ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬೆಂಗಳೂರು: ಬಾಡಿಗೆ ವಿಚಾರಕ್ಕೆ ಗಲಾಟೆ, ವಕೀಲನ ತಲೆಗೆ ಗುಂಡಿಕ್ಕಿ ಕೊಂದ ಡೆಲಿವರಿ ಬಾಯ್ಸ್

P

Peepal Media • ರಾಜ್ಯ

• 1 ನಿಮಿಷದ ಓದು

ಬೆಂಗಳೂರು: ಬಾಡಿಗೆ ವಿಚಾರಕ್ಕೆ ಗಲಾಟೆ, ವಕೀಲನ ತಲೆಗೆ ಗುಂಡಿಕ್ಕಿ ಕೊಂದ ಡೆಲಿವರಿ ಬಾಯ್ಸ್

ಬೆಂಗಳೂರು: ಮನೆ ಬಾಡಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ಸಂಬಂಧಿಸಿದಂತೆ ನಡೆದ ಜಗಳ ತಾರಕಕ್ಕೇರಿ, ಡೆಲಿವರಿ ಬಾಯ್‌ಗಳಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಬಾಡಿಗೆದಾರರು ತಮ್ಮ ಮನೆ ಮಾಲೀಕರಾಗಿದ್ದ ವಕೀಲರೊಬ್ಬರನ್ನು ತಲೆಗೆ ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ಟಂದೂರು ಅಗ್ರಹಾರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಹಾಗೂ ವೃತ್ತಿಯಲ್ಲಿ ವಕೀಲರಾಗಿದ್ದ ಮಂಜುನಾಥ್ (42) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಭಾನುವಾರ ತಡರಾತ್ರಿ 11:30 ರಿಂದ ಮಧ್ಯರಾತ್ರಿಯ ಸುಮಾರಿಗೆ ಈ ದುಷ್ಕೃತ್ಯ ನಡೆದಿದೆ. ಮಂಜುನಾಥ್ ಅವರ ಮನೆಯಲ್ಲಿ ಬಾಡಿಗೆಗಿದ್ದ ಇಬ್ಬರು ಯುವಕರು ಡೆಲಿವರಿ ಬಾಯ್‌ಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ಕೊಲೆ ನಡೆಯುವುದಕ್ಕೂ ಸುಮಾರು ಒಂದು ಗಂಟೆ ಮುನ್ನ ಬಾಕಿ ಉಳಿಸಿಕೊಂಡಿದ್ದ ಬಾಡಿಗೆ ಹಣದ ವಿಚಾರವಾಗಿ ಮಂಜುನಾಥ್ ಹಾಗೂ ಇಬ್ಬರು ಬಾಡಿಗೆದಾರರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿತ್ತು.

ಮಧ್ಯರಾತ್ರಿಯ ವೇಳೆಗೆ ಜಗಳ ಮತ್ತಷ್ಟು ವಿಕೋಪಕ್ಕೆ ತಿರುಗಿದ್ದು, ಆಕ್ರೋಶಗೊಂಡ ಆರೋಪಿಗಳಲ್ಲಿ ಒಬ್ಬಾತ ತನ್ನ ಬಳಿಯಿದ್ದ ಗನ್ ತೆಗೆದು ಮಂಜುನಾಥ್ ಅವರ ತಲೆಗೆ ನೇರವಾಗಿ ಗುಂಡು ಹಾರಿಸಿದ್ದಾನೆ. ತೀವ್ರ ರಕ್ತಸ್ರಾವದಿಂದ ಮಂಜುನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗುಂಡು ಹಾರಿಸಿದ ತಕ್ಷಣವೇ ಇಬ್ಬರೂ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ವಿಷಯ ತಿಳಿದ ತಕ್ಷಣವೇ ವೈಟ್‌ಫೀಲ್ಡ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವಿಧಿವಿಜ್ಞಾನ ತಜ್ಞರ (FSL) ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವೈಟ್‌ಫೀಲ್ಡ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಬಲೆ ಬೀಸಿದ್ದು, ತನಿಖೆ ಮುಂದುವರಿದಿದೆ.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version