ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದಲ್ಲಿ ಮತ್ತೊಮ್ಮೆ ಎಪಿಎಲ್‌, ಬಿಪಿಎಲ್‌ ರೇಷನ್ ಕಾರ್ಡುಗಳಿಗೆ ಅರ್ಜಿ ಆಹ್ವಾನ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ರಾಜ್ಯದಲ್ಲಿ ಮತ್ತೊಮ್ಮೆ ಎಪಿಎಲ್‌, ಬಿಪಿಎಲ್‌ ರೇಷನ್ ಕಾರ್ಡುಗಳಿಗೆ ಅರ್ಜಿ ಆಹ್ವಾನ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಕಟಣೆ ತಿಳಿಸಿದೆ.

ಅರ್ಜಿಗಳನ್ನು ಸ್ವೀಕರಿಸಿದ ನಂತರ ಕುಟುಂಬದ ವಾರ್ಷಿಕ ಆದಾಯವನ್ನು ಗಮನಿಸಿ ಇಲಾಖೆ ಎಪಿಎಲ್‌ ಅಥವಾ ಬಿಪಿಎಲ್‌ ಕಾರ್ಡನ್ನು ಅರ್ಜಿದಾರರಿಗೆ ಮಂಜೂರು ಮಾಡಲಿದೆ.

ಹೊಸದಾಗಿ ಪಡಿತರ ಚೀಟಿ ಪಡೆಯಲು ಬಯಸುವವರು ತಮ್ಮ ಮೊಬೈಲ್‌, ಕಂಪ್ಯೂಟರ್‌ ಬಳಸಿ ಅರ್ಜಿ ಸಲ್ಲಿಸಬಹುದು. ಇದಲ್ಲದೆ ಹತ್ತಿರದ ಆನ್ಲೈನ್‌ ಸೆಂಟರ್‌ಗಳಿಗೆ ತೆರಳಿಯೂ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು ಯಾವುವು?

1. ಎಲ್ಲಾ ಸದಸ್ಯರ ಆಧಾರ್ ಕಾರ್ಡ್
2. ಆದಾಯ ಪ್ರಮಾಣ ಪತ್ರ
3. ಜಾತಿ ಪ್ರಮಾಣ ಪತ್ರ
4. ವಿಳಾಸದ ಪುರಾವೆ
5. ಜನ್ಮ ದಿನಾಂಕ (ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ)
6. ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ.

ಇತ್ತೀಚೆಗೆ ರಾಜ್ಯಾದ್ಯಂತ ಇರುವ ನಕಲಿ ಬಿಪಿಎಲ್‌ ಕಾರ್ಡುಗಳನ್ನು ಅಮಾನ್ಯಗೊಳಿಸಲಾಗಿದೆ. ಲಕ್ಷಾಂತರ ಜನರು ತಮ್ಮ ರೇಷನ್‌ ಕಾರ್ಡು ಈ ಅಭಿಯಾನದಲ್ಲಿ ಕಳೆದುಕೊಂಡಿದ್ದಾರೆ. ಅವರಲ್ಲಿ ಅರ್ಹರು ಈಗ ಮತ್ತೊಮ್ಮೆ ಅರ್ಜಿ ಸಲ್ಲಿಸಿ ಪಡಿತರ ಚೀಟಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಹೊಸಬರೂ ಅರ್ಜಿ ಸಲ್ಲಿಸಬಹುದು.

ಕರ್ನಾಟಕದ ಎಲ್ಲಾ ಖಾಯಂ ನಿವಾಸಿಗಳು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು. ಮಾನದಂಡಗಳಿಗೆ ಅನುಸಾರವಾಗಿ ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಕೆ ಮಾಡಹುದಾಗಿದೆ. Ahara.kar.nic.in ವೆಬ್ಸೈಟ್ನಲ್ಲಿ ಅರ್ಹ ಫಲಾನುಭವಿಗಳು ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಪಡಿತರ ಚೀಟಿ ಕುರಿತ ಯಾವುದೇ ಗೊಂದಲಗಳಿದ್ದರೆ, ನೀವು ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್ 18004259339 ಕರೆ ಮಾಡಬಹುದಾಗಿದೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು