಕಳುಹಿಸಬೇಕು.
2024 ನೇ ಸಾಲಿನ ಪ್ರಶಸ್ತಿಗಳು :
2024 ಜನವರಿಯಿಂದ ಸೆಪ್ಟೆಂಬರ್ 2024 ರವರೆಗೆ ಪ್ರಕಟವಾಗಿರುವ “ಸಾಮಾಜಿಕ ಸಮಸ್ಯೆ” ಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ “ಅಭಿಮಾನಿ ಪ್ರಶಸ್ತಿ-2024”, “ಮಾನವೀಯ ಸಮಸ್ಯೆ”ಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ-2024” ಶೋಷಣೆಯನ್ನು ಪರಿಣಾಮ ಕಾರಿಯಾಗಿ ಬಿಂಬಿಸುವ ಲೇಖನಕ್ಕೆ “ಪ್ರಜಾ ಸಂದೇಶ ಪ್ರಶಸ್ತಿ-2024” ಹಾಗೂ “ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿಯಾದ ವರದಿಗೆ “ಅಭಿಮನ್ಯು ಪ್ರಶಸ್ತಿ -2024 ಎಂದು ದಾಖಲಿಸಿ ಪ್ರತ್ಯೇಕವಾಗಿ ಕಳುಹಿಸಬೇಕು.


ಕನ್ನಡ ದೈನಿಕ–ಟಿವಿ-ವಾಹಿನಿ, ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರ್ತಕರ್ತರು ಹೆಸರು (ಬೈಲೈನ್) ಬರೆದಿರುವ ವರದಿ ಲೇಖನಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶವಿದ್ದು, ಲೇಖನ ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬAಧಿಸಿದ ಪತ್ರಿಕೆಯ ಸಂಪಾದಕರಿAದ ದೃಢೀಕರಣ ಪತ್ರ ಪಡೆದು ಕಳುಹಿಸಬೇಕು.


ಲೇಖನ-ವರದಿಗಳನ್ನು ನವೆಂಬರ್ 20 ರೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ “ಅಭಿಮಾನಿ ಪ್ರಶಸ್ತಿ-2023”, “ಅಭಿಮಾನಿ ಪ್ರಶಸ್ತಿ-2024” ಹಾಗೂ “ಮೈಸೂರು ದಿಗಂತ ಪ್ರಶಸ್ತಿ-2023”, “ಮೈಸೂರು ದಿಗಂತ ಪ್ರಶಸ್ತಿ-2024” “ಪ್ರಜಾ ಸಂದೇಶ ಪ್ರಶಸ್ತಿ-2023”, “ಪ್ರಜಾ ಸಂದೇಶ ಪ್ರಶಸ್ತಿ-2024” ಹಾಗೂ “ಅಭಿಮನ್ಯು ಪ್ರಶಸ್ತಿ -2023”, “ಅಭಿಮನ್ಯು ಪ್ರಶಸ್ತಿ-2024” ಎಂದು ಸ್ಪಷ್ಟವಾಗಿ ಬರೆದು ಲೇಖನಗಳನ್ನು ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ.ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು-560001. ಇವರಿಗೆ ಕಳುಹಿಸಲು ಅಥವಾ kmaprashast@gmail.com ಗೆ ಇ-ಮೇಲ್ ಮೂಲಕ ಕಳುಹಿಸಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಷಯಗಳು: #karnataka #news #peepal #peepalmedia
PPeepal Media

Peepal Media

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು