ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ತಾಳ್ಮೆಯಿಂದ ಅರ್ಜಿಗಳನ್ನು ನೀಡಿ ಖಾತೆ ಮಾಡಿಸಿಕೊಳ್ಳಿ: ಶಾಸಕ ಹೆಚ್.ಪಿ. ಸ್ವರೂಪ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ತಾಳ್ಮೆಯಿಂದ ಅರ್ಜಿಗಳನ್ನು ನೀಡಿ ಖಾತೆ ಮಾಡಿಸಿಕೊಳ್ಳಿ: ಶಾಸಕ ಹೆಚ್.ಪಿ. ಸ್ವರೂಪ್

ಹಾಸನ : ಅಧಿಕಾರಿಗಳೇ ತಮ್ಮ ಬಳಿ ಬಂದು ಖಾತೆ ಮಾಡಿ ಕೊಡುವಂತಹದ್ದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಹಾಗಾಗಿ ಅಧಿಕಾರಿಗಳಿಗೆ ಒತ್ತಡ ನೀಡದೆ ತಾಳ್ಮೆಯಿಂದ ಅರ್ಜಿಗಳನ್ನು ನೀಡಿ ಪೌತಿ ಖಾತೆಗಳನ್ನು ಮಾಡಿಸಿಕೊಳ್ಳಿ ಎಂದರು.ತಾಲೂಕಿನ ಸಾಲಗಾಮೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಸಲಗಾಮೆ ಹೋಬಳಿಯ ಪೌತಿ ಖಾತಾ ಅಂದೋಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಅವರು, ಸಚಿವರಾದ ಕೃಷ್ಣ ಬೈರೇಗೌಡ ಅವರು ಕಂದಾಯ ಇಲಾಖೆಯಲ್ಲಿ ಬಹಳಷ್ಟು ಸುಧಾರಣೆಗಳನ್ನ ಮಾಡಿದ್ದಾರೆ. ಪೌತಿ ಖಾತೆ ಯಾರಿಗೆ ತಲುಪಬೇಕೋ ಅವರಿಗೆ ತಲುಪಿಸುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಕಿವಿಮಾತು ಹೇಳಿದರು. ನಮ್ಮ ಹಾಸನ ತಾಲ್ಲೂಕಿನಲ್ಲಿ ಅಧಿಕಾರಿಗಳು ನಿಮ್ಮ ಅರ್ಜಿಗಳನ್ನು ತೆಗೆದುಕೊಂಡು ಶೀಘ್ರದಲ್ಲೆ ತಮ್ಮ ಹೆಸರಿಗೆ ಮಾಡಿಕೊಡುವ ಪ್ರಯತ್ನ ಮಾಡುತ್ತಿದ್ದಾರೆ.

ಹಲವಾರು ರೈತರು ದುರಸ್ತಿಯ ಬಗ್ಗೆ ಕೇಳುತ್ತಿದ್ದರು. ಈಗಾಗಲೇ ಹಾಸನ ತಾಲ್ಲೂಕಿನಲ್ಲಿ ತಹಸೀಲ್ದಾರರ ಕಚೇರಿಯಿಂದ 6500 ಅರ್ಜಿಗಳು ಎಡಿಎಲ್‌ಆರ್ ಕಚೇರಿಗೆ ತಲುಪಿವೆ. 2500 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಇನ್ನುಳಿದ 4000 ಅರ್ಜಿಗಳು ಶೀಘ್ರದಲ್ಲೆ ಆಗುತ್ತವೆ. ತಮ್ಮಲ್ಲಿ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ ವೇಗವಾಗಿ ಕೆಲಸಗಳು ಆಗುತ್ತವೆ. ಇಲ್ಲವೇ ಜಿಲ್ಲಾಧಿಕಾರಿಗಳ ಬಳಿ ಹೋಗಿ ತನಿಖೆಯಾದ ನಂತರ ತಮ್ಮ ಹೆಸರಿಗೆ ಖಾತೆಗಳು ಆಗುತ್ತವೆ ಎಂದರು. ತಹಶೀಲ್ದಾರ್ ಅವರು ಕೂಡಾ ಕ್ರಿಯಾಶೀಲರಾಗಿ ಪಂಚಾಯಿತಿ, ಹೋಬಳಿ ಮಟ್ಟಕ್ಕೆ ಬಂದು ಕೆಲಸ ಮಾಡಿಕೊಡುತ್ತಿದ್ದಾರೆ. ಹಾಗಾಗಿ ಅವರಿಗೆ ಹೆಚ್ಚಿನ ಒತ್ತಡ ನೀಡದೇ ಖಾತೆ ಮಾಡಿಸಿಕೊಳ್ಳಿ ಎಂದರಲ್ಲದೇ ಮೆಕ್ಕೆಜೋಳಕ್ಕೆ ಇತ್ತೀಚೆಗೆ ರೋಗ ಬರುತ್ತಿದೆ ಅದಕ್ಕೆ ಸಂಬAಧಪಟ್ಟAತೆ ಕೃಷಿ ಇಲಾಖೆ ನೀಡುವಂತಹ ಸಲಹೆ ಸೂಚನೆಗಳನ್ನು ತಮ್ಮ ಬೆಳೆಯಲ್ಲಿ ಅಳವಡಿಸಿಕೊಳ್ಳಿ ಎಂದು ತಿಳಿಸಲಾಯಿತು.


ತಹಶೀಲ್ದಾರ್ ಗೀತಾ ಅವರು ಮಾತನಾಡಿ, ಸರ್ಕಾರದಿಂದ ಬಂದ ಅಧಿಸೂಚನೆಯಂತೆ ನಾವು ನಮ್ಮ ತಾಲ್ಲೂಕಿನ ಎಲ್ಲಾ ಹೋಬಳಿಗಳಲ್ಲಿಯೂ ಪೌತಿ ಖಾತೆ ವಿತರಣೆ ಮಾಡುತ್ತಿದ್ದೇವೆ. ಇದು 4ನೇ ಹೋಬಳಿಯಾಗಿದೆ. ಈಗಾಗಲೇ 3500 ಕಡತಗಳ ಖಾತೆ ಮಾಡಿದ್ದೇವೆ. ಇನ್ನು 50,000 ಪೌತಿ ಖಾತೆ ಬಾಕಿ ಇವೆ. ರೈತರು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಳ್ಳಲು ಇದೊಂದು ಸುಲಭದ ರೀತಿಯಾಗಿದೆ ಇಂದು ಕೂಡಾ ಪೌತಿ ಖಾತೆಗೆ ಅರ್ಜಿ ಸಲ್ಲಿಸಬಹುದು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಪೌತಿ ಖಾತೆಯ ಮಹತ್ವ ಹಾಗೂ ಅದನ್ನು ಮಾಡಿಸಿಕೊಳ್ಳುವ ವಿಧಾನದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಇದೇ ಸಂದರ್ಭದಲ್ಲಿ ಕಂದಾಯ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಸಮಸ್ಯೆಯನ್ನು ಮನವಿ ಪತ್ರಗಳನ್ನು ರೈತರು ಶಾಸಕರಿಗೆ ನೀಡಿದರು. ಕಾರ್ಯಕ್ರಮದಲ್ಲಿ ಸಾಲಗಾಮೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳು, ಕಾರ್ಯಕರ್ತರುಗಳು,ಮುಖಂಡರುಗಳು, ಗ್ರಾಮ ಲೆಕ್ಕಾಧಿಕಾರಿಗಳು, ರೈತರು, ಸಾರ್ವಜನಿಕರು ಉಪಸ್ಥಿತರಿದ್ದರು.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು