ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹೊಸ ರೇಷನ್‌ ಕಾರ್ಡುಗಳಿಗಾಗಿ ಶೀಘ್ರದಲ್ಲಿ ಅರ್ಜಿ – ಸಚಿವ ಕೆ.ಎಚ್. ಮುನಿಯಪ್ಪ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಹೊಸ ರೇಷನ್‌ ಕಾರ್ಡುಗಳಿಗಾಗಿ  ಶೀಘ್ರದಲ್ಲಿ ಅರ್ಜಿ – ಸಚಿವ ಕೆ.ಎಚ್. ಮುನಿಯಪ್ಪ

ಬೆಂಗಳೂರು : ಕಳೆದ ಎರಡು ವರ್ಷಗಳಿಂದ ಹೊಸ ರೇಷನ್‌ ಕಾರ್ಡ್‌ (Ration Card) ಬೇಕು ಎಂದು ಕಾಯುತ್ತಿರುವ ಜನರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ (Good News) ಕೊಟ್ಟಿದ್ದು, ಹೊಸ ಕಾರ್ಡ್‌ಗಳನ್ನ ಶೀಘ್ರದಲ್ಲಿ ಕೊಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ (KH Maniyappa) ಭರವಸೆ ಕೊಟ್ಟಿದ್ದಾರೆ.

ಅರ್ಹತೆ ಇಲ್ಲದವರನ್ನ ಎಪಿಎಲ್‌ಗೆ ಸೇರಿಸಲಾಗುತ್ತೆ
ಕೋಲಾರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾರಿಗೆಲ್ಲಾ ಬಿಪಿಎಲ್‌ ಕಾರ್ಡ್‌ ಪಡೆಯಲು ಅರ್ಹತೆ ಇಲ್ಲವೋ ಅವರನ್ನ ಎಪಿಎಲ್ ಪಟ್ಟಿಗೆ ಸೇರಿಸುವ ಕೆಲಸ ನಡೆಯುತ್ತಿದೆ. ಅರ್ಹತೆ ಇರುವ ಎಲ್ಲರಿಗೂ ಬಿಪಿಎಲ್ ಕಾರ್ಡ್‌ಗಳನ್ನು ಕೊಡಲಾಗುತ್ತದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು 1.28 ಕೋಟಿ ಬಿಪಿಎಲ್ ಕಾರ್ಡ್ ಗಳು ಇದೆ. ಈ ಕಾರ್ಡ್‌ಗಳಲ್ಲಿ ಸುಮಾರು 4.50 ಕೋಟಿ ಜನರು ಫಲಾನುಭವಿಗಳಿದ್ದಾರೆ. ಸದ್ಯ ನಾವು ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ಮಾಡುತ್ತಿದ್ದೇವೆ. ಯಾರೆಲ್ಲಾ ಬಿಪಿಎಲ್‌ ಕಾರ್ಡ್‌ ಪಡೆಯಲು ಅನರ್ಹರಿದ್ದಾರೋ ಅವರನ್ನ ಬಿಪಿಎಲ್‌ನಿಂದ ಎಪಿಎಲ್‌ಗೆ ಹಾಕುತ್ತೇವೆ ಎಷ್ಟೇ ಎಂದು ಹೇಳಿದ್ದಾರೆ.

 ಕಾರ್ಡ್‌ ರದ್ದು ಮಾಡಲ್ಲ
ಈ ಹಿಂದೆ ಉಡುಪಿಯಲ್ಲಿ ಮಾತನಾಡಿದ್ದ ಅವರು, ಬಿಪಿಎಲ್‌ ಕಾರ್ಡ್‌ ವಿಚಾರವಾಗಿ ಜನರಲ್ಲಿ ಮೂಡಿದ್ದ ಗೊಂದಲಕ್ಕೆ  ತೆರೆ ಎಳೆದಿದ್ದರು, ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ ಎಂದು ಭರವಸೆ ನೀಡಿದ್ದರು. ಸರ್ಕಾರ ಯಾವುದೇ ಕಾರಣಕ್ಕೂ ಸರ್ಕಾರದ ಮಾನದಂಡ ಬಿಟ್ಟು ಪರಿಷ್ಕರಣೆ ಮಾಡಲ್ಲ. ಯಾರೆಲ್ಲಾ ಬಿಪಿಎಲ್‌ ಕಾರ್ಡ್‌ ಪಡೆಯಲು ಅನರ್ಹ ಇದೃೋ ಅವರೇ ಹೊರಗೆ ಬನ್ನಿ. ಹೊಸ ಬಿಪಿಎಲ್ ಕಾರ್ಡ್‌ ಅವಶ್ಯಕತೆ ಇರುವವರಿಗೆ ಅವಕಾಶ ಮಾಡಿಕೊಡಿ. ಅನ್ನ ಭಾಗ್ಯ ರಾಜ್ಯದ ಕಟ್ಟ ಕಡೆಯ ವ್ಯಕ್ತಿಗೆ ತಲುಪಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ. ಮನೆ ಕಟ್ಟುವ ಜನರಿಗೆ ಬಿಪಿಎಲ್ ಕಾರ್ಡ್ ಅವಶ್ಯಕತೆ ಇರುವುದಿಲ್ಲ. ಯಾರಿಗೆ ಅವಶ್ಯಕತೆ ಇರುವುದಿಲ್ಲವೋ ಅವರನ್ನ ಎಪಿಎಲ್‌ಗೆ ಸೇರಿಸಲಾಗುತ್ತದೆ ಎಂದು ಹೇಳಿದ್ದರು. ದಕ್ಷಿಣ ಭಾರತದಲ್ಲಿಯೇ ಅತಿಹೆಚ್ಚು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ರಾಜ್ಯ ಕರ್ನಾಟಕ. ಇದೇ ಕಾರಣಕ್ಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಲ್ಲಿನ ರಾಜ್ಯ ಸರ್ಕಾರಕ್ಕೆ ಬಿಪಿಎಲ್ ಪಡಿತರ ಚೀಟಿಗಳ ಅರ್ಹರಾಗಲು ಕೆಲವು ಮಾನದಂಡಗಳನ್ನು ಬಿಡುಗಡೆ ಮಾಡಿದೆ. ಆ ಮಾನದಂಡಗಳ ಅಡಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಪಡಿತರ ಚೀಟಿಗಳನ್ನು ಎಪಿಎಲ್ ಕಾರ್ಡಗಳಾಗಿ ಪರಿವರ್ತನೆ ಮಾಡಲಾಗುತ್ತಿದೆ.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು