ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹೊಸ ವರ್ಷದ ಸಂಭ್ರಮಕ್ಕೆ ಬೆಂಗಳೂರು ಹೈಅಲರ್ಟ್: 50 ಫ್ಲೈಓವರ್‌ಗಳು ಬಂದ್, 20 ಸಾವಿರ ಪೊಲೀಸರ ನಿಯೋಜನೆ

P

Peepal Media Desk • ರಾಜ್ಯ, ವಿಶೇಷ

• 1 ನಿಮಿಷದ ಓದು

ಹೊಸ ವರ್ಷದ ಸಂಭ್ರಮಕ್ಕೆ ಬೆಂಗಳೂರು ಹೈಅಲರ್ಟ್: 50 ಫ್ಲೈಓವರ್‌ಗಳು ಬಂದ್, 20 ಸಾವಿರ ಪೊಲೀಸರ ನಿಯೋಜನೆ

ಬೆಂಗಳೂರು: ಹೊಸ ವರ್ಷದ (New Year) ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದ್ದು, ನಗರಾದ್ಯಂತ ಪೊಲೀಸ್ ಹೈಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 31ರಂದು ರಾತ್ರಿ 10 ಗಂಟೆಯ ನಂತರ ನಗರದ ಪ್ರಮುಖ 50 ಫ್ಲೈಓವರ್‌ಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ನಗರದಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ 166 ಕಡೆ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಲಾಗುತ್ತದೆ. ವ್ಹೀಲಿಂಗ್ ಹಾಗೂ ಅಪಾಯಕಾರಿ ಸ್ಟಂಟ್‌ಗಳಿಗೆ ಸಂಬಂಧಿಸಿದಂತೆ 92 ಸಂವೇದನಶೀಲ ಸ್ಥಳಗಳನ್ನು ಗುರುತಿಸಲಾಗಿದ್ದು, ಅಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಎಂಜಿ ರಸ್ತೆ ಮೆಟ್ರೋ ನಿಲ್ದಾಣ ಬಂದ್
ಡಿಸೆಂಬರ್ 31ರಂದು ರಾತ್ರಿ 10 ಗಂಟೆಯ ನಂತರ ಎಂಜಿ ರಸ್ತೆ ಮೆಟ್ರೋ ನಿಲ್ದಾಣವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತದೆ. ಅಗತ್ಯಕ್ಕೆ ಅನುಗುಣವಾಗಿ ಮೆಟ್ರೋ ಸೇವೆಗಳ ವೇಳಾಪಟ್ಟಿಯನ್ನು ನಿಯಂತ್ರಿಸಲು ಸೂಚನೆ ನೀಡಲಾಗಿದೆ. ಮದ್ಯಪಾನ ಮಾಡಿ ಸಾರ್ವಜನಿಕವಾಗಿ ಗಲಾಟೆ, ಕಿರಿಕಿರಿ ಅಥವಾ ಅಶಾಂತಿ ಸೃಷ್ಟಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಎಚ್ಚರಿಸಿದ್ದಾರೆ.

ನಗರದ ಪಬ್‌, ರೆಸ್ಟೋರೆಂಟ್‌, ಕ್ಲಬ್‌ ಹಾಗೂ ರೆಸಾರ್ಟ್‌ಗಳಿಗೆ ಸಮಯ ಮಿತಿ ಕಡ್ಡಾಯಗೊಳಿಸಲಾಗಿದ್ದು, ಡಿಜೆ ಹಾಗೂ ಲೌಡ್‌ಸ್ಪೀಕರ್ ಬಳಕೆಗೆ ಅನುಮತಿ ಮತ್ತು ನಿಗದಿತ ಸಮಯ ಮಿತಿ ವಿಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲ ವರ್ತನೆ, ಶಬ್ದ ಮಾಲಿನ್ಯ, ಅಕ್ರಮ ಪಾರ್ಟಿಗಳು ಹಾಗೂ ಅಪಾಯಕಾರಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

20 ಸಾವಿರ ಪೊಲೀಸ್ ಸಿಬ್ಬಂದಿ, ತಾಂತ್ರಿಕ ನಿಗಾ
ಹೊಸ ವರ್ಷಾಚರಣೆ ವೇಳೆ ಭದ್ರತೆಗಾಗಿ ನಗರಾದ್ಯಂತ ಸುಮಾರು 20 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾ, ಡ್ರೋನ್‌ ಹಾಗೂ ಇತರ ತಾಂತ್ರಿಕ ಸಾಧನಗಳ ಮೂಲಕ ನಿರಂತರ ನಿಗಾವಹಿಸಲಾಗುತ್ತಿದೆ. ನಗರದೆಲ್ಲೆಡೆ ವಾಚ್ ಟವರ್‌ಗಳನ್ನು ಸ್ಥಾಪಿಸಲಾಗಿದ್ದು, ಸುರಕ್ಷಿತ ವಲಯಗಳ ಗುರುತಿಸುವಿಕೆ ಮತ್ತು ಹೀಟ್ ಮ್ಯಾಪ್ ವ್ಯವಸ್ಥೆ ಜಾರಿಗೊಳಿಸಲಾಗಿದೆ.

ಮಹಿಳೆಯರ ಸುರಕ್ಷತೆಗಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದ್ದು, ಯಾವುದೇ ಅಹಿತಕರ ಘಟನೆ ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಜನಸಂದಣಿ ನಿಯಂತ್ರಣಕ್ಕಾಗಿ ಮೆಟ್ರೋ ರೈಲುಗಳ ವೇಳಾವಧಿ ವಿಸ್ತರಣೆ, ಸಂಚಾರ ಸುಗಮಗೊಳಿಸಲು ಬಸ್ ಸೇವೆಗಳ ಸಮಯ ಹೆಚ್ಚಿಸುವ ಕ್ರಮ ಕೈಗೊಳ್ಳಲಾಗಿದೆ.

ಹೋಟೆಲ್‌ಗಳು ಹಾಗೂ ಲಾಡ್ಜ್‌ಗಳಲ್ಲಿ ನಿಯಮ ಪಾಲನೆಯ ಪರಿಶೀಲನೆ ನಡೆಸಲಾಗುತ್ತಿದ್ದು, ಸಮಾಜ ವಿರೋಧಿ ಅಂಶಗಳನ್ನು ತಡೆಗಟ್ಟಲು ಎಐ ಕ್ಯಾಮರಾಗಳ ಬಳಕೆ, ಕ್ಯೂಆರ್‌ಟಿ, ಚೆನ್ನಮ್ಮ ಪಡೆ ಸೇರಿದಂತೆ ವಿಶೇಷ ಪೊಲೀಸ್ ಪಡೆಯನ್ನೂ ನಿಯೋಜಿಸಲಾಗುತ್ತದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version