ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿದ್ಯುತ್‌ ಕಳ್ಳ ವಿವಾದ: ಕಾಂಗ್ರೆಸ್‌ ವಿರುದ್ಧ ಪ್ರಕರಣ ದಾಖಲಿಸಿದ ಜೆಡಿಎಸ್

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ವಿದ್ಯುತ್‌ ಕಳ್ಳ ವಿವಾದ: ಕಾಂಗ್ರೆಸ್‌ ವಿರುದ್ಧ ಪ್ರಕರಣ ದಾಖಲಿಸಿದ ಜೆಡಿಎಸ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ವಿವಿಧೆಡೆ ಅವಹೇಳನಕಾರಿ ಪೋಸ್ಟರ್‌ಗಳನ್ನು ಅಂಟಿಸಿದ ಬೆನ್ನಲ್ಲೇ ಈ ಕುರಿತು ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜೆಡಿಎಸ್ ಮುಖಂಡರ ದೂರಿನ ಆಧಾರದ ಮೇಲೆ ಪೊಲೀಸರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯದರ್ಶಿ ಎಸ್ ಮನೋಹರ್ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ.

ನ.20ರಂದು ರಾಜಾಜಿನಗರ, ಶೇಷಾದ್ರಿಪುರಂ ಮತ್ತಿತರ ಪ್ರದೇಶಗಳಲ್ಲಿ ಕುಮಾರಸ್ವಾಮಿ ಅವರ ವಿವಿಧ ಪೋಸ್ಟರ್ ಗಳನ್ನು ಅಂಟಿಸಲಾಗಿದೆ. ‘ವಿದ್ಯುತ್ ಕಳ್ಳ’ ಎಂದು ಕುಮಾರಸ್ವಾಮಿ ಅವರನ್ನು ಲೇವಡಿ ಮಾಡಿದ್ದ ಪೋಸ್ಟರುಗಳು ಜೆಡಿಎಸ್ ಕಚೇರಿಯ ಕಾಂಪೌಂಡ್ ಕಾಣಿಸಿತ್ತು. ಈ ಹಿಂದೆಯೂ ಇದೇ ರೀತಿಯ ಪೋಸ್ಟರುಗಳನ್ನು ಹಾಕಲಾಗಿತ್ತು.

ಜೆಡಿಎಸ್ ಮುಖಂಡರು ಬುಧವಾರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರನ್ನು ಭೇಟಿ ಮಾಡಿ ದೂರು ದಾಖಲಿಸಿದ್ದಾರೆ. ಜೆಡಿಎಸ್ ಮುಖಂಡ ರಮೇಶ್ ಗೌಡ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಕೆಪಿಸಿಸಿ ಕಾರ್ಯದರ್ಶಿ ಎಸ್ ಮನೋಹರ್, ಕಾರ್ತಿಕ್ ಡಿ, ದರ್ಶನ್ ಗೌಡ, ಅರ್ಜುನ್ ಡಿ ಗೌಡ, ಸಂತೋಷ್ ಮತ್ತು ಇತರರನ್ನು ಹೆಸರಿಸಿದ್ದಾರೆ. ಐಪಿಸಿ ಸೆಕ್ಷನ್ 153(ಎ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ ಮತ್ತು ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು).

ದೀಪಾವಳಿ ಸಂದರ್ಭದಲ್ಲಿ ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸಕ್ಕೆ ವಿದ್ಯುತ್ ಕಂಬದಿಂದ ವಿದ್ಯುತ್ ಹರಿದು ಬಂದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) 68 ಸಾವಿರ ದಂಡ ವಿಧಿಸಿದ್ದು, ಅದನ್ನು ಕುಮಾರಸ್ವಾಮಿ ಪಾವತಿಸಿದ್ದಾರೆ.

ತಮ್ಮ ವಿರುದ್ಧ ಅಂಟಿಸಿರುವ ಪೋಸ್ಟರ್‌ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ, ಈ ವಿಚಾರವಾಗಿ ಮಂಗಳವಾರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ದೂಷಿಸಿದರು ಮತ್ತು ಅವರು ‘ನೀಲಿ ಚಿತ್ರಗಳನ್ನು’ ತೋರಿಸಿ ಜೀವನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

“ಅವರು ನೀಲಿ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಜೀವನ ನಡೆಸಿದವರು. ಅಂತಹ ವ್ಯಕ್ತಿಯ ಮನಸ್ಸಿನಲ್ಲಿ, ಇನ್ನೇನು ಬರುತ್ತದೆ? ಅವರು ಮಾತ್ರವೇ ಅಂತಹ ಪೋಸ್ಟರ್‌ಗಳನ್ನು ಅಂಟಿಸಲು ಸಾಧ್ಯ” ಎಂದು ಕುಮಾರಸ್ವಾಮಿ ಹೇಳಿದ್ದರು.

ಡಿ ಕೆ ಶಿವಕುಮಾರ್ ಈ ಆರೋಪವನ್ನು ತಳ್ಳಿಹಾಕಿದ್ದು, ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು