ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಸ್ಲಿಂ ಶಿಕ್ಷಕನ ಮೇಲಿನ ದ್ವೇಷಕ್ಕೆ ಶಾಲೆಯ ಕುಡಿಯುವ ನೀರಿಗೆ ವಿಷ ಬೆರೆಸಿದ ಶ್ರೀರಾಮ ಸೇನೆ ಕಾರ್ಯಕರ್ತರು: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಟೀಕೆ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಮುಸ್ಲಿಂ ಶಿಕ್ಷಕನ ಮೇಲಿನ ದ್ವೇಷಕ್ಕೆ ಶಾಲೆಯ ಕುಡಿಯುವ ನೀರಿಗೆ ವಿಷ ಬೆರೆಸಿದ ಶ್ರೀರಾಮ ಸೇನೆ ಕಾರ್ಯಕರ್ತರು: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಟೀಕೆ

ಬೆಂಗಳೂರು: ಬೆಳಗಾವಿಯಲ್ಲಿ ಶಾಲೆಯೊಂದರ ಮುಖ್ಯಶಿಕ್ಷಕಿಯನ್ನು ವರ್ಗಾವಣೆ ಮಾಡಿಸಲು ಮೂವರು ಶ್ರೀರಾಮ ಸೇನೆ ಕಾರ್ಯಕರ್ತರು ಕುಡಿಯುವ ನೀರಿಗೆ ವಿಷ ಬೆರೆಸಿದ್ದ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ.

ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಕುಡಿಯುವ ನೀರಿಗೆ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ್ ಪಾಟೀಲ್ ಸೇರಿದಂತೆ ಮೂವರು ವ್ಯಕ್ತಿಗಳು ವಿಷ ಬೆರೆಸಿದ್ದರಿಂದ 11 ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದರು.

ಈ ಘಟನೆಯನ್ನು ಉಲ್ಲೇಖಿಸಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಟೀಕೆ ಮಾಡಿದ್ದಾರೆ.

ಎಕ್ಸ್‌ನಲ್ಲಿ (X) ಪೋಸ್ಟ್ ಮಾಡಿದ ಸಿದ್ದರಾಮಯ್ಯ, “ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ. ಕಳೆದ 15 ದಿನಗಳ ಹಿಂದೆ ನಡೆದ ಈ ಘಟನೆಯಲ್ಲಿ ಹಲವು ಮಕ್ಕಳು ಅಸ್ವಸ್ಥಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ‌ ಸಂಭವಿಸಿರಲಿಲ್ಲ.

ಧಾರ್ಮಿಕ ಮೂಲಭೂತವಾದ, ಕೋಮುವೈಷಮ್ಯ ಎನ್ನುವುದು ಎಂತಹ ಹೀನ ಕೃತ್ಯವನ್ನೂ ಮಾಡಿಸಬಲ್ಲುದು ಎಂಬುದಕ್ಕೆ ಪುಟ್ಟಮಕ್ಕಳ ಮಾರಣಹೋಮಕ್ಕೆ ಕಾರಣವಾಗಬಹುದಾಗಿದ್ದ ಈ ಘಟನೆಯೇ ಸಾಕ್ಷಿ.
“ದಯೆಯೇ ಧರ್ಮದ ಮೂಲವಯ್ಯ” ಎಂದು ಸಾರಿದ ಶರಣರ ನಾಡಿನಲ್ಲಿ ಈ ಮಟ್ಟಿನ ಕೌರ್ಯ, ದ್ವೇಷ ಹುಟ್ಟಲು ಸಾಧ್ಯವೇ? ಎಂಬುದನ್ನು ಈ ಕ್ಷಣಕ್ಕೂ ನನ್ನಿಂದ ನಂಬಲಾಗುತ್ತಿಲ್ಲ.

ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ನಾಯಕರು ಒಮ್ಮೆ ತಮ್ಮ‌ ಆತ್ಮವಿಮರ್ಶೆ ಮಾಡಿಕೊಳ್ಳಲಿ. ಈ ಘಟನೆಯ ಹೊಣೆಯನ್ನು ಪ್ರಮೋದ್ ಮುತಾಲಿಕ್ ಹೊರುವರೇ? ವಿಜಯೇಂದ್ರ ಹೊರುವರೇ? ಆರ್.ಅಶೋಕ್ ಹೊರುವರೇ? ಇಂಥವರು ಮಾಡುವ ಸಮಾಜಘಾತುಕ ಕೃತ್ಯಗಳಿಗೆ ಸದಾ ಬೆಂಬಲವಾಗಿ ನಿಲ್ಲುವ ನಾಯಕರು ಈಗ ಮುಂದೆ ಬಂದು ತಮ್ಮ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ.

ಎಲ್ಲ ಬಗೆಯ ಮತೀಯವಾದ, ಮೂಲಭೂತವಾದಿತನಗಳು ಮನುಷ್ಯ ಸಮಾಜಕ್ಕೆ ಅಪಾಯಕಾರಿ. ದ್ವೇಷ ಭಾಷಣಗಳು, ಕೋಮು ಗಲಭೆಗಳ ತಡೆಗಾಗಿಯೇ ನಾವು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ, ಅಂಥವರ ವಿರುದ್ಧ ಕಾನೂನಿನ ಪರಿಧಿಯೊಳಗೆ ಸಾಧ್ಯವಾದ ಎಲ್ಲಾ ಕ್ರಮವನ್ನು ವಹಿಸುತ್ತಿದ್ದೇವೆ. ನಮ್ಮ ಎಲ್ಲಾ ಪ್ರಯತ್ನಗಳು ಫಲ ಕೊಡಬೇಕಾದರೆ ಸಾರ್ವಜನಿಕರೂ ಇಂಥಾ ಶಕ್ತಿಗಳ ವಿರುದ್ಧ ಧ್ವನಿಯೆತ್ತಬೇಕು, ಪ್ರತಿರೋಧ ಒಡ್ಡಬೇಕು, ದೂರು ದಾಖಲಿಸಬೇಕು.

ನನಗೆ ಈಗಲೂ ನಂಬಿಕೆಯಿದೆ, ಕೋಮುವಾದಿಗಳ ಸಂಖ್ಯೆಗಿಂತ ಕೂಡಿ ಬಾಳಬೇಕೆಂದು ಬಯಸುವ ಜನರ ಸಂಖ್ಯೆ ನೂರು ಪಟ್ಟು ಹೆಚ್ಚಿದೆ.

ಮಕ್ಕಳ ಹತ್ಯಾಕಾಂಡ ನಡೆಸುವ ದುಷ್ಟ ಹುನ್ನಾರವನ್ನು ಭೇದಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆಗಳು. ಇಂಥ ಹೀನಕೃತ್ಯ ಎಸಗಿದ ದುರುಳರಿಗೆ ನ್ಯಾಯ ವ್ಯವಸ್ಥೆ ತಕ್ಕಶಿಕ್ಷೆ ನೀಡಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು