ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರತಿ ದಿನ 10 ಪೋಕ್ಸೋ ಕೇಸ್ ದಾಖಲು ಬೆಚ್ಚಿ ಬಿದ್ದ ರಾಜ್ಯದ ಜನತೆ ?

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಪ್ರತಿ ದಿನ 10 ಪೋಕ್ಸೋ ಕೇಸ್ ದಾಖಲು ಬೆಚ್ಚಿ ಬಿದ್ದ ರಾಜ್ಯದ ಜನತೆ ?

ಬೆಂಗಳೂರು : ಕರ್ನಾಟಕದಲ್ಲಿ ಮಕ್ಕಳ ಮೇಲಿನ ಅಪರಾಧ ಕೃತ್ಯಗಳು  ಗಣನೀಯವಾಗಿ ಹೆಚ್ಚಾಗಿರುವ ಬಗ್ಗೆ ವರದಿಯಾಗಿದೆ. 2025 ರ ಮೊದಲ ಎರಡು ತಿಂಗಳಲ್ಲಿ ಪ್ರತಿದಿನ ಸರಾಸರಿ 10 ಪೋಕ್ಸೊ  ಪ್ರಕರಣಗಳು  ದಾಖಲಾಗಿವೆ. 2024 ರಲ್ಲಿ, ಮಕ್ಕಳ ವಿರುದ್ಧದ ಅಪರಾಧ ಪ್ರಕರಣಗಳು 8,233 ದಾಖಲಾಗಿದ್ದವು ಎಂದು ಪೊಲೀಸ್ ಇಲಾಖೆ  ಅಂಕಿಅಂಶಗಳಿಂದ ತಿಳಿದುಬಂದಿದೆ. ಇದು 2023ರಲ್ಲಿ ದಾಖಲಾಗಿದ್ದ ಪ್ರಕರಣಗಳಿಗೆ ಹೋಲಿಸಿದರೆ ಹೆಚ್ಚಾಗಿತ್ತು. 2023 ರಲ್ಲಿ 7,854 ಪ್ರಕರಣಗಳು ದಾಖಲಾಗಿದ್ದವು. ಒಟ್ಟಾರೆಯಾಗಿ ಕಳೆದ ನಾಲ್ಕು ವರ್ಷಗಳಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆಯಲ್ಲಿ ಶೇ 38.89 ರಷ್ಟು ಏರಿಕೆಯಾಗಿದೆ.

    ಪೋಕ್ಸೋ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದರೂ, ಶಿಕ್ಷೆಯ ಪ್ರಮಾಣ ಕಡಿಮೆಯಾಗಿದೆ. ನಾಲ್ಕು ವರ್ಷಗಳಲ್ಲಿ (2021-2024) ದಾಖಲಾದ ಒಟ್ಟು 13,990 ಪ್ರಕರಣಗಳಲ್ಲಿ ಕೇವಲ 353 ರಲ್ಲಿ ಮಾತ್ರ ಶಿಕ್ಷೆ ಪ್ರಕಟವಾಗಿವೆ ಎಂದು ಪೊಲೀಸ್ ಇಲಾಖೆ ಅಂಕಿಅಂಶಗಳನ್ನು ಉಲ್ಲೇಖಿಸಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ. ಆತಂಕಕಾರಿ ಸಂಗತಿಯೆಂದರೆ, ಒಟ್ಟು ಪ್ರಕರಣಗಳಲ್ಲಿ ಶೇ 26 ಕ್ಕಿಂತ ಹೆಚ್ಚಿನವುಗಳಲ್ಲಿ ಆರೋಪಿಗಳು (3,662) ಖುಲಾಸೆಗೊಯಾಗಿದ್ದಾರೆ.

   202 ಪ್ರಕರಣಗಳನ್ನು ಸುಳ್ಳು ಪ್ರಕರಣಗಳೆಂದು ಹೇಳಲಾಗಿದೆ. 2025 ರಲ್ಲಿಯೂ ಮಕ್ಕಳ ಮೇಲಿನ ಅಪರಾಧ ಕೃತ್ಯಗಳ ಪ್ರವೃತ್ತಿ ಮುಂದುವರೆದಿದ್ದು, ಜನವರಿ ಮತ್ತು ಫೆಬ್ರವರಿಯಲ್ಲಿ ಕ್ರಮವಾಗಿ 348 ಮತ್ತು 264 ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ವರತಿ ತಿಳಿಸಿದೆ.

ವಿಷಯಗಳು: #karnataka #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು