ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

 ಬಿಕ್ಲು ಶಿವ ಹ*ತ್ಯೆ ಪ್ರಕರಣ​​​, ಜಾಮೀನು ಅರ್ಜಿ ವಜಾ ಮಾಡಿ ನ್ಯಾಯಾಲಯ ಆದೇಶ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ಮೀಡಿಯಾ, ರಾಜ್ಯ

• 1 ನಿಮಿಷದ ಓದು

 ಬಿಕ್ಲು ಶಿವ ಹ*ತ್ಯೆ ಪ್ರಕರಣ​​​, ಜಾಮೀನು ಅರ್ಜಿ ವಜಾ ಮಾಡಿ ನ್ಯಾಯಾಲಯ ಆದೇಶ

ಬೆಂಗಳೂರು : ರೌಡಿಶೀಟರ್​​​​​​ ಬಿಕ್ಲು ಶಿವ (Biklu shiva case) ಭೀಕರ ಹತ್ಯೆ ಪ್ರಕರಣದಲ್ಲಿ ಅರೆಸ್ಟ್​ ಆಗಿರುವ ಆರೋಪಿಗಳಿಗೆ ನ್ಯಾಯಾಲಯ ಶಾಕ್ ನೀಡಿದೆ. ಬಿಕ್ಲು ಶಿವ ಕೊಲೆ ಪ್ರಕರಣದ ಒಟ್ಟು 20 ಆರೋಪಿಗಳ ಪೈಕಿ A-1 ಆರೋಪಿ ಜಗದೀಶ್​ ಸೇರಿ 18 ಆರೋಪಿಗಳ ಬಂಧನ ಈಗಾಗಲೇ ಆಗಿದ್ದು, ಹದಿನೆಂಟು ಆರೋಪಿತರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.

ಬಂಧಿತ 18 ಆರೋಪಿಗಳು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಇಂದು ವಿಚಾರಣೆ ನಡೆಸಿರುವ 42 ಎಸಿಎಂಎಂ ಕೋರ್ಟ್​​​​​​ ಈ ಆದೇಶವನ್ನು ನೀಡಿದೆ. ಚಾರ್ಜ್​​ಶೀಟ್​ ಪ್ರಕ್ರಿಯೆ ತಡವಾದ ಹಿನ್ನೆಲೆಯಲ್ಲಿ ಆರೋಪಿಗಳು ಡೀಫಾಲ್ಟ್ ಜಾಮೀನು ಕೋರಿದ್ದ ಅರ್ಜಿಯನ್ನು ಕೋರ್ಟ್​​​ ತಿರಸ್ಕರಿಸಿದೆ. ಇನ್ನು ಪ್ರಕರಣದ ಐದನೇ ಆರೋಪಿಯಾಗಿರುವ ಕೆ.ಆರ್.ಪುರಂನ ಬಿಜೆಪಿಯ ಶಾಸಕ ಬೈರತಿ ಬಸವರಾಜ್​​ಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

ಡಿ.23ರಂದು ಬೈರತಿ ಬಸವರಾಜ್​​​​​​​​​​​​​ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಶಾಸಕ ಬೈರತಿ ಬಸವರಾಜ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಇತ್ತೀಚೆಗೆ ವಜಾಗೊಳಿಸಿ ಮಹತ್ವದ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ನಾಪತ್ತೆಯಾಗಿರುವ ಬೈರತಿ ಬಸವರಾಜ ಅವರಿಗೆ ದೊಡ್ಡ ಸಂಕಷ್ಟ ಎದುರಾಗಿದ್ದು, ಅವರನ್ನು ಬಂಧಿಸಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಈ ಆದೇಶ ಹೊರಡಿಸಿದೆ. ತನಿಖೆಗೆ ಹಾಜರಾಗದೇ ನಾಮಪತ್ತೆಯಾಗಿರುವ ಬಸವರಾಜ್​ಗಾಗಿ ಸಿಐಡಿ ತಂಡವೂ ಶೋಧ ನಡೆಸುತ್ತಿದೆ.

ಬೆಳಗಾವಿಯಿಂದ್ಲೇ ಬೈರತಿ ಎಸ್ಕೇಪ್
ಬೆಳಗಾವಿಯಿಂದ ಬೈರತಿ ಬಸವರಾಜ್ ಎಸ್ಕೇಪ್​ ಆಗಿದ್ದಾರೆನ್ನಲಾಗುತ್ತಿದ್ದು, ಸಿಐಡಿ ಅಧಿಕಾರಿಗಳ ತಂಡ ಬೈರತಿ ಬಸವರಾಜ್ ಉಳಿದುಕೊಂಡಿದ್ದ ಜಾಗಕ್ಕೆ ಹೋಗಿ ಅಲ್ಲಿನ ಸಿಸಿಟಿವಿ, ಯಾವ ರಸ್ತೆಯ ಮೂಲಕ ಯಾವ ಕಡೆಗೆ ಹೋಗಿದ್ದಾರೆ ಅನ್ನೋದು ಸೇರಿದಂತೆ ಬೇರೆ ಬೇರೆ ಜಿಲ್ಲೆ ಮತ್ತು ರಾಜ್ಯಕ್ಕೆ ಕನೆಕ್ಟ್ ಆಗುವ ಟೋಲ್‌ಗಳ ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸಿದ್ದಾರೆ.

ಪುಣೆಯಲ್ಲಿ ತಲೆ ಮರೆಸಿಕೊಂಡಿರೋ ಮಾಹಿತಿ

ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಇಡೀ ರಾಜಧಾನಿಯನ್ನೇ ಬೆಚ್ಚಿಬೀಳಿಸಿತ್ತು. ಜುಲೈ 15ರಂದು ಹಲಸೂರಿನ ಭಾರತಿನಗರದ ಮೀನಿ ಅವೆನ್ಯೂ ರಸ್ತೆಯ ಶಿವನ ಮನೆ ಬಳಿಯೇ 12 ಜನರ ಗುಂಪು ರಕ್ತದೋಕುಳಿ ಹರಿಸಿತ್ತು. ಪ್ರಮುಖ ಆರೋಪಿ ಜಗದೀಶ್ ಅಲಿಯಾಸ್ ಜಗ್ಗ ಕೂಡ ಕಂಬಿ ಎಣಿಸುತ್ತಿದ್ದಾನೆ. ಇದೇ ಕೊಲೆ ಕೇಸ್​ನಲ್ಲಿ ಬೈರತಿ ಬಸವರಾಜ್ ಹೆಸರು ಕೂಡ ಕೇಳಿ ಬಂದಿತ್ತು. ಇತ್ತೀಚೆಗೆ ಮಧ್ಯಂತರ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದ ಭೈರತಿ ಬಸವರಾಜ್ ಅರ್ಜಿ ರಿಜೆಕ್ಟ್ ಆಗಿತ್ತು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು