ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಲೈಂಗಿಕ ದೌರ್ಜನ್ಯ ಪ್ರಕರಣ ಹೆಚ್.ಡಿ ರೇವಣ್ಣಗೆ ಬಿಗ್ ರಿಲೀಫ್ 

ರ

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಲೈಂಗಿಕ ದೌರ್ಜನ್ಯ ಪ್ರಕರಣ ಹೆಚ್.ಡಿ ರೇವಣ್ಣಗೆ ಬಿಗ್ ರಿಲೀಫ್ 

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಭಂಧಿಸಿದಂತೆ ಮಾಜಿ ಸಚಿವ ಹೆಚ್,ಡಿ ರೇವಣ್ಣ (HD Revanna) ಅವರಿಗೆ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ. ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಈ ಕೇಸ್​​​ಗೆ ಕುರಿತಂತೆ ಕೋರ್ಟ್‌ ಪ್ರಕರಣವನ್ನು ರದ್ದುಗೊಳಿಸಿದೆ.ಈ ಮೂಲಕ ಕೊನೆಗೂ ರೇವಣ್ಣ ಕುಟುಂಬಕ್ಕೆ‌ ಒಂದು ಸಿಹಿಸುದ್ದಿ ಸಿಕ್ಕಿದೆ. ಸದ್ಯ ರೇವಣ್ಣ ಆರೋಪಮುಕ್ತವಾಗಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮನೆಕೆಲಸದಾಕೆ ನೀಡಿದ ದೂರಿಗೆ ಸಂಬಂಧಿಸಿದಂತೆ ಹೆಚ್ ಡಿ ರೇವಣ್ಣ ನಿರ್ದೋಷಿ ಎಂದು ಜನಪ್ರತಿನಿಧಿಗಳ‌ ವಿಶೇಷ ನ್ಯಾಯಾಲಯ ಇಂದು (ಡಿ.29) ತೀರ್ಪು‌ ನೀಡಿದೆ.

ಪ್ರಕರಣದ ಹಿನ್ನೆಲೆ :ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್‌ ಡಿ ರೇವಣ್ಣ ಹಾಗೂ ಅವರ ಮಗ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ 2024ರ ಏ.28ರಂದು ಪ್ರಕರಣ ದಾಖಲಿಸಲಾಗಿತ್ತು.ಸಂತ್ರಸ್ತೆಯ ದೂರು ಆಧರಿಸಿ ಐಪಿಸಿ ಸೆಕ್ಷನ್‌ ಪ್ರಕರಣ 354A, 354D, 506, 509ರ ಅಡಿ ಪ್ರಕರಣ ದಾಖಲಿಸಲಾಗಿದ್ದು, ರೇವಣ್ಣ ಅವರನ್ನು ಮೊದಲನೇ ಆರೋಪಿ ಹಾಗೂ ಪ್ರಜ್ವಲ್​​​​​​​​​​​​​​​​ನನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿತ್ತು.ರೇವಣ್ಣ ಅವರು, ತಮ್ಮ ಪತ್ನಿ ಭವಾನಿಯವರು ಮನೆಯಲ್ಲಿ ಇಲ್ಲದಿದ್ದ ವೇಳೆ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗುತಿದ್ದರು. ಅಲ್ಲದೆ ತಮ್ಮ ಮಗಳಿಗೂ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದನೆ ನೀಡಿದ್ದು, ಮಗಳು ಹೆದರಿ ನಂಬರ್‌ ಬ್ಲಾಕ್‌ ಮಾಡಿಕೊಂಡಿದ್ದಳು. ಇದರಿಂದ ತಾನು ಕೆಲಸ ತೊರೆದಿದ್ದಾಗಿ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದರು.

ಪ್ರಜ್ವಲ್‌ ರೇವಣ್ಣ ನಡೆಸಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಹಾಗೆ ಲೈಂಗಿಕ ದೌರ್ಜನ್ಯಕ್ಕೊಳಗಾದ ಒಬ್ಬ ಮಹಿಳೆ ತನ್ನೊಂದಿಗೆ ಕೆಲಸ ಮಾಡುತ್ತಿದ್ದರು. ಆಕೆಯೊಂದಿಗೆ ಪ್ರಜ್ವಲ್‌ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯದ ವಿಡಿಯೋ ನೋಡಿ ಭಯವಾಗಿದ್ದು, ತನ್ನ ಗಂಡ ಕೂಡ ತನ್ನ ಶೀಲ ಶಂಕಿಸುತ್ತಿದ್ದಾರೆ. ವಿಡಿಯೋ ಬಹಿರಂಗಗೊಂಡರೆ ಗತಿ ಏನು ಎಂದು ಆತಂಕ ವ್ಯಕ್ತಪಡಿಸಿದ್ದಳು. ಇದರಿಂದ ಮಾನಸಿಕ ಹಿಂಸೆ ಆಗಿದೆ ಎಂದು ಅಂದು ದೂರಿನಲ್ಲಿ ಮಹಿಳೆ ವಿವರಿಸಿದ್ದರು. ಜೀವ ಭಯ ಇರುವುದರಿಂದ ತಮಗೆ ಹಾಗೂ ತಮ್ಮ ಮಗಳ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಎಚ್‌ ಡಿ ರೇವಣ್ಣ ಹಾಗೂ ಪ್ರಜ್ವಲ್‌ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿದ್ದರು.

ವಿಷಯಗಳು: #news #peepalmedia
ರ

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version