ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಪ್ರಜ್ವಲ್ ರೇವಣ್ಣ ವಿರುದ್ಧ ಆರೆಸ್ಟ್ ವಾರಂಟ್ ಜಾರಿ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಪ್ರಜ್ವಲ್ ರೇವಣ್ಣ ವಿರುದ್ಧ ಆರೆಸ್ಟ್ ವಾರಂಟ್ ಜಾರಿ

ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ.

ಸಂಸದ ಮತ್ತು ಶಾಸಕರ ವಿಶೇಷ ನ್ಯಾಯಾಲಯ ಶನಿವಾರ ವಾರಂಟ್ ಹೊರಡಿಸಿದೆ. ಈ ಪ್ರಕರಣದ ಕುರಿತು ರಚಿಸಲಾಗಿದ್ದ ವಿಶೇಷ ತನಿಖಾ ಘಟಕದ ಮುಂದೆ ವಿಚಾರಣೆಗೆ ಹಾಜರಾಗದ ಕಾರಣ ಅಧಿಕಾರಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಮೂರು ವಾರಗಳಿಂದ ತಲೆಮರೆಸಿಕೊಂಡಿದ್ದ ಪ್ರಜ್ವಲ್ ಜರ್ಮನಿಯಿಂದ ಲಂಡನ್‌ಗೆ ರೈಲಿನಲ್ಲಿ ತೆರಳಿದ್ದನ್ನು ಎಸ್‌ಐಟಿ ಖಚಿತಪಡಿಸಿದೆ. ಅಲ್ಲದೆ ಪ್ರಜ್ವಲ್ ಈಗಾಗಲೇ ಹಲವು ಬಾರಿ ಭಾರತಕ್ಕೆ ಟಿಕೆಟ್ ಬುಕ್ ಮಾಡಿ ರದ್ದು ಮಾಡಿರುವುದು ಪತ್ತೆಯಾಗಿದೆ.

ನ್ಯಾಯಾಲಯದ ಮೆಟ್ಟಿಲೇರಿದ ನಂತರ ಎಸ್‌ಐಟಿ ಬಂಧನ ವಾರಂಟ್ ಜಾರಿ ಮಾಡಿದೆ. ಈಗಾಗಲೇ ಪ್ರಜ್ವಲ್ ಮೇಲೆ ಇಂಟರ್ ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಪ್ರಜ್ವಲ್‌ನ ಬ್ಯಾಂಕ್‌ ಖಾತೆಗಳ ಮೇಲೂ ಪೊಲೀಸರು ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ತಂದೆ ಹೆಚ್.ಡಿ.ರೇವಣ್ಣ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ಈ ಹಿಂದೆ ಅವರು ಏಳು ದಿನಗಳ ಕಾಲ ಜೈಲಿನಲ್ಲಿದ್ದರು. ಪ್ರಜ್ವಲ್ ತಪ್ಪಿತಸ್ಥರೆಂದು ಸಾಬೀತಾದರೆ ಅವರ ವಿರುದ್ಧ ಕ್ರಮಕ್ಕೆ ತಮ್ಮ ಅಭ್ಯಂತರವಿಲ್ಲ ಎಂದು ಅವರ ಅಜ್ಜ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಘೋಷಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು