ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬ್ರಿಟಿಷರ ಹಾಗೆ ಜಾತಿ-ಧರ್ಮದ ಹೆಸರಲ್ಲಿ ಭಾರತೀಯರನ್ನು ಎತ್ತಿ ಕಟ್ಟುವ ಜನರ ಬಗ್ಗೆ ಎಚ್ಚರವಿರಲಿ: ಸಿ.ಎಂ.ಸಿದ್ದರಾಮಯ್ಯ ಕರೆ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಬ್ರಿಟಿಷರ ಹಾಗೆ ಜಾತಿ-ಧರ್ಮದ ಹೆಸರಲ್ಲಿ ಭಾರತೀಯರನ್ನು ಎತ್ತಿ ಕಟ್ಟುವ ಜನರ ಬಗ್ಗೆ ಎಚ್ಚರವಿರಲಿ: ಸಿ.ಎಂ.ಸಿದ್ದರಾಮಯ್ಯ ಕರೆ

ವ್ಯಾಪಾರಕ್ಕೆಂದು ಬಂದ ಬ್ರಿಟೀಷರು ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಭಾರತವನ್ನು ವಶಕ್ಕೆ ಪಡೆದರು.
ಈಗಲೂ ಜಾತಿ-ಧರ್ಮದ ಹೆಸರಲ್ಲಿ ಭಾತೀಯರನ್ನು ಎತ್ತಿ ಕಟ್ಟುವವರು ಇದ್ದಾರೆ. ಇವರ ಬಗ್ಗೆ ಎಚ್ಚರವಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಜಿಲ್ಲಾಡಳಿತ ಮತ್ತು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ 201ನೇ ವರ್ಷದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚನ್ನಮ್ಮ ಸೋಲಿಸಿದರು.
ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವ. 2017 ರಲ್ಲಿ ಕಿತ್ತೂರು ರಾಣಿ ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ ಎಂದು ನೆನಪಿಸಿದರು.

ವ್ಯಾಪಾರ ಮಾಡಲು ಬಂದ ಬ್ರಿಟೀಷರು ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಇಡೀ ದೇಶವನ್ನು ವಶಕ್ಕೆ ಪಡೆದುಕೊಂಡರು. ಬ್ರಿಟೀಷರಿಗೆ ನಮ್ಮವರೇ ಬೆಂಬಲ ಕೊಡುತ್ತಿದ್ದರು. ಚನ್ನಮ್ಮ ಮತ್ತು ರಾಯಣ್ಣನವರ ವಿರುದ್ಧ ಪಿತೂರಿ ಮಾಡಿದ್ದರು. ಈಗಲೂ ಭಾರತೀಯರನ್ನು ಜಾತಿ, ಧರ್ಮದ ಹೆಸರಿನಲ್ಲಿ ಪರಸ್ಪರ ಎತ್ತಿ ಕಟ್ಟಿ ಕಚ್ಚಾಡಿಸುವವರು ನಮ್ಮ ನಡುವೆಯೇ ಇದ್ದಾರೆ. ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಕರೆ ನೀಡಿದರು.

ಸ್ವಾಭಿಮಾನಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ ಮತ್ತು ಬಾಳಪ್ಪ ಅವರು ಒಟ್ಟಾಗಿ ಶೌರ್ಯದಿಂದ ಬ್ರಿಟೀಷರನ್ನು ಹಿಮ್ಮೆಟ್ಟಿಸಿದರು.

ಬಾಬಾ ಸಾಹೇಬ್ ಪಾಟೀಲರು ಶಾಸಕರಾದ ಬಳಿಕ ಕಿತ್ತೂರು ಉತ್ಸವ ಅತ್ಯಂತ ಸಂಭ್ರಮ ಮತ್ತು ಅರ್ಥಪೂರ್ಣವಾಗಿ ನಡೆಸುತ್ತಿದ್ದಾರೆ. ಇದಕ್ಕಾಗಿ ಶಾಸಕರು ಮತ್ತು ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಇತಿಹಾಸ ಮರೆಯಬಾರದು

ಟಿಪ್ಪು, ಹೈದರಾಲಿ ಇಬ್ಬರೂ ಬ್ರಿಟೀಷರ ನಿದ್ದೆ ಗೆಡಿಸಿದ್ದರು. ನಾಲ್ಕು ಮೈಸೂರು ಯುದ್ಧಗಳನ್ನು ನಡೆಸಿದ್ದರು. ಟಿಪ್ಪು, ಹೈದರಾಲಿ ಇಬ್ಬರೂ ಬ್ರಿಟೀಷರ ವಿರುದ್ಧ ವಿರೋಚಿತವಾಗಿ ಹೋರಾಡಿದ ಅಪ್ಪಟ ವೀರರು. ದೇಶಪ್ರೇಮಿಗಳು. ಈ ಇತಿಹಾಸವನ್ನು ಹೇಳಿದ ಕೂಡಲೇ ಸಿದ್ದರಾಮಯ್ಯ ಓಲೈಕೆ ರಾಜಕಾರಣ ಮಾಡುತ್ತಾರೆ ಎಂದು ಅಪಪ್ರಚಾರ ಮಾಡುತ್ತಾರೆ. ಅಂಬೇಡ್ಕರ್ ಅವರ ಮಾತನ್ನು ನಾವು ನೆನಪಿಡಬೇಕು. “ಇತಿಹಾಸ ಅರಿಯದವರು ಭವಿಷ್ಯ ರೂಪಿಸಲಾರರು” ಎನ್ನುವ ಅಂಬೇಡ್ಕರ್ ಅವರ ಮಾತು ಮರೆಯಬಾರದು ಎಂದರು.

ಕೇಂದ್ರಕ್ಕೆ ಪ್ರಸ್ತಾವನೆ

ರಾಣಿ ಚನ್ನಮ್ಮನವರ ಐಕ್ಯ ಸ್ಥಳವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ನಮ್ಮ ಸರ್ಕಾರ.

ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರ ರಾಣಿ ಚನ್ನಮ್ಮ ಅವರ ಹೆಸರಿಡುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು