ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಯಲ್ಲಿ ಅವ್ಯವಹಾರ ನಡೆಯದಂತೆ ಎಚ್ಚರವಹಿಸಿ; ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಯಲ್ಲಿ ಅವ್ಯವಹಾರ ನಡೆಯದಂತೆ ಎಚ್ಚರವಹಿಸಿ; ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ

ಕಾರವಾರ, ಡಿ.26 : ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗೆ ಡಿ 29 ನಡೆಯುವ ಮರು ಪರೀಕ್ಷೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅವ್ಯವಹಾರ ಮತ್ತು ಲೋಪದೋಷಗಳಾಗದಂತೆ ಮುನ್ನೆಚ್ಚರಿಕೆಯಿಂದ ಕಾರ್ಯ ನಿರ್ವಹಿಸುವಂತೆ ನಿಯೋಜನೆಗೊಂಡ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜೀದ್ ಅಹ್ಮದ್ ಮುಲ್ಲಾ ನಿರ್ದೇಶನ ನೀಡಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ , 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಮರು ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1470 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯು ಪಾರದರ್ಶಕ ಮತ್ತು ಸುವ್ಯವಸ್ಥಿತವಾಗಿ ನಡೆಯುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ ಅವರು, ಮರು ಪರೀಕ್ಷೆ ನಡೆಯುವ ಸಂಬAಧ ಕರ್ನಾಟಕ ಲೋಕಸೇವಾ ಆಯೋಗವು ಹೊರಡಿಸಿರುವ ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಮತ್ತು ಜಾಮರ್ ಅಳವಡಿಸಿ, ಅವುಗಳು ಸಮಪರ್ಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವಂತೆ ತಿಳಿಸಿದರು.

ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಬೇಕು. ಪರೀಕ್ಷಾ ದಿನದಂದು ವಿದ್ಯುತ್ ವ್ಯತ್ಯಯವಾಗದಂತೆ ಮತ್ತು ಪರೀಕ್ಷಾ ದಿನದಂದು ಬಸ್ಗಳ ಸಂಚಾರವು ಸಮರ್ಪಕವಾಗಿ ಕಾರ್ಯನಿರ್ವಸಲು ಕ್ರಮಕೈಗೊಳ್ಳುವಂತೆ ತಿಳಿಸಿದ ಅವರು, ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನಿಗಧಿತ ಸಮಯಕ್ಕೆ ತಲುಪಿಸುವ ವಾಹನಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ತಮಗೆ ವಹಿಸಿದ ಕೆಲಸವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಗೌಪ್ಯತೆಯನ್ನು ಅರಿತು ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಮೇಶ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದೇರ್ಶಕಿ ಲತಾ ನಾಯಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸಪೆಕ್ಟರ್ ರಮೇಶ ಹೂಗಾರ, ಶಿಕ್ಷಣಾಧಿಕಾರಿ ನಾಗರಾಜ ಗೌಡ, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಮಾರ್ಗಾಧಿಕಾರಿಗಳು ಮತ್ತಿತರರು ಇದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು