ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಭಾರತ ಹಾಕಿ ತಂಡದ ನಾಯಕ ಅರ್ಮಾನ್ ಪ್ರೀತ್ ಸಿಂಗ್ ಸಾಧನೆ ಯುವ ಕ್ರೀಡಾಪಟುಗಳಿಗೆ ಪ್ರೇರಣೆ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಭಾರತ ಹಾಕಿ ತಂಡದ ನಾಯಕ ಅರ್ಮಾನ್ ಪ್ರೀತ್ ಸಿಂಗ್ ಸಾಧನೆ ಯುವ ಕ್ರೀಡಾಪಟುಗಳಿಗೆ ಪ್ರೇರಣೆ

ಮೈಸೂರು,‌ ಅಕ್ಟೋಬರ್ 3: ಕ್ರೀಡಾಪಟುಗಳಲ್ಲಿ ಶ್ರಮ, ಏಕಾಗ್ರತೆ, ಗುರಿ, ಗುಣಮಟ್ಟದ ತರಬೇತಿ ಸಿಕ್ಕಾಗ ಮಾತ್ರ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ಚಾಮುಂಡೇಶ್ವರಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಾತನಾಡಿದರು.

ದಸರಾ ವಿಶ್ವಖ್ಯಾತಿ ಪಡೆದಿರುವ ಉತ್ಸವ. ದೇಶವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಭೇಟಿ ನೀಡುತ್ತಾರೆ. ದಸರಾ ಉತ್ಸವದ ಅಂಗವಾಗಿ ಸಿಎಂ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಕ್ರೀಡೆಯಲ್ಲಿ ಪದಕ ಗೆಲ್ಲುವುದು ಒಂದು ಭಾಗವಾದರೆ, ಕ್ರೀಡೆಯಲ್ಲಿ ಭಾಗವಹಿಸುವುದೂ ಮುಖ್ಯ. ರಾಜ್ಯದ ವಿವಿಧ ಭಾಗಗಳಿಂದ ಕ್ರೀಡಾಪಟುಗಳು ಆಗಮಿಸಿದ್ದು, ಪದಕ ಗೆಲ್ಲುವ ಪ್ರಯತ್ನ ಬಹಳ ಮುಖ್ಯ ಎಂದರು.

ಮುಂದಿನ ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲಲು ಸಿಎಂ ಹಾರೈಕೆ

ಯುವಜನತೆ ಕ್ರೀಡೆಯೊಂದಿಗೆ ಓದಿನ ಕಡೆಗೂ ಸೂಕ್ತ ಗಮನ ಹರಿಸಬೇಕು. ಎಲ್ಲ ಕ್ರೀಡಾಪಟುಗಳನ್ನು ಶುಭ ಹಾರೈಸುತ್ತೇನೆ ಎಂದರು.

ಅರಮಾನ್ ಪ್ರೀತ್ ಸಿಂಗ್ ಅವರು ಭಾರತ ಹಾಕಿ ತಂಡದ ನಾಯಕರಾಗಿದ್ದು, ಭಾರತ ತಂಡಕ್ಕೆ ಗೆಲುವನ್ನು ತಂದುಕೊಟ್ಟಿದ್ದಾರೆ. ಅರಮಾನ್ ಪ್ರೀತ್ ಸಿಂಗ್ ಅವರು 200 ಕ್ಕೂ ಹೆಚ್ಚು ಗೋಲುಗಳನ್ನು ಬಾರಿಸಿರುವ ಕೀರ್ತಿ ಸಲ್ಲುತ್ತದೆ. ಕಳೆದ ಒಲಂಪಿಕ್ಸ್ ನಲ್ಲಿ ಇವರ ನಾಯಕತ್ವದಲ್ಲಿ ಭಾರತ ಕಂಚಿನ ಪದಕವನ್ನು ಗೆಲ್ಲಲು ಸಾಧ್ಯವಾಯಿತು. ಮುಂದಿನ ಒಲಂಪಿಕ್ಸ್ ನಲ್ಲಿ ಅವರು ಭಾರತಕ್ಕೆ ಚಿನ್ನದ ಪದಕವನ್ನು ಗೆಲ್ಲುವಂತಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು

ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಅರಮಾನ್ ಪ್ರೀತ್ ಸಿಂಗ್ ಅವರನ್ನು ಇಲ್ಲಿನ ಕ್ರೀಡಾಕೂಟಕ್ಕೆ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರ ಕ್ರೀಡೆಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತದೆ ಎಂದು ತಿಳಿಸಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು