ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಬ್ಯಾರಿ ಸಮುದಾಯ ಜಾತ್ಯತೀತ ಸಮುದಾಯ | ಬ್ಯಾರಿ ಸಮುದಾಯ ತಮ್ಮ ಅಸ್ಮಿತೆಯನ್ನು, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕು: ಸಿಎಂ ಸಿದ್ದರಾಮಯ್ಯ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಬ್ಯಾರಿ ಸಮುದಾಯ ಜಾತ್ಯತೀತ ಸಮುದಾಯ | ಬ್ಯಾರಿ ಸಮುದಾಯ ತಮ್ಮ ಅಸ್ಮಿತೆಯನ್ನು, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಫೆಬ್ರವರಿ -01: ಬ್ಯಾರಿಗಳನ್ನು ಯಾರೇ ವಿಭಜಿಸಲು ಪ್ರಯತ್ನಿಸಿದರೂ ತಮ್ಮ ಅಸ್ಮಿತೆಯನ್ನು, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅವರು ಇಂದು ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇವರ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದಬೃಹತ್ ಬ್ಯಾರಿ ಕೂಟ -2026 ಉದ್ಘಾಟಿಸಿ ಮಾತನಾಡಿದರು.

ತುಳು ಮತ್ತು ಬ್ಯಾರಿ ಭಾಷೆಗೆ ಲಿಪಿ ಇಲ್ಲದ್ದರಿಂದ ಕನ್ನಡದಲ್ಲಿಯೇ ನಿಮ್ಮತನವನ್ನು ಉಳಿಸಿಕೊಂಡಿರುವುದು ಮುಖ್ಯ ಎಂದರು.

ಬ್ಯಾರಿಗಳು ಜಾತ್ಯತೀತರು

ದಕ್ಷಿಣ ಕನ್ನಡ ಜಿಲ್ಲೆಯ ಬ್ಯಾರಿಗಳು ದೇಶ, ವಿದೇಶ ಅನೇಕ ಭಾಗಗಳಲ್ಲಿ ಕೆಲಸ ಮಾಡುವವರಾದರೂ ಬ್ಯಾರಿ ಅಸ್ಮಿತೆಯನ್ನು ಬಿಟ್ಟುಕೊಟ್ಟಿಲ್ಲ. ಬ್ಯಾರಿಗಳು ಜಾತ್ಯತೀತರು. ಜಾತಿ ವ್ಯಾಮೋಹವಾಗಲಿ, ಧರ್ಮದ ವ್ಯಾಮೋಹವಾಗಲಿ ಇಲ್ಲ. ಮೂಲತಃ ವ್ಯಾಪಾರಿಗಳಾದ ಬ್ಯಾರಿಗಳು ಎಲ್ಲಾ ಸಮುದಾಯಗಳೊಂದಿಗೆ ಹೊಂದಿಕೊಂಡು ಅವರ ಸಂಸ್ಕೃತಿ, ಉದ್ಯೋಗದೊಂದಿಗೆ ತಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುತ್ತಿರುವುದು ದೊಡ್ಡ ವಿಚಾರ ಎಂದು ಹೇಳಿದರು .

ಲಿಂಗ ತಾರತಮ್ಯ ಹೋಗಲಾಡಿಸಲು ವಿದ್ಯಾಭ್ಯಾಸ ಅವಶ್ಯಕ

ಬ್ಯಾರಿ ಸಮುದಾಯದವರು ತಮ್ಮ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಸ್ವಾಗತಾರ್ಹ. ಒಂದು ಕಾಲದಲ್ಲಿ ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಹೆಣ್ಣು ಮಕ್ಕಳು ವಿದ್ಯಾವಂತರಾಗುವುದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿರುವುದು ಒಳ್ಳೆಯ ಬೆಳವಣಿಗೆ. ಲಿಂಗ ತಾರತಮ್ಯ ಹೋಗಲಾಡಿಸಲು ವಿದ್ಯಾಭ್ಯಾಸ ಅವಶ್ಯಕ ಎಂದರು.

ಧರ್ಮವನ್ನು ಅನುಕೂಲಕ್ಕೆ ತಕ್ಕಂತೆ ವ್ಯಾಖ್ಯಾನಿಸುವುದು ಸರಿಯಲ್ಲ

ಎಲ್ಲರೂ ಜಾತ್ಯತೀತರಾಗಿರುವುದು ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಪರಸ್ಪರ ಪ್ರೀತಿಸಬೇಕು , ಮನುಷ್ಯರಾಗಿ ಬಾಳಬೇಕು ಎಂದು ಎಲ್ಲಾ ಧರ್ಮಗಳೂ ಹೇಳುತ್ತವೆ. ಧರ್ಮವನ್ನು ಅನುಕೂಲಕ್ಕೆ ತಕ್ಕಂತೆ ವ್ಯಾಖ್ಯಾನಿಸುವುದು ಸರಿಯಲ್ಲ ಎಂದರು.

ಬ್ಯಾರಿ ಭಾಷೆ, ಕಲೆ ಉಳಿಸಲು ಸರ್ಕಾರ ನೆರವು ನೀಡಲಿದೆ: ಸಿಎಂ ಭರವಸೆ

ಬ್ಯಾರಿ ಭವನ ನಿರ್ಮಾಣಕ್ಕೆ 5 ಕೋಟಿ ರೂ ನೀಡಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಬ್ಯಾರಿ ಭಾಷೆ, ಕಲೆ ಉಳಿಸಲು ಸರ್ಕಾರ ನೆರವು ನೀಡಲಿದೆ. ಮಂಗಳೂರು ಬ್ಯಾರಿ ಅಕಾಡೆಮಿಗೆ 3 ಕೋಟಿ, ಹಜ್ ಭವನಕ್ಕೆ 10 ಕೋಟಿ ಅನುದಾನ ನೀಡಲಾಗಿದೆ ಎಂದರು.

ಬ್ಯಾರಿ ಸಮುದಾಯಕ್ಕೆ ಸೇರಿದ ಯು. ಟಿ.ಖಾದರ್ ವಿಧಾನಸಭಾಧ್ಯಕ್ಷರಾಗಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು