ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ಬನಾರಸ್​ʼ ಸಿನಿಮಾ ವೀಕ್ಷಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ!

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

‘ಬನಾರಸ್​ʼ ಸಿನಿಮಾ ವೀಕ್ಷಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ!

ಬೆಂಗಳೂರು: ಎಲ್ಲೆಲ್ಲೂ ಬನಾರಸ್​​​ ಕ್ರೇಜ್​ ಸಿಕ್ಕಾಪಟ್ಟೆ ಜೋರು. ದೇಶಾದ್ಯಂತ ಸುಂದರವಾದ ದೃಶ್ಯಕಾವ್ಯ ಕಟ್ಟಿಕೊಟ್ಟಿರೋ ಬನಾರಸ್​​​, ರುದ್ರತಾಂಡವ ಆಡ್ತಿದ್ದಾನೆ. ಈ ಸಿನಿಮಾವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಝೈದ್​ ಖಾನ್ ಜೊತೆ ವೀಕ್ಷಿಸಿದ್ದಾರೆ.

ಭಾನುವಾರ ರಾತ್ರಿ, ತಮ್ಮ ಕೆಲವು ಸಹೋದ್ಯೋಗಿಗಳ ಜೊತೆಗೆ ಮಲ್ಟಿಪ್ಲೆಕ್ಸ್‌ನಲ್ಲಿ ‘ಬನಾರಸ್’ ಸಿನಿಮಾವನ್ನು ಸಿದ್ದರಾಮಯ್ಯ ವೀಕ್ಷಿಸಿದ್ದಾರೆ. ಈ ಸಮಯದಲ್ಲಿ ಸಿದ್ದರಾಮಯ್ಯ ಜೊತೆಗೆ ನಟ ಝೈದ್ ಖಾನ್ ಹಾಗೂ ಚಿತ್ರತಂಡದ ಇತರ ಸದಸ್ಯರು ಸಹ ಇದ್ದರು.

ಈ ಸಿನಿಮಾದಲ್ಲಿ ಜಮೀರ್​ ಅಹ್ಮದ್​ ಅವರ ಪುತ್ರ ಝೈದ್​ ಖಾನ್​ ಹೀರೋ ಆಗಿ ನಟಿಸಿದ್ದಾರೆ. ಇದು ಅವರ ಚೊಚ್ಚಲ ಸಿನಿಮಾ ಆಗಿದೆ. ‘ಮೊದಲ ಸಿನಿಮಾದಲ್ಲಿಯೇ ಅನುಭವ ಹೀರೋ ರೀತಿ ಝೈದ್​ ಖಾನ್​​  ನಟಿಸಿದ್ದಾರೆ. ಅವರ ಮತ್ತು ಸೋನಲ್​ ಮಾಂಥೆರೋ ಜೋಡಿ ಚೆನ್ನಾಗಿದೆ. ಜಯತೀರ್ಥ ಬರೆದ ಕಥೆ ಕುತೂಹಲಕಾರಿ ಆಗಿದೆ. ಎಲ್ಲಿಯೂ ಬೋರ್​ ಆಗಲ್ಲ’ ಎಂದು ಹೇಳಿರುವ ಸಿದ್ದರಾಮಯ್ಯ ಅವರು ಇದರಲ್ಲಿನ ಸಸ್ಪೆನ್ಸ್​ ಅಂಶವನ್ನು ಹೆಚ್ಚು ಇಷ್ಟಪಟ್ಟಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ, ʼನೈಜತೆಯಿಂದ ಕೂಡಿದ ಪಾತ್ರಗಳು, ಸ್ವಾರಸ್ಯಕರವಾದ ಕತೆಯನ್ನು ಒಳಗೊಂಡಿರುವ ಸದಭಿರುಚಿಯ ಚಲನಚಿತ್ರವಿದು. ಇಂಥಾ ಚಿತ್ರಗಳ ಸಂಖ್ಯೆ ನೂರಾಗಲಿ. ಚಿತ್ರರಂಗ ಬೆಳೆಯಲಿ, ಚಿತ್ರತಂಡ ಬೆಳೆಯಲಿ. ಎಲ್ಲರಿಗೂ ಒಳಿತಾಗಲಿʼ ಎಂದು ಶುಭಹಾರೈಸಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು