ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬೆಂಗಳೂರು ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ – 5 ಕೋಟಿ ವಸ್ತುಗಳು ವಶ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಬೆಂಗಳೂರು ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ – 5 ಕೋಟಿ ವಸ್ತುಗಳು ವಶ

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ ನಕಲಿ ಔಷಧಿ ಮರುಪ್ಯಾಕಿಂಗ್ ಜಾಲ ಪತ್ತೆಯಾಗಿದೆ. ಫಾರ್ಮ್‌ಹೌಸ್‌ ಒಂದರಲ್ಲಿ ಯಾವುದೇ ಪರವಾನಗಿ ಇಲ್ಲದೇ ನಡೆಯುತ್ತಿದ್ದ ನಕಲಿ ಔಷಧಿಗಳ ಮರುಪ್ಯಾಕಿಂಗ್ ಘಟಕದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, 5 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಶಾಂತ್ ಎಂಬ ವ್ಯಕ್ತಿ ಸ್ಥಳೀಯರಿಂದ ಫಾರ್ಮ್‌ಹೌಸ್‌ ಅನ್ನು ಲೀಸ್‌ಗೆ ಪಡೆದು, ಕಳೆದ ಒಂದು ವರ್ಷದಿಂದ ಈ ನಕಲಿ ದಂಧೆಯಲ್ಲಿ ತೊಡಗಿದ್ದ. ತೆಲಂಗಾಣ ಮತ್ತು ಹಿಮಾಚಲ ಪ್ರದೇಶ ಮೂಲದಿಂದ ಕಡಿಮೆ ಮೌಲ್ಯದ ಔಷಧಿಗಳನ್ನು ಆಮದು ಮಾಡಿಕೊಳ್ಳುತ್ತಿದ್ದ. ಹಲವು ಬಹುರಾಷ್ಟ್ರೀಯ ಕಂಪನಿಗಳ ಲೇಬಲ್‌ಗಳನ್ನು ಬಳಸಿ ಮರುಪ್ಯಾಕಿಂಗ್ ಮಾಡುತ್ತಿದ್ದ ಎನ್ನಲಾಗಿದೆ.

ಕೇವಲ 600 ರೂ. ಮೌಲ್ಯದ ಔಷಧಿಗೆ ಮರುಪ್ಯಾಕಿಂಗ್ ಮಾಡಿದ ಬಳಿಕ 6,000 ರೂ. ಬೆಲೆಯ ಔಷಧಿಯ ಲೇಬಲ್ ಅಂಟಿಸಿ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ ಅತಿದೊಡ್ಡ ಕಾರ್ಯಾಚರಣೆ ನಡೆಸಿದ್ದು, 30ಕ್ಕೂ ಹೆಚ್ಚು ಅಧಿಕಾರಿಗಳು ಜಂಟಿ ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ ನಕಲಿ ಔಷಧಿಗಳು, ಲೇಬಲ್‌ಗಳು, ಅವಧಿ ಮುಗಿದ ಔಷಧಿಗಳು, ಖಾಲಿ ಬಾಟಲ್‌ಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಆಹಾರ ಸುರಕ್ಷತಾ ಅಧಿಕಾರಿಗಳಿಂದ ತನಿಖೆ ಮುಂದುವರಿದಿದೆ ಎಂದು ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಅವರು ಮಾಹಿತಿ ನೀಡಿದ್ದಾರೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು