ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇ-ಸ್ವತ್ತು ಸಮರ್ಪಕ ಅನುಷ್ಠಾನಕ್ಕಾಗಿ ಸ್ಥಳೀಯ ಅಧಿಕಾರಿಗಳನ್ನು ನೇಮಿಸಿ – ಪ್ರಿಯಾಂಕ್‌ ಖರ್ಗೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಇ-ಸ್ವತ್ತು ಸಮರ್ಪಕ ಅನುಷ್ಠಾನಕ್ಕಾಗಿ ಸ್ಥಳೀಯ ಅಧಿಕಾರಿಗಳನ್ನು ನೇಮಿಸಿ – ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಸುಮಾರು ಒಂದು ಕೋಟಿ ಆಸ್ತಿಗಳನ್ನು ಇ-ಸ್ವತ್ತು ತೆಕ್ಕೆಗೆ ತರುವ ಮೂಲಕ ಮನೆ ಮತ್ತು ನಿವೇಶನಗಳನ್ನು ಸಕ್ರಮಗೊಳಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು.

ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಇ-ಸ್ವತ್ತು ಸಮರ್ಪಕ ಅನುಷ್ಠಾನ ಹಾಗೂ ಇನ್ನಿತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಈ ಬಗ್ಗೆ ಹೊಸದಾಗಿ ಬಿಡುಗಡೆ ಮಾಡಿರುವ ನಿಯಮಾವಳಿಗಳನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನನ ಮಾಡಿಸಲು ಜಿಲ್ಲಾ ಮಟ್ಟದಲ್ಲಿ ವಿಶೇಷ ತರಬೇತಿ ವ್ಯವಸ್ಥೆ ನಡೆಸಬೇಕು ಎಂದು ಹೇಳಿದರು.

ರಾಜ್ಯದ ಲಕ್ಷಾಂತರ ಮಂದಿ ಈ ಯೋಜನೆಯ ಲಾಭ ಹೊಂದಲು ತವಕದಿಂದ ಕಾಯುತ್ತಿದ್ದಾರೆ. ಸಾರ್ವಜನಿಕರಿಗೆ ಸುಲಲಿತವಾಗಿ ಹಾಗೂ ಪಾರದರ್ಶಕವಾಗಿ ಇ-ಸ್ವತ್ತು ಪ್ರಯೋಜನ ದೊರೆಯುವಂತೆ ಸಿಬ್ಬಂದಿಯನ್ನು ಸಜ್ಜು ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ನೆರವನ್ನು ಪಡೆದು ಸ್ವತ್ತು ಆಂದೋಲನವನ್ನು ಯಶಸ್ವಿಗೊಳಿಸಬೇಕು ಸೂಚಿಸಿದರು.

ಗ್ರಾಮ ಪಂಚಾಯತಿಗಳ ಸಂಪನ್ಮೂಲವನ್ನು ವೃದ್ಧಿಸುವ ಮೂಲಕ ಸ್ಥಳೀಯ ಸರ್ಕಾರಗಳ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೂತನವಾಗಿ ಅನುಷ್ಠಾನಕ್ಕೆ ತಂದಿರುವ ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ (ಲೀಪ್) ಅಡಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಲಭ್ಯವಿರುವ ಆಸ್ತಿಗಳನ್ನು ಪತ್ತೆ ಮಾಡಬೇಕು. ಅಂತಹ ಸ್ಥಳದಲ್ಲಿ ಪಂಚಾಯತಿಗಳಿಗೆ ಶಾಶ್ವತ ಆದಾಯ ತಂದುಕೊಡುವ ಕಟ್ಟಡಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು. ಪ್ರವಾಸಿ ತಾಣಗಳು ಹಾಗೂ ಯಾತ್ರಾಸ್ಥಳಗಳ ಸಮೀಪ ಲಭ್ಯವಿರುವ ಗ್ರಾಮ ಪಂಚಾಯತಿ ಆಸ್ತಿಗಳಲ್ಲಿ ಸಂಪನ್ಮೂಲ ಹೆಚ್ಚಿಸುವ ಯೋಜನೆಗಳನ್ನು ರೂಪಿಸಿದ್ದಲ್ಲಿ ಸರ್ಕಾರ ಅನುದಾನ ನೀಡಲಿದೆ ಎಂದು ಹೇಳಿದರು.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು