ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಾನು ಮುಷ್ತಾಕ್ ಅವರು ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ: ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ: ಸಿ.ಎಂ ಸಿದ್ದರಾಮಯ್ಯ

MMurali Maluru

Murali Maluru • ರಾಜ್ಯ

• 1 ನಿಮಿಷದ ಓದು

ಬಾನು ಮುಷ್ತಾಕ್ ಅವರು ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ: ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜೂ 2:
ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಬಾನು ಅವರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು

“ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ‌ ಎಂದು” ಮೆಚ್ಚುಗೆ ಸೂಚಿಸಿದರು.

ಹಾಗೆಯೇ ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ ನೀಡಲಾಗುವುದು ಎಂದು ಘೋಷಿಸಿದರು.

ಬಾನು ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು ನೀಡಲಾಗುವುದು ಎಂದು ತಿಳಿಸಿದರು.

ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ ಎಂದು ವಿಶ್ಲೇಷಿಸಿದರು.

ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಮುಸ್ಲಿಂ ಸಮುದಾಯದ ಹೆಣ್ಣು‌ಮಕ್ಕಳ ಧ್ವನಿಯಾಗಿ ಮೌಡ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ.

ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡುಬೇಕು ಎಂದು ಕರೆ ನೀಡಿದ್ದರೆ,
ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ, ಬಸವಣ್ಣನವರು “ಇವ ನಮ್ಮವ” ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ ಎಂದರು.

MMurali Maluru

Murali Maluru

Peepal Media · ರಾಜ್ಯ ವಿಭಾಗ

Murali MV is a Reporter at Peepal Media. An avid reader, he reports on Sports and Political issues.

ಸಂಬಂಧಿತ ಸುದ್ದಿಗಳು